ತುಮಕೂರು

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಕೆ.ಮಂಜುಗೆ ಜಾಮೀನು

Published On :

ತುರುವೇಕೆರೆ: ತಾಲೂಕಿನ ಜನರಿಗೆ ತಿರುಪತಿ ವೆಂಕಟರಮಣ ದೇವರ ಕಲ್ಯಾಣೋತ್ಸವವನ್ನು ತೋರಿಸುವ ಸಲುವಾಗಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪದಡಿ ಚಲನಚಿತ್ರ ನಿರ್ಮಾಪಕ ಕೆ.ಮಂಜು ಅವರ ವಿರುಧ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಮಂಜು ಅವರು ನ್ಯಾಯಾಲಯಕ್ಕೆ ಹಾಜರಾಗದೇ ಇದ್ದ ಕಾರಣ ವಾರಂಟ್ ಸಹ ಹೊರಡಿಸಲಾಗಿತ್ತು. ಸೋಮವಾರ ಖುದ್ದಾಗಿ ಸ್ಥಳೀಯ ಹಿರಿಯ ಸಿವಿಲ್ ನ್ಯಾಯಾಧೀಶರ ಮುಂದೆ ಹಾಜರಾಗಿದ್ದ ಕೆ.ಮಂಜುರವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.  ವೆಂಕಟೇಶ್ವರ ಕಲ್ಯಾಣ ಮಹೋತ್ಸವ ಸಮಾರಂಭದಲ್ಲಿ ರಾತ್ರಿ 10 ರವರೆಗೆ ಮಾತ್ರ ಸಮಾರಂಭ ನಡೆಸಬೇಕೆಂದು ಹಾಗೂ ಧ್ವನಿವರ್ಧಕವನ್ನು ಬಳಸಬೇಕೆಂದೂ ಸೂಚನೆ ನೀಡಲಾಗಿತ್ತು. ಆದರೆ ಸೂಚನೆ ಮೀರಿಯೂ ಸಮಾರಂಭ ನಡೆಸಲಾಗಿತ್ತು ಎಂದು ಚುನಾವಣಾಧಿಕಾರಿಯಾಗಿದ್ದ ಕೃಷಿ ಇಲಾಖಾ ಸಹಾಯಕ ನಿರ್ದೇಶಕ ಲಿಂಗರಾಜಪ್ಪ ಕೆ.ಮಂಜುರವರ ವಿರುಧ್ದ ದೂರು ದಾಖಲು ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.