ತುಮಕೂರು

ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್ ವಿತರಣೆಯಲ್ಲಿ ಗೋಲ್ಮಾಲ್

Published On :

ಹುಳಿಯಾರು ರಾಜ್ಯದ ಸರ್ಕಾರಿ ಹಾಗೂ ಅನುದಾನ ಸಹಿತ ಶಾಲೆಗಳಲ್ಲಿನ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ದೊರಕಿಸುವ ನಿಟ್ಟಿನಲ್ಲಿ  ರಾಜ್ಯ ಸರ್ಕಾರ ಉಚಿತವಾಗಿ ಕಂಪ್ಯೂಟರ್ ವಿತರಣೆಯನ್ನು  ಮಾಡಿದೆ. ಆದರೆ ಉಚಿತಕಂಪ್ಯೂಟರ್ಗಳು ಎಲ್ಲಾ ಶಾಲೆಗಳಿಗೆ ಸಮರ್ಪಕವಾಗಿ ವಿತರಣೆಯಾಗಿಲ್ಲ, ಕಂಪ್ಯೂಟರ್ ವಿತರಣೆಯಲ್ಲಿ ಬಾರಿ ಗೋಲ್ಮಾಲ್ ನಡೆದಿದೆಯೆಂದು ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಆರೊಪಿಸಿದ್ದಾರೆ. ಹುಳಿಯಾರಿನ ಹೋಬಳಿಯ  ಶಾಲಾ-ಕಾಲೇಜುಗಳಿಗೆ ಬುಧವಾರ ಭೇಟಿ ನೀಡಿದ್ದ ಅವರು ಪಟ್ಟಣ ಪರಿವೀಕ್ಷಣಾ ಮಂದಿರದಲ್ಲಿ ಹೋಬಳಿಯ ಶಿಕ್ಷಕರೊಂದಿಗೆ ಶಾಲೆ ಹಾಗೂ ನೌಕರರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಮಾಧ್ಯಮದವರೊಂದಿಗೆ ಮಾತನಾಡಿದರು.
 ಅನೇಕ ಶಾಲೆಗಳಿಗೆ ಕಂಪ್ಯೂಟರ್ ಟೇಬಲ್, ಯುಪಿಎಸ್ ಮಾತ್ರ ನೀಡಿದ್ದು ಇತರೆ ಯಾವುದೇ ಸಾಧನಗಳು ಇಂದಿಗೂ ಸರಬರಾಜಾಗಿಲ್ಲ, ಅಲ್ಲದೆ ಶಾಲೆಗಳಿಗೆ ಕಂಪ್ಯೂಟರ್ ವಿತರಿಸುವ ಜವಾಬ್ದಾರಿಯನ್ನು ಹೊಂದಿ, ಸಮರ್ಪಕವಾಗಿ ಕಂಪ್ಯೂಟರ್ ವಿತರಣೆ ಮಾಡದ ಕಂಪನಿ, ಟೆಂಡರ್ದಾರರ ಮೇಲೆ ಹಾಗೂ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕಿದೆ. ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ದೊರೆಯುವಂತೆ ಮಾಡಬೇಕೆಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.