ತುಮಕೂರು

ಇಂದಿನಿಂದ ಪೌರಾಣಿಕ ನಾಟಕೋತ್ಸವ

Published On :

ಕ.ಪ್ರ. ವಾರ್ತೆ   ತುಮಕೂರು   ಜು.11
ತುಮಕೂರಿನ ರಂಗಕೀರ್ತನ ಸಂಪದ ಮಲ್ಲಸಂದ್ರ ವತಿಯಿಂದ ಜುಲೈ 12 ರಿಂದ 14 ರವರಗೆ ಡಾ.ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಪೌರಾಣಿಕ ನಾಟಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕಲಾಶ್ರೀ ಡಾ .ಲಕ್ಷ್ಮಣದಾಸ್ ತಿಳಿಸಿದ್ದಾರೆ.
ಡಾ.ಗುಬ್ಬಿ ವೀರಣ್ಣ ರಂಗಮಂದಿರದ ತಾಲೀಮು ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 12 ರಂದು ಸಂಜೆ 6.30ಕ್ಕೆ ನಾಟಕೋತ್ಸವವನ್ನು ತುಮಕೂರು ನಗರ ಶಾಸಕ ಡಾ.ರಫೀಕ್ ಅಹಮದ್
ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಪತ್ರಿಕೋದ್ಯಮಿ ಎಸ್. ನಾಗಣ್ಣ ವಹಿಸುವರು. ಉದ್ಯಮಿ ಹಾಗೂ ಕಲ್ಪತರು ಯುವಕ ಸಂಘದ ಅಧ್ಯಕ್ಷ ಶಿವಪ್ಪ, ಜ್ಞಾನಬುತ್ತಿ ಸತ್ಸಂಗ ಕೇಂದ್ರದ ಸ್ಥಾಪಕ ಪಿ.ಶಾಂತಿಲಾಲ್ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಅಪ್ಪಿನಕಟ್ಟೆ, ಹಿರಿಯ ಕಲಾವಿದ ತುಂಬಾಡಿ ಶ್ರೀನಿವಾಸ್ ಅವರಿಗೆ ರಂಗಗೌರವ ನೀಡಲಾಗುವುದು.
ಉದ್ಘಾಟನಾ ಕಾರ್ಯಕ್ರಮದ ನಂತರ ಬಳ್ಳಾರಿಯ ಶರಣೆಯರ ಕಲಾತಂಡ ಅಭಿನಯಿಸುವ ಭಕ್ತಿ ಪ್ರಧಾನ ನಾಟಕ ಹೇಮರೆಡ್ಡಿ ಮಲ್ಲಮ್ಮ ನಾಟಕ ಪ್ರದರ್ಶನಗೊಳ್ಳಲಿದೆ, ಜುಲೈ 13 ರ ಸಂಜೆ 6.30 ಕ್ಕೆ ಎರಡನೇ ದಿನದ ಕಾರ್ಯಕ್ರಮವನ್ನು ಪತ್ರಕರ್ತ ಗುಡಿಹಳ್ಳಿ ನಾಗರಾಜ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕವಿ ಎಲ್.ಎನ್. ಮುಕುಂದರಾಜ್  ವಹಿಸುವರು.
ಪತ್ರಕರ್ತರಾದ ರಾಜಶೇಖರ ಹತಗುಂದಿ, ಜಿ.ಇಂದ್ರಕುಮಾರ್, ಪ್ರಾಚೀನ ಕಾವ್ಯ ಪ್ರವಚನಕಾರ ಟಿ.ಮುರಳಿ ಕೃಷ್ಣಪ್ಪ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಹಿರಿಯ ರಂಗಭೂಮಿ ಕಲಾವಿದೆ  ಕೆ.ನಾಗರತ್ನಮ್ಮ, ಹೊಂಬಾಳೆ ಪ್ರತಿಭಾರಂಗದ ಸಂಗೀತ ನಿರ್ದೇಶಕ ಹೆಚ್. ಫಲ್ಗುಣ ಅವರಿಗೆ ರಂಗಗೌರವ ಸಲ್ಲಿಸಲಾಗುವುದು.
ಕಾರ್ಯಕ್ರಮದ ನಂತರ ನಾಟಕ ಕಲಾ ಮಿತ್ರ ಮಂಡಳಿಯ ಕಲಾವಿದರು ಪ್ರಸ್ತುತ ಪಡಿಸುವ ಕಂದಗಲ್ಲ ಹನುಮಂತರಾಯ ವಿರಚಿತ ರಕ್ತ ರಾತ್ರಿ ನಾಟಕ ಪ್ರದರ್ಶನಗೊಳ್ಳಲಿದೆ. ತೊಗಲು ಗೊಂಬೆಯಾಟದ ದಂತಕಥೆ ನಾಡೋಜ ಬೆಳಗಲ್ಲು ವೀರಣ್ಣ ಶಕುನಿಯ ಪಾತ್ರದಲ್ಲಿ , ನಾಡೋಜ ಸುಭದ್ರಮ್ಮ ಮನ್ಸೂರ್ ಅವರು ದ್ರೌಪದಿ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.
ಜುಲೈ 14 ರಂದು ಬೆಳಗ್ಗೆ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಸಿ.ವಿ.ಮಹದೇವಯ್ಯ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಜ್ಞಾನ ಬುತ್ತಿ ಸತ್ಸಂಗ ಕೇಂದ್ರದ ಅಧ್ಯಕ್ಷ ಸಿ.ಎಸ್.ಸೋಮಶೇಖರಗುಪ್ತ ವಹಿಸಲಿದ್ದಾರೆ. ಭೂಮಿ ಬಳಗದ ಅಧ್ಯಕ್ಷ ಜಿ.ಎಸ್. ಸೋಮಶೇಖರ್, ಜಿಲ್ಲಾ ಕಸಾಪ ಅಧ್ಯಕ್ಷ ಸೋ.ಮು. ಭಾಸ್ಕರಾಚಾರ್ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ವಿದ್ವಾನ್ ಎಂ.ಎಸ್. ನಾಗರಾಜಾಚಾರ್, ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಉಪಾಧ್ಯಕ್ಷ ಹಾಗೂ ಸಮಾಜ ಸೇವಕ ಹೆಚ್.ವಿ.ಪಾಂಡುರಂಗಶೆಟ್ಟಿ ಅವರಿಗೆ ರಂಗಗೌರವ ನೀಡಲಾಗುವುದು.
ಸಂಪೂರ್ಣ ರಾಮಾಯಣ ಪೌರಾಣಿಕ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಡಾ.ಲಕ್ಷಣದಾಸ್ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.