ಸುರಕ್ಷಿತ ಕೀಟ ನಾಶಕಗಳ ಬಳಕೆ ಅಗತ್ಯ: ಶ್ರೀನಿವಾಸ್ ರೆಡ್ಡಿ
ತಿಪಟೂರು: ರೈತರು ಮುನ್ನೆಚ್ಚರಿಕೆ ಕ್ರಮವಾಗಿ ಮೊದಲು ತಮ್ಮ ಬೆಳೆಗೆ ಬಾಧಿಸಿರುವ ರೋಗ ಅಥವಾ ಕೀಟವೇ ಎಂದು ತಿಳಿದುಕೊಂಡು ನಂತರ ಸೂಕ್ತ ಔಷಧಿಗಳನ್ನು ಆಯ್ಕೆ ಮಾಡಬೇಕು. ಸುರಕ್ಷತಿ ಕೀಟ ನಾಶಕ ಬಳಕೆಯನ್ನು ಮಾಡುವುದರಿಂದ ಉತ್ತಮ ಬೆಳೆಯನ್ನು ಬೆಳೆಯಲು ಸಾಧ್ಯವಾಗುತ್ತದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿ ಡಾ.ಕೆ.ಎಂ.ಶ್ರೀನಿವಾಸ್ ರೆಡ್ಡಿ ತಿಳಿಸಿದರು.
ತಾಲೂಕಿನ ಬಿದರೆಗುಡಿ ಕಾವಲ್ನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಭೂಚೇತನ ಯೋಜನೆಯಡಿ ಚಿಕ್ಕನಾಯಕನಹಳ್ಳಿ ತಾಲೂಕಿನ ರೈತ ಅನುವುಗಾರರಿಗೆ ಒಂದು ವಾರದ ತರಬೇತಿ ಕಾರ್ಯಕ್ರಮದಲ್ಲಿ ನಾಲ್ಕನೇ ದಿನದಂದು ಸುರಕ್ಷಿತ ಕೀಟ ನಾಶಕಗಳ ಬಳಕೆ ಕುರಿತು ಪದ್ಧತಿ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಿ ಮಾತನಾಡಿದ ಅವರು ರೈತರು ಸಿಂಪರಣ ದ್ರಾವಣವನ್ನು ಬೆಳೆಗಳಿಗೆ ಸಿಂಪಡಿಸುವಾಗ ಮುನ್ನೆಚ್ಚರಿಕೆ ಕ್ರಮವಾಗಿ ಕೈಗೆ ಗ್ಲೌಸ್, ಬಾಯಿ ಮತ್ತು ತಲೆಯನ್ನು ವಸ್ತ್ರದಿಂದ ಮುಚ್ಚಿಕೊಳ್ಳಬೇಕು. ನಂತರ ಸಿಂಪರಣೆಯಯನ್ನು ಗಾಳಿಯ ವಿರುದ್ಧ ದಿಕ್ಕಿನಲ್ಲಿ ಮಾಡಬಾರದು. ಸಿಂಪರಣೆಯ ಸಮಯದಲ್ಲಿ ಧೂಮಪಾನ ಮಾಡಬಾರದು.
ಕೈಗಳನ್ನು ಸೋಪಿನಿಂದ ತೊಳೆದುಕೊಳ್ಳಬೇಕು ಹಾಗೂ ಔಷಧಿಯ ಡಬ್ಬಗಳನ್ನು ಮಕ್ಕಳಿಗೆ ಸಿಗದಂತೆ ಎಚ್ಚರವಹಿಸಬೇಕು ಮತ್ತು ಖಾಲಿ ಡಬ್ಬಗಳನ್ನು ಮಣ್ಣಿನಲ್ಲಿ ಮುಚ್ಚಬೇಕೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

