ಕ್ಯಾರಿ ಓವರ್ ಮುಂದುವರಿಕೆಗೆ ಆಗ್ರಹ
ಕ.ಪ್ರ.ವಾರ್ತೆ ತುಮಕೂರು ಜು.17
ಪ್ರತಿ ವರ್ಷದಂತೆ ಈ ವರ್ಷವೂ ಡಿಪ್ಲಮೋ ವಿದ್ಯಾರ್ಥಿಗಳಿಗೆ ಕ್ಯಾರಿ ಓವರ್ ಪದ್ಧತಿ ಮುಂದುವರೆಸುವಂತೆ ಆಗ್ರಹಿಸಿ ಕನ್ನಡ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಇ. ರಘುರಾಮ್ ನೇತೃತ್ವದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆ ಮೂಲಕ ತೆರಳಿ ಮನವಿ ಸಲ್ಲಿಸಲಾಯಿತು.
ನಗರದ ಡಿಪ್ಲೊಮೊ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಕಾಲೇಜು ಬಹಿಷ್ಕರಿಸಿ ಕ್ಯಾರಿ ಓವರ್ ಪದ್ಧತಿ ಮುಂದುವರೆಸುವಂತೆ ಆಗ್ರಹಿಸಿದರು.
ನಗರದ ವಿವಿಧ ಕಾಲೇಜುಗಳಿಂದ ಸಾವಿರಾರು ವಿದ್ಯಾರ್ಥಿಗಳು ಟೌನ್ಹಾಲ್ ಸರ್ಕಲ್, ಎಂ.ಜಿ. ರಸ್ತೆ, ಗುಂಚಿ ಸರ್ಕಲ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆಯಲ್ಲಿ ಆಗಮಿಸಿ ಮನವಿ ಪತ್ರ ಸಲ್ಲಿಸಿದರು. ತಾಂತ್ರಿಕ ಶಿಕ್ಷಣ ಮಂಡಳಿಯ ಅವೈಜ್ಞಾನಿಕ ವೇಳಾಪಟ್ಟಿ, ವಿಧಾನಸಭಾ ಚುನಾವಣೆ ನಂತರ ನಡೆಯಬೇಕಾಗಿದ್ದ ಪರೀಕ್ಷೆಗಳು, ಅವಧಿಗೂ ಮುನ್ನವೇ ಪರೀಕ್ಷೆಗಳನ್ನು ನಡೆಸಿದ್ದರಿಂದ ವಿದ್ಯಾರ್ಥಿಗಳಲ್ಲಿ ಗೊಂದಲ ಹಾಗೂ ಒತ್ತಡದ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರಿಂದ ಉತ್ತಮ ಅಂಕ ಗಳಿಸುವಲ್ಲಿ ವಿಫಲರಾಗಿದ್ದಾರೆ ಎಂದಿದ್ದಾರೆ.
8 ವಿಷಯಕ್ಕೆ ಸೀಮಿತ: ಹಿಂದಿನ ವರ್ಷ ಕ್ಯಾರಿ ಓವರ್ ಪದ್ಧತಿಯನ್ನು ತಾಂತ್ರಿಕ ಮಂಡಳಿಯೂ 8 ವಿಷಯಕ್ಕೆ ಸೀಮಿತಗೊಳಿಸಿತ್ತು. ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲು ಹತ್ತಿದಾಗ ಕೋರ್ಟ್ ಇದನ್ನು ಪರಿಗಣಿಸಿ ಒಂದು ತಿಂಗಳ ನಂತರ 8 ರ ಜತೆಗೆ ಮತ್ತೆರೆಡು ಸೇರಿಸಿ ಒಟ್ಟು 10 ವಿಷಯಗಳಿಗೆ ಕ್ಯಾರಿ-ಓವರ್ ಪದ್ಧತಿ ಜಾರಿಗೊಳಿಸುವಂತೆ ಆಗ್ರಹಿಸಿತ್ತು. ಇದರ ಅನ್ವಯ ವಿದ್ಯಾರ್ಥಿಗಳ ತಡವಾಗಿ ಕಾಲೇಜುಗಳಿಗೆ ಪ್ರವೇಶ ಪಡೆದಿದ್ದರಿಂದ ಸೂಕ್ತ ಪಾಠ ಪ್ರವಚನ ಪಡೆಯಲು ಸಾಧ್ಯವಾಗಿರಲಿಲ್ಲ ಎಂದಿದ್ದಾರೆ.
ಇದೆಲ್ಲಾ ಅಂಶಗಳು ವಿದ್ಯಾರ್ಥಿಗಳ ಓದಿಗೆ ತೊಡಕು ಉಂಟಾಗಿದ್ದರಿಂದ ಡಿಪ್ಲೊಮೊ ಕೋರ್ಸ್ನಲ್ಲಿ ಕೆಲ ವಿಷಯಗಳಲ್ಲಿ ತೇರ್ಗಡೆ ಹೊಂದಲು ಸಾಧ್ಯವಾಗಿಲ್ಲ. ಇಂತಹ ಸಂದರ್ಭದಲ್ಲಿ ತಾಂತ್ರಿಕ ಶಿಕ್ಷಣ ಮಂಡಳಿಯು ಕ್ಯಾರಿ ಓವರ್ ಪದ್ಧತಿ ಮತ್ತೆ ಮುಂದುವರೆಸುವಂತೆ ಆಗ್ರಹಿಸಿದ್ದಾರೆ.
ಡಿಪ್ಲೊಮೊ ಶಿಕ್ಷಣ ಪಡೆಯುವಲ್ಲಿ ಗ್ರಾಮೀಣ ಬಡ, ದುರ್ಬಲ ವರ್ಗ, ಮತ್ತು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಹೆಚ್ಚಾಗಿದ್ದಾರೆ. ವಿದ್ಯಾರ್ಥಿಗಳಿಗೆ ಬೋಧನ ಕೊರತೆ, ಪಠ್ಯ ಪುಸ್ತಕ ಕೊರತೆ, ಪ್ರಯೋಗ ಶಾಲೆ, ಶಿಕ್ಷಕರ ಕೊರತೆ ಹಾಗೂ ಭಾಷಾ ಸಮಸ್ಯೆಗಳ ನಡುವೆ ಅಧ್ಯಯನ ಮಾಡಬೇಕಾದ ಪರಿಸ್ಥಿತಿ ಇದೆ ಎಂದಿದ್ದಾರೆ.
ಫಲಿತಾಂಶ ಇಳಿಮುಖ: ಇಂತಹ ವಿದ್ಯಾರ್ಥಿಗಳಿಗೆ ಒಂದೇ ದಿನದಲ್ಲಿ ಎರಡು ಪರೀಕ್ಷೆ ಬರೆಯುವ ಪರಿಸ್ಥಿತಿಯಿದ್ದು ಇದರ ಜತೆಗೆ ಯಾವುದೇ ಬಿಡುವು ನೀಡದೇ ಪ್ರತಿ ದಿನ ಪರೀಕ್ಷೆ ಬರೆಯಬೇಕಾಗಿದೆ. ಅಲ್ಪಾವಧಿ ಸಿದ್ಧತೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರಿಂದ ಫಲಿತಾಂಶ ಇಳಿಮುಖವಾಗುತ್ತಿರುವುದರಿಂದ ಕ್ಯಾರಿ ಓವರ್ ಪದ್ಧತಿ ಅನಿವಾರ್ಯವಾಗಿದೆ ಎಂದು ಕನ್ನಡ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಇ. ರಘುರಾಮ್, ಪ್ರಧಾನ ಕಾರ್ಯದರ್ಶಿ ಜಿ.ಟಿ. ಎಲ್ಲೇಶ್ಗೌಡ, ಜಿಲ್ಲಾ ಉಪಾಧ್ಯಕ್ಷ ನಸೀರ್ ಅಹಮದ್, ಜಿಲ್ಲಾ ಕಾರ್ಯದರ್ಶಿ ಎ. ಮಹಾಲಿಂಗಯ್ಯ, ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಸಂತೋಷ್ ಕಬ್ಬಿಗೆರೆ ಮತ್ತು ವಕ್ತಾರ ಪ್ರಕಾಶ್, ವಿದ್ಯಾರ್ಥಿ ಘಟಕದ ಅಮೂಲ್ಯ, ನೇತ್ರಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

