ತುಮಕೂರು

ಕ್ಯಾರಿ ಓವರ್ ಪದ್ಧತಿ ನೀಡಲು ಆಗ್ರಹ

Published On :

ಕ.ಪ್ರ.ವಾರ್ತೆ   ತುಮಕೂರು   ಜು.18
ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಹಿಂದಿನ ವರ್ಷದಂತೆ 10 ವಿಷಯಗಳಿಗೆ ಕ್ಯಾರಿ ಓವರ್ ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತು.
ಪ್ರತಿ ವರ್ಷವೂ ಒಂದೊಂದು ರೀತಿಯ ನಿರ್ಧಾರ ತೆಗೆದುಕೊಂಡು ವಿದ್ಯಾರ್ಥಿಗಳನ್ನು ಗೊಂದಲಕ್ಕೆ ಈಡು ಮಾಡಿದೆ. ಹಾಗಾಗಿ ವಿದ್ಯಾರ್ಥಿಸ್ನೇಹಿ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಅವೈಜ್ಞಾನಿಕ ರೀತಿಯ ಪರೀಕ್ಷಾ ಪದ್ಧತಿ ಬಿಟ್ಟು ದಿನಕ್ಕೆ ಒಂದು ವಿಷಯಕ್ಕೆ ಮಾತ್ರ ಪರೀಕ್ಷೆ ನಡೆಸಬೇಕು. ಇದರಿಂದ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುತ್ತದೆ. ಇಲ್ಲದಿದ್ದಲ್ಲಿ ಒಂದೇ ದಿನ ಬೆಳಗ್ಗೆ ಮಧ್ಯಾಹ್ನ ಎರಡೆರಡು ಪರೀಕ್ಷೆ ಬರೆಯುವ ಒತ್ತಡದಲ್ಲಿ ವಿದ್ಯಾರ್ಥಿಗಳು ಹೆಚ್ಚು ವಿಷಯಗಳಲ್ಲಿ ಅನುತ್ತೀರ್ಣರಾಗಿರುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಹೀಗಾಗಿ ಈ ಪದ್ಧತಿಯ ಸಾಧಕ- ಬಾಧಕ ಪರಿಶೀಲಿಸಿ ದಿನಕ್ಕೆ ಒಂದು ವಿಷಯಕ್ಕೆ ಮಾತ್ರ ಪರೀಕ್ಷೆ ನಡೆಸಬೇಕು. ಡಿಪ್ಲೊಮಾ ಕಾಲೇಜುಗಳಲ್ಲಿ ಮೂಲ ಸೌಲಭ್ಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಕೂಡಲೇ ಈ ವಿಷಯವಾಗಿ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದಿದ್ದಾರೆ.
ಅಲ್ಲದೆ, ಪ್ರತಿಭಟನೆ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮತ್ತು ತಾಂತ್ರಿಕ ಶಿಕ್ಷಣ ಮಂಡಳಿಗೆ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ನೀಡಲಾಯಿತು.
ಈ ಸಂದರ್ಭದಲ್ಲಿ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಏಕಾಂತ್, ಜಿಲ್ಲಾ ಉಸ್ತುವಾರಿ ಟಿ.ಎಂ. ಮಹೇಶ್ ಕುಮಾರ್, ನಗರಾಧ್ಯಕ್ಷ ಮುರಳಿಪ್ರಸಾದ್, ಗಂಗಾಧರಮೂರ್ತಿ, ಚಿನ್ಮಯ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.