ಬಡವರ ಅನ್ನಕ್ಕೆ ಸಂಚಕಾರ ತಂದರೆ ಮೊಕದ್ದಮೆ: ರಾಜಣ್ಣ
ಕ.ಪ್ರ. ವಾರ್ತೆ ಮಧುಗಿರಿ ಜು.18
ಸರ್ಕಾರದ ಮಹಾತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆ ಬಡ ಜನರು ಸ್ವಾಭಿಮಾನದ ಬದುಕು ಸಾಗಿಸಲು ವರದಾನ ಎಂದು ಶಾಸಕ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟರು.
ಬುಧವಾರ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ನಡೆದ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಆದ ನಂತರ ಬಿಪಿಎಲ್ ಕಾರ್ಡ್ ಹೊಂದಿರುವ ಬಡ ಜನರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಂದ 1ಕ್ಕೆ 1 ಕೆಜಿ ಅಕ್ಕಿ ಪ್ರತಿ ಕುಟುಂಬಕ್ಕೆ ತಿಂಗಳಿಗೆ 30 ಕೆಜಿ ಅಕ್ಕಿ ವಿತರಿಸಲು ಮೊದಲು ತೀರ್ಮಾನಿಸಿದ ಯೋಜನೆ ಇದಾಗಿದ್ದು, ಈ ಮೂಲಕ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿಗಳು ಈಡೇರಿಸಿದ್ದು, ಇದರಿಂದ ಕಾಂಗ್ರೆಸ್ ಸರ್ಕಾರ ಬಡ ಜನರ ಅಭ್ಯುದಯಕ್ಕೆ ಬದ್ಧವಾಗಿದೆ ಎಂಬುದನ್ನು ಸಾಬೀತುಗೊಳಿಸಿದೆ ಎಂದರು.
ಉಳ್ಳವರು ಸುಳ್ಳು ಪ್ರಮಾಣ ಪತ್ರ ನೀಡಿ ಬಿಪಿಎಲ್ ಕಾರ್ಡ ಪಡೆದು ಬಡವರ ಅನ್ನಕ್ಕೆ ಸಂಚಕಾರ ತಂದರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಜೈಲಿಗೆ ಕಳಿಸುವುದಾಗಿ ಎಚ್ಚರಿಕೆ ನೀಡಿದರು. ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಬಾರದು. ಉಳ್ಳವರು ಬಿಪಿಎಲ್ ಕಾರ್ಡ್ ಪಡೆದಿದ್ದರೆ ಅಧಿಕಾರಿಗಳಿಂದ ತಪಾಸಣೆ ನಡೆಸಿ ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಖಚಿತ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಉಪವಿಭಾಗಾಧಿಕಾರಿ ಸಿ. ಅನಿತಾ ಮಾತನಾಡಿ, ಸರ್ಕಾರದ ಈ ಯೋಜನೆ ಯಶಸ್ವಿಯಾಗಲು ಸಾರ್ವಜನಿಕರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರ ಸಮನ್ವಯತೆ ಕಾಪಾಡಿಕೊಂಡು ಯೋಜನೆ ಯಶಸ್ವಿಗೆ ಶ್ರಮಿಸಬೇಕು ಎಂದರು.
ತಾಪಂ ಅಧ್ಯಕ್ಷೆ ಯಶೋಧ ರಾಜಣ್ಣ, ಉಪಾಧ್ಯಕ್ಷೆ ಸಿದ್ದಗಂಗಾಂಬಿಕೆ, ಜಿಪಂ ಸದಸ್ಯ ಸುಮನಾ, ಮಂಜುಳಾ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಎಸ್. ಮಲ್ಲಿಕಾರ್ಜುನಯ್ಯ, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಡಿ.ಜಿ. ಶಂಕರನಾರಾಯಣಶಟ್ಟಿ, ತಹಸೀಲ್ದಾರ್ ರಮೇಶ್, ಪುರಸಭೆ ಸದಸ್ಯ ಎನ್.ಗಂಗಣ್ಣ, ಜುಬೇಧ, ಅಲೀಮ್,ಶ್ರೀನಿವಾಸಮೂರ್ತಿ, ಗುತ್ತಿಗೆದಾರ ದ್ವಾರಕನಾಥ್, ಮುಖಂಡ ಎಂ.ಜಿ. ಶ್ರೀನಿವಾಸಮೂರ್ತಿ, ರಾಮಣ್ಣ,ನ್ಯಾಯಬೆಲೆ ಅಂಗಡಿ ಮಾಲೀಕ ಸಿಡದರಗಲ್ಲು ನಾಗೂಷಣ್, ಆಹಾರ ನಿರೀಕ್ಷಕ ಶಂಕರಪ್ಪ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

