ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿ: ಪ್ರೇಮಾ
ಕ.ಪ್ರ.ವಾರ್ತೆ ತುಮಕೂರು ಜು.18
ಬಡತನ ರೇಖೆಗಿಂತ ಕೆಳಗಿರುವ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿ ಕೆಲಸ ನಿರ್ವಹಿಸುವಂತೆ ಜಿಪಂ ಅಧ್ಯಕ್ಷೆ ಪ್ರೇಮಾ ಮಹಾಲಿಂಗಪ್ಪ ಕರೆ ನೀಡಿದರು.
ಇಲ್ಲಿನ ಜಿಪಂ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ವಾರ್ಡನ್ಗಳ, ನಿಲಯ ಮೇಲ್ವಿಚಾರಕರು ಹಾಗೂ ಅಧಿಕಾರಿ ವರ್ಗದವರಿಗೆ ಬಯೋವುಟ್ರಿಕ್ ಹಾಜರಾಗಿ ನಿರ್ವಹಣೆಯ ಬಗ್ಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಜಿಪಂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ವೈ.ಎಚ್. ಹುಚ್ಚಯ್ಯ ಮಾತನಾಡಿ, ನಿಲಯದ ಸಮರ್ಪಕ ನಿರ್ವಹಣೆಗೆ ಒತ್ತು ಕೊಟ್ಟು ಕೆಲಸ ನಿರ್ವಹಿಸುವಂತೆ ಕರೆ ನೀಡಿದರು.
ಸಮನ್ವಯಾಧಿಕಾರಿ ಶಾಂತಪ್ಪ ಮಾತನಾಡಿ, ಬಯೋವುಟ್ರಿಕ್ ಯಂತ್ರ ಯಾವುದೇ ಒತ್ತಡದ ಪರಿಸ್ಥಿತಿ ನಿಯಂತ್ರಿಸಿ ಸರಳವಾಗಿ ಕೆಲಸ ನಿರ್ವಹಿಸಲು ಸಹಾಯ ಮಾಡುತ್ತದೆ. ಪ್ರಸಕ್ತ ಆಯವ್ಯಯದಲ್ಲಿ ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಹೆಚ್ಚಿನ ಅನುದಾನವನ್ನು ಸರ್ಕಾರ ಒದಗಿಸಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್ ಅವರು ಬಯೋವುಟ್ರಿಕ್ ಯಂತ್ರ ಉಪಯೋಗಿಸುವ ಬಗ್ಗೆ ಸೂಕ್ತ ಮಾಹಿತಿ ಮತ್ತು ಮನವರಿಕೆ ಮಾಡಿಕೊಟ್ಟರು. ಬಯೋವುಟ್ರಿಕ್ ಯಂತ್ರದ ಪ್ರಾಯೋಗಿಕ ಪ್ರಾತ್ಯಕ್ಷಿಕೆಯನ್ನು ಮನೋಹರ್ ಬಿಡುಗಡೆ ಮಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸಿ.ಟಿ. ಮುದ್ದುಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಿವಮೂರ್ತಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

