ತುಮಕೂರು

ತಮಿಳು ಕಾಲೋನಿಯಲ್ಲಿ ನೀರಿಗೆ ಹಾಹಾಕಾರ: ನಗರಸಭೆ ವಿರುದ್ಧ ಧರಣಿ

Published On :

ತಿಪಟೂರು: ನಗರಸಭೆಯ ವ್ಯಾಪ್ತಿಯಲ್ಲಿರುವ 29ನೇ ವಾರ್ಡ್ನ ತಮಿಳು ಕಾಲೋನಿ ಬಡಾವಣೆಯು ನಗರಸಭೆಯ ದಿವ್ಯ ನಿರ್ಲಕ್ಷ್ಯದಿಂದ ಮೂಲಭೂತ ಸೌಕರ್ಯಗಳಿಲ್ಲದೆ ವಂಚಿತವಾಗಿದೆ ಎಂದು ಇಲ್ಲಿನ ನಿವಾಸಿಗಳು ನಗರಸಭೆ ವಿರುದ್ಧ ಕಿಡಿಕಾರಿದ್ದಾರೆ.
ಈ ವಾರ್ಡ್ನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು, ಸಮರ್ಪಕ ರಸ್ತೆ, ಚರಂಡಿ ವ್ಯವಸ್ಥೆ ಸೇರಿದಂತೆ  ಕುಡಿಯುವ ನೀರಿನ ಸಮಸ್ಯೆ ಹೇಳತೀರದಾಗಿದೆ. ವಾರ್ಡ್ನ ಎರಡು ಕೊಳವೆ ಬಾವಿಗಳಲ್ಲಿಯೂ ನೀರು ಬತ್ತಿಹೋಗಿದ್ದು, ಇದರಿಂದ ಜನತೆಯು ಕುಡಿಯುವ ನೀರಿಗಾಗಾಗಿ ತೀವ್ರ ಹಾಹಾಕಾರ ಪಡುವಂತಾಗಿದೆ.
ವಾರ್ಡ್ಗೆ ಟ್ಯಾಂಕರ್ ನೀರಿನ ವ್ಯವಸ್ಥೆಯನ್ನೂ ಕಲ್ಪಿಸದೇ ಅಧಿಕಾರಿಗಳು ನಿರ್ಲಕ್ಷ್ಯಿಸುತ್ತಿದ್ದಾರೆ. ವಾರ್ಡ್ನ 8ನೇ ಕ್ರಾಸ್ ರಸ್ತೆಗಳಲ್ಲಿ ಪೈಪ್ ಲೈನ್ ಸಂಪರ್ಕ ಇಲ್ಲದಿರುವುದು ವಿಪರ್ಯಾಸದ ಸಂಗತಿ. ಬರಪರಿಹಾರ ಕಾಮಗಾರಿ ಯೋಜನೆಯಲ್ಲಿ ಇತರೆ ವಾರ್ಡ್ಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಿ, 29ನೇ ವಾರ್ಡ್ನ್ನು ಕಡೆಗಣಿಸಿರುವುದು ಇಲ್ಲಿನ ನಿವಾಸಿಗಳ ಮತ್ತಷ್ಟು ಆಕ್ರೋಶಕ್ಕೆ  ಕಾರಣವಾಗಿದೆ.
ಈ ಬಗ್ಗೆ ನಗರಸಭೆಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ನಗರಸಭಾ ಸದಸ್ಯರ ಮನವಿಗೂ ಇಲ್ಲಿ ಬೆಲೆ ಇಲ್ಲದಂತಾಗಿದೆ. ತಕ್ಷಣ ವಾರ್ಡ್ನ ಸಮಸ್ಯೆಯನ್ನು ಅಧಿಕಾರಿಗಳು ಬಗೆಹರಿಸದಿದ್ದರೆ ನಗರಸಭಾ ಕಚೇರಿ ಎದುರು ವಾರ್ಡ್ನ ಜನರೊಂದಿಗೆ ಧರಣಿ ಹಮ್ಮಿಕೊಳ್ಳುವುದಾಗಿ ನಗರಸಭಾ ಸದಸ್ಯ ಲೋಕೇಶ್ ಎಚ್ಚರಿಕೆ ನೀಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.