ಮಿಡಿಗೇಶಿಗೆ ಪ್ರಥಮ ದರ್ಜೆ ಕಾಲೇಜು: ಶಾಸಕ ರಾಜಣ್ಣ
ಕ.ಪ್ರ. ವಾರ್ತೆ ಮಧುಗಿರಿ ಜು.19
ಮಧುಗಿರಿ ತಾಲೂಕಿನ ಮಿಡಿಗೇಶಿಗೆ ಪ್ರಥಮ ದರ್ಜೆ ಕಾಲೇಜು, ಪಟ್ಟಣಕ್ಕೆ ಮಹಿಳಾ ಪದವಿ ಪೂರ್ವ ಕಾಲೇಜು, ದೊಡ್ಡೇರಿ ಹೋಬಳಿ ಸೋದೇನಹಳ್ಳಿ ಮತ್ತು ಕಡಗತ್ತೂರು ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ಶಾಸಕ ಕೆ.ಎನ್. ರಾಜಣ್ಣ ವಿದೇಶಿ ಪ್ರವಾಸ ಮುಗಿಸಿ ಬುಧವಾರ ಮಧುಗಿರಿ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ಇಲ್ಲಿನ ಇತಿಹಾಸ ಪ್ರಸಿದ್ಧ ದಂಡಿನಮಾರಮ್ಮ ದೇವಸ್ಥಾನದ ಬಳಿ ಅಭಿಮಾನಿ ಬಳಗ ಸುತ್ತುವರಿದು ತಾವೂ ವಿದೇಶಿ ಪ್ರವಾಸ ಮುಗಿಸಿ ವಾಪಸು ಬರುವುದರ ಒಳಗಾಗಿ ಪಟ್ಟಣದ ಪ್ರಮುಖ ರಸ್ತೆಗಳಿಗೆ ಡಾಂಬರು ಹಾಕುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕೆಲಸವಾಗಿದೆ ಎಂದು ಯುವಕರು ಹೂವು ನೀಡಿ ಶುಭ ಕೋರಿದರು.
ನಂತರ ಮಾತನಾಡಿದ ಕೆ.ಎನ್.ರಾಜಣ್ಣ ಮಧುಗಿರಿ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸವಾಗಬೇಕಿದೆ. ಕ್ಷೇತ್ರದ ಜನತೆ ನನ್ನ ಮೇಲೆ ಪ್ರೀತಿ, ವಿಶ್ವಾಸವಿಟ್ಟು ಗೆಲ್ಲಿಸಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಆ ಕಾರಣದಿಂದಾಗಿ ತಮ್ಮ ಋಣ ತೀರಿಸಲು ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದ ಅವರು ಈಗಾಗಲೇ ಮಧುಗಿರಿಗೆ ಎಆರ್ಟಿಓ ಕಚೇರಿ ಮಂಜೂರಾಗಿದ್ದು ಮುಂದಿನ ದಿನಗಳಲ್ಲಿ ಪ್ರಾರಂಭ ಮಾಡುವುದಾಗಿ ಭರವಸೆ ನೀಡಿದರು.
ಮಧುಗಿರಿ ಪಟ್ಟಣದ ಜನತೆಗೆ ಶುದ್ಧ ಕುಡಿವ ನೀರು ಕೊಡಲು ಪ್ರಮಾಣಿಕವಾಗಿ ಶ್ರಮಿಸುತ್ತೇನೆ. ಹೇಮಾವತಿ ನೀರು ಕೂಡ ಸಮೀಪದ ಸಿದ್ದಾಪುರ ಕೆರೆಗೆ ಅತಿ ಶೀಘ್ರದಲ್ಲೇ ಹರಿಯಲಿದ್ದು ಪುರಸಭೆ ಕಟ್ಟಬೇಕಾದ ವಿದ್ಯುತ್ ಬಿಲ್ ಬಾಕಿ ಇದ್ದರೂ ಚಿಂತೆಯಿಲ್ಲ, ನೀರು ಪಂಪ್ ಮಾಡಿಸಿ ಜನತೆಗೆ ಅನುಕೂಲ ಮಾಡುವುದಾಗಿ ರಾಜಣ್ಣ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

