ತುಮಕೂರು

ಐಟಿ ದಾಳಿ ವಿರೋಧಿಸಿ ಪಂಜಿನ ಮೆರವಣಿಗೆ

Published On :

ತುರುವೇಕೆರೆ: ಒಕ್ಕಲಿಗ ಜನಾಂಗದ ಏಕೈಕ ಮಠವಾದ ಆದಿಚುಂಚನಗಿರಿ ಮಠದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿರುವುದನ್ನು ಖಂಡಿಸಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕಡೇಹಳ್ಳಿ ಸಿದ್ದೇಗೌಡರ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ಮಾಡಲಾಯಿತು. ಪಟ್ಟಣದಲ್ಲಿ ಶನಿವಾರ ಸಾಯಂಕಾಲ ಪ್ರತಿಭಟನೆ ಮಾಡಿದ ಜನಾಂಗದ ಮುಖಂಡರು, ದಾಳಿ ದುರುದ್ದೇಶವಾಗಿದೆ. ಬೇರ್ಯಾವುದೇ ಮಠಗಳ ಮೇಲೆ ದಾಳಿ ಮಾಡದ ಅಧಿಕಾರಿಗಳು ಒಕ್ಕಲಿಗರ ಸ್ವಾಭಿಮಾನದ ಸಂಕೇತವಾಗಿರುವ ಮಠದ ಮೇಲೆ ದಾಳಿ ಮಾಡಿರುವುದು ಖಂಡನೀಯ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದುರುದ್ದೇಶದಿಂದ ಮಠದ ಮೇಲೆ ದಾಳಿ ನಡೆಸುವ ಕುತಂತ್ರ ಮಾಡಿದೆ ಎಂದು ದೂರಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.
ತಾಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀಕಾಂತ್, ಎಪಿಎಂಸಿ ಅಧ್ಯಕ್ಷ ಕೊಂಡಜ್ಜಿ ವಿಶ್ವನಾಥ್, ಮಾಜಿ ಅಧ್ಯಕ್ಷ ಕೋಳಾಲ ನಾಗರಾಜು, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್. ಮಲ್ಲಿಕಾರ್ಜುನ್, ಗುಡ್ಡೇನಹಳ್ಳಿ ಮಹಲಿಂಗಪ್ಪ ಭಾಗವಹಿಸಿದ್ದರು. ತಹಸೀಲ್ದಾರ್ ಜಿ.ಪಿ.ಮಂಜೇಗೌಡರಿಗೆ ಮನವಿ ಪತ್ರ ಸಲ್ಲಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.