ವಿದ್ಯಾರ್ಥಿಗಳಿಗೆ ಸನ್ಮಾನ
ಕೊರಟಗೆರೆ: ತಾಲೂಕಿನ ಸಿದ್ದರ ಬೆಟ್ಟ ರಂಭಾಪುರಿ ಖಾಸಾ ಶಾಖಾ ಮಠದಲ್ಲಿ ಇದೇ 22 ರಂದು 77ನೇ ಬೆಳದಿಂಗಳ ಕೂಟದ ಅಂಗವಾಗಿ ಧರ್ಮ ಹಾಗೂ ಜನ ಜಾಗೃತಿ ಶಿಬಿರ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ಖಾಸಾ ಶಾಖಾ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರು ವಹಿಸಲಿದ್ದಾರೆ.ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ವಿಚಾರವಾಗಿ ಚೆನಪ್ಪ ಬಾರೇಗಿಡರವರು, ಪ್ರಾಚಾರ್ಯರು ರೇಣುಕಾ ವಿದ್ಯಾಪೀಠ ತುಮಕೂರು, ಇವರು ಉಪನ್ಯಾಸ ನೀಡಲಿದ್ದಾರೆ. ಸಂಜೆ 7 ಗಂಟೆಗೆ ಸದ್ಭಕ್ತರಿಂದ ಭಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶವ ಪತ್ತೆ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಿಂದ ಗೌರಿಬಿದನೂರಿಗೆ ಹೋಗುವ ರಸ್ತೆಯಲ್ಲಿ ಬರುವ ವೀರ ದಿಮ್ಮಮ್ಮ ಕಣಿವೆ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ತವಕದಹಳ್ಳಿ ಗ್ರಾಮದ ಚಿಕ್ಕತಿಮ್ಮಪ್ಪ ಬಿನ್ ಸೂರ್ಯನಾರಾಯಣ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಇಲ್ಲಿ ಬಿಸಾಡಿ ಹೋಗಿದ್ದಾರೋ, ಇಲ್ಲ ಆತ್ಮಹತ್ಯೆಯೋ ಎಂದು ಶಂಕಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರತಿಭಾ ಪುರಸ್ಕಾರ
ತುಮಕೂರು: ತಾಲೂಕು, ಕುರುಬ ನೌಕರರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ 2013ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 70 ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು 2013ನೇ ಸಾಲಿನಲ್ಲಿ ನಿವೃತ್ತರಾದ ಸರ್ಕಾರಿ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಕಾಳಿದಾಸ ಪ್ರೌಢಶಾಲೆ ಕೊರಟಗೆರೆಯಲ್ಲಿ ನಡೆಯುತ್ತದೆ. ವಿದ್ಯಾರ್ಥಿಗಳು ಅಂಕಪಟ್ಟಿ ನಕಲು ದೃಢೀಕರಿಸಿ ಮೊಬೈಲ್ ಸಂಖ್ಯೆಯೊಂದಿಗೆ ಕಾಳಿದಾಸ ಪ್ರೌಢಶಾಲೆ ಕೊರಟಗೆರೆ ಇಲ್ಲಿಗೆ ಇದೇ ತಿಂಗಳ 31 ರೊಳಗೆ ತಲುಪಿಸಲು ಕೋರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

