ನಿರುದ್ಯೋಗಿ ಯುವಕರು ತರಬೇತಿ ಪಡೆದು ಆರ್ಥಿಕವಾಗಿ ಸದೃಢವಾಗಲಿ
ಕನ್ನಡಪ್ರಭ ವಾರ್ತೆ ಕೊರಟಗೆರೆ ಜು.21
ಪಟ್ಟಣ ಪಂಚಾಯಿತಿಯ ಎಸ್ಜಿಎಸ್ಆರ್ವೈ ಯೋಜನೆಯಡಿ ನಿರುದ್ಯೋಗಿ ಯುವಕರು ನಾನಾ ರೀತಿಯ ತರಬೇತಿ ಪಡೆದು ಆರ್ಥಿಕವಾಗಿ ಸದೃಢರಾಗುವಂತೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿರ್ದೇಶಕ ಕೆ.ಆರ್. ಹೊನ್ನೇಶ್ ತಿಳಿಸಿದರು.
ಅವರು ಪಟ್ಟಣ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಸ್ವರ್ಣ ಜಯಂತಿ ಶಹರಿ ರೋಜ್ಗಾರ್ ಯೋಜನೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಯುವಕರಿಗೆ ಉದ್ಯೋಗ ನೀಡುವ ದೃಷ್ಟಿಯಿಂದ ಪ್ಲಂಬಿಂಗ್, ಸ್ಯಾನಟರಿಷನ್ ಹಾಗೂ ಕಾಪೆಂರ್ಟರ್ ಕೆಲಸಗಳ ತರಬೇತಿ ಪಡೆದು ಸ್ವಾವಲಂಬಿಗಳಾಗಿ ಬದುಕುವುದನ್ನು ಕಲಿಯುವಂತೆ ಹೇಳಿದರು.
ಪ.ಪಂ. ಮುಖ್ಯಾಧಿಕಾರಿ ಶ್ರೀನಿವಾಸ್ ಮಾತನಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಯುವಕರು ಇಲಾಖೆಯಿಂದ ನೀಡುವ ಒಂದು ತಿಂಗಳ ಗೌರವಧನದೊಂದಿಗೆ ತರಬೇತಿ ಪಡೆದು ಸ್ವಯಂ ಉದ್ಯೋಗ ಕಂಡುಕೊಳ್ಳಲು ಮುಂದಾಗುವಂತೆ ತಿಳಿಸಿದರು. ರಾಜೀವ್ ಗಾಂಧಿ ಗ್ರಾಮೀಣ ನಿಗಮದ ಅಂಜನಮೂರ್ತಿ, ದೊಡ್ಡಾಳಪ್ಪ, ನಾಗರಾಜು, ಸಾವಿತ್ರಮ್ಮ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

