ಕಠಿಣ ಪರಿಶ್ರಮದಿಂದ ಬದುಕು ಸುಂದರ
ಮಧುಗಿರಿ: ಕಠಿಣ ಪರಿಶ್ರಮದಿಂದ ಓದಿ ಗುರಿ ಸಾಧಿಸುವ ಛಲವಿದ್ದರೆ ಜೀವನ ಸುಂದರ ಎಂದು ಕರ್ನಾಟಕ ಜ್ಯೂಡಿಷಿಯಲ್ ಅಕಾಡೆಮಿ ಡೆಪ್ಯೂಟಿ ಡೈರೆಕ್ಟರ್ ಎಚ್.ಆರ್.ರಾಧ ಅಭಿಪ್ರಾಯಪಟ್ಟರು.
ಪಟ್ಟಣದ ಎಂಜಿಎಂ ಬಾಲಿಕಾ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ 2013- 14ನೇ ಸಾಲಿನ ವಿದ್ಯಾರ್ಥಿ ಸಂಘಗಳ ಪ್ರಾರಂಭೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದ ವಿಶೇಷ ಆಹ್ವಾನಿತರಾಗಿ ಮಾತನಾಡಿದರು.
ಸಂಸ್ಥಾಪಕ ಕಾರ್ಯದರ್ಶಿ ಎಂ.ಎಸ್. ಶಂಕರನಾರಾಯಣ ಸಾಧಕರಿಗೆ ಸನ್ಮಾನಿಸಿ ಬಳಿಕ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥಾಪಕ ಉಪಾಧ್ಯಕ್ಷ ಎಚ್.ಕೆ.ವಿ. ರೆಡ್ಡಿ ಮಾತನಾಡಿದರು. 2012- 13ನೇ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಂಸ್ಥೆಯ ಪದಾಧಿಕಾರಿಗಳು ಮತ್ತು ಶಿಕ್ಷಕರು ಮಕ್ಕಳಿಗೆ ನೆನಪಿನ ಕಾಣಿಕೆ ನೀಡಿ ಪುರಸ್ಕರಿಸಿದರು.
ಮುಖ್ಯ ಶಿಕ್ಷಕ ವಿ.ರಾಜಶೇಖರ್ ಸ್ವಾಗತಿಸಿದರು. ವಿಜಯಲಕ್ಷ್ಮೀ ನಿರೂಪಿಸಿ ಶೋಭಾ ಪುರಸ್ಕೃತರ ಪಟ್ಟಿ ವಾಚಿಸಿದರು. ಬಾಲಗಂಗಾಧರ ರೆಡ್ಡಿ ವಂದಿಸಿದರು.
ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಅಗತ್ಯ
ಕ.ಪ್ರ.ವಾರ್ತೆ ತುಮಕೂರು ಜು. 22
ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣದ ಅಗತ್ಯತೆ ಇದೆ ಎಂದು ತುಮಕೂರು ವಿವಿ ಸಿಂಡಿಕೇಟ್ನ ಮಾಜಿ ಸದಸ್ಯ ಬ್ಯಾಟರಂಗೇಗೌಡ ಅಭಿಪ್ರಾಯಪಟ್ಟರು.
ಇಲ್ಲಿನ ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ಕಾಮರ್ಸ್ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲಾ ರಂಗಗಳು ಕಲುಷಿತಗೊಂಡಿದೆ. ಸೇವಾ ಮನೋಭಾವದ ಶಿಕ್ಷಣ ಕ್ಷೇತ್ರದಲ್ಲಿ ಭರವಸೆ ಇಟ್ಟುಕೊಳ್ಳಬಹುದಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಕಲಿಸಬೇಕಾಗಿದೆ ಎಂದರು.
ವಿದ್ಯಾರ್ಥಿಗಳು ಕೇವಲ ಪಠ್ಯ ಚಟುವಟಿಕೆಗಷ್ಟೆ ತಮ್ಮ ವಿದ್ಯಾರ್ಥಿ ಜೀವನ ಮೀಸಲಿಡಬಾರದು. ಬದಲಿಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆಯೂ ಆಸಕ್ತಿ ಬೆಳೆಸಿಕೊಳ್ಳಬೇಕು. ತುಮಕೂರು ವಿವಿ ವ್ಯಾಪ್ತಿಯ ಈ ಕಾಲೇಜು ಶೇ 92 ಫಲಿತಾಂಶ ಪಡೆದಿರುವುದು ಶ್ಲಾಘನೀಯ. ಮುಂದಿನ ವರ್ಷ ತುಮಕೂರು ವಿವಿ ವ್ಯಾಪ್ತಿಗೆ ಇದು ಮೊದಲನೇ ಸ್ಥಾನ ಪಡೆಯುವಂತಾಗಲಿ ಎಂದು ಆಶಿಸಿದರು.
ವಿದ್ಯಾರ್ಥಿ ಜೀವನ ಸುಂದರವಾದುದು. ವಿದ್ಯಾರ್ಥಿಗಳು ಕೇವಲ ಮನರಂಜನೆಗೆ ತಮ್ಮ ಕಾಲೇಜು ಜೀವನ ಮೀಸಲಾಗಿಡಬಾರದು. ಬದಲಿಗೆ ಶಿಕ್ಷಣದ ಜೊತೆಗೆ ಹೊಸ ಹೊಸ ವಿಷಯ ಬಗ್ಗೆಯೂ ತಿಳಿದುಕೊಳ್ಳಲು ಉತ್ಸುಕರಾಗಿರಬೇಕು ಎಂದರು.
ದೇಶದ ಭವಿಷ್ಯ ನಿಂತಿರುವುದು ಯುವ ಜನತೆ ಹಾಗೂ ವಿದ್ಯಾರ್ಥಿಗಳಿಂದ. ಈ ಹಿನ್ನೆಲೆಯಲ್ಲಿ ಸಶಕ್ತ ದೇಶ ಕಟ್ಟಲು ಪ್ರತಿಯೊಬ್ಬರು ಪಣ ತೊಡಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪತ್ರಕರ್ತ ಹಾಗೂ ರಂಗಕರ್ಮಿ ಉಗಮ ಶ್ರೀನಿವಾಸ್, ವಿದ್ಯಾರ್ಥಿಗಳು ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ತನ್ನ ಜೊತೆಗಾರ ವಿದ್ಯಾರ್ಥಿಯನ್ನು ಯಾವತ್ತೂ ಪ್ರತಿಸ್ಪರ್ಧಿ ಎಂದು ಭಾವಿಸಬಾರದು. ಆಗ ಮಾತ್ರ ಯಶಸ್ಸು ಸಾಧ್ಯ ಎಂದರು. ಅಕಾಡೆಮಿಕ್ ಶಿಕ್ಷಣದ ಜೊತೆಗೆ ಚಿತ್ರಕಲೆ, ಸಂಗೀತ, ಸಾಹಿತ್ಯ, ರಂಗಭೂಮಿ ಕಡೆ ಒಲವು ಬೆಳೆಸಿಕೊಳ್ಳಬಾರದು. ಕಲಿಕೆ ನಿರಂತರವಾದುದು. ಅದಕ್ಕೆ ಕೊನೆ ಎಂಬುದೇ ಇಲ್ಲ. ಎಲ್ಲಾ ವಿಷಯದ ಬಗ್ಗೆ ಅಲ್ಪ ಸ್ವಲ್ಪ ತಿಳಿದಿದ್ದರೆ ಒಳಿತು ಎಂದರು.
ಕಾಲೇಜಿನ ಪ್ರಾಂಶುಪಾಲ ಸುನೀಲ್ ಮಾತನಾಡಿ, ವಿದ್ಯಾರ್ಥಿಗಳು ಶ್ರಮ ಹಾಕಿ ಓದಬೇಕು. ಪೋಷಕರು ಕಷ್ಟಪಟ್ಟು ನಿಮ್ಮನ್ನು ಓದಿಸುತ್ತಾರೆ. ಅವರಿಗೆ ಮತ್ತು ಸಮಾಜಕ್ಕೆ ಹೆಸರು ತರಬೇಕು ಎಂದರು. ಅಧ್ಯಕ್ಷತೆಯನ್ನು ಕಾಲೇಜಿನ ಅಧ್ಯಕ್ಷೆ ಸುಮಲತಾ ವಹಿಸಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

