ಪಾವಗಡಕ್ಕೆ ಕಂಚಮಾರಯ್ಯ ಭೇಟಿ
ಪಾವಗಡ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಿನೇ ದಿನೇ ಪಟ್ಟಣಕ್ಕೆ ಆಗಮಿಸುವ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಗಳ ದಂಡು ಹೆಚ್ಚಾಗಿದ್ದು, ಸೋಮವಾರ ಆಕಾಂಕ್ಷಿ ಕಂಚಮಾರಯ್ಯ ಪಟ್ಟಣಕ್ಕೆ ಆಗಮಿಸಿ ಬ್ಲಾಕ್ ಕಾಂಗ್ರೆಸ್ ಕಮಿಟಿ ಮುಖಂಡರೊಂದಿಗೆ ಚರ್ಚಿಸಿದರು. ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚಿತ್ರದುರ್ಗ ಲೋಕಸಭಾ ವ್ಯಾಪ್ತಿಯ ಶಿರಾ ತಾ.ಮುಸುಕಲೋಟಿ ಗ್ರಾಮಕ್ಕೆ ಸೇರಿದ್ದ ನಾನು ಮುಂಬರುವ ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದರು. ರಾಜ್ಯ ಪ್ರದೇಶ್ ಕಾಂಗ್ರೆಸ್ ಸಮಿತಿ ಸೇರಿದಂತೆ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚಿಸಿ ಸಲಹೆ ಪಡೆದಿದ್ದೇನೆ. ಹಿರಿಯ ಮುಖಂಡರ ಮಾರ್ಗದರ್ಶನದಂತೆ ಈಗಾಗಲೇ ಚಿತ್ರದುರ್ಗ ಲೋಕಸಭಾ ವ್ಯಾಪ್ತಿಗೆ ಬರುವ ಹಿರಿಯೂರು, ಚಳ್ಳಕೆರೆ, ಶಿರಾ ಮುಂತಾದ ತಾಲೂಕುಗಳಿಗೆ ಭೇಟಿ ನೀಡಿ ಅಲ್ಲಿನ ಮುಖಂಡರಿಗೆ ಮನವಿ ಮಾಡಿದ್ದೇನೆ ಎಂದರು. ಸ್ಥಳೀಯ ಮುಖಂಡರ ಬೆಂಬಲ ಪಡೆಯಲು ಪಾವಗಡಕ್ಕೆ ಆಗಮಿಸಿ ಇಲ್ಲಿನ ತಾ.ಕಾಂಗ್ರೆಸ್ ಅಧ್ಯಕ್ಷ ಸುದೇಶ್ಬಾಬು, ಜಂಪಯ್ಯ, ಪಿ.ಎಚ್. ಸುಬ್ಬರಾಯಪ್ಪ, ಜಿ.ಎಸ್. ಧರ್ಮಪಾಲ್ ಸೇರಿದಂತೆ ಸ್ಥಳೀಯ ಮುಖಂಡರನ್ನು ಭೇಟಿ ಮಾಡಿ ಮನವಿ ಮಾಡಿರುವುದಾಗಿ ತಿಳಿಸಿದರು. ಕೋರ್ಟ್ ನರಸಪ್ಪ, ವಕೀಲ ನರಸೀಯಪ್ಪ, ಕಡಪಲಕೆರೆ ಹನುಮಂತರಾಯಪ್ಪ ಇತರರು ಇದ್ದರು.
ಅಪಘಾತ: ಮಹಿಳೆ ಸಾವು
ಪಾವಗಡ: ಸೋಮವಾರ ಕುಟುಂಬ ಸಮೇತ ಗುಲ್ಬರ್ಗಕ್ಕೆ ಹೋಗಿ ವಾಪಸ್ ಬರುವ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ರಾಸ್ ರಸ್ತೆ ತಿರುವೊಂದರಲ್ಲಿ ಇನೋವಾ ಹಾಗೂ ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಪಾವಗಡದ ರೂಪ ಡ್ರೆಸಸ್ ಮಾಲೀಕರಾದ ಇಂದುಮತಿ(50) ಮೃತಪಟ್ಟಿದ್ದಾರೆ. ಗುಲ್ಬರ್ಗಕ್ಕೆ ಹೋಗಿ ವಾಪಸ್ ಬರುವಾಗ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

