ತುಮಕೂರು

ಜಿಲ್ಲೆಗೆ ಹೇಮಾವತಿ ನೀರು: ಸಚಿವ ವಿನಯಕುಮಾರ್ ಸೊರಕೆ

Published On :

ವಿಧಾನಸಭೆ: ಪಾವಗಡ ಪಟ್ಟಣ ಮತ್ತು ಅದರ ಮಾರ್ಗ ಮಧ್ಯದ 181 ಹಳ್ಳಿಗಳಿಗೆ ಹೇಮಾವತಿ ಶಾಖಾ ನಾಲೆಯ ಸರಪಳಿಯಲ್ಲಿ 126.37 ಕಿಮೀ ಕುಡಿಯುವ ನೀರು ಪೂರೈಸಲು ಜಲಸಂಪನ್ಮೂಲ ಇಲಾಖೆ ವತಿಯಿಂದ 55 ಕ್ಯುಸೆಕ್ ನೀರು ಪಡೆಯಲು ಅನುಮತಿ ನೀಡಲಾಗಿದೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ವಿನಯಕುಮಾರ್ ಸೊರಕೆ ತಿಳಿಸಿದ್ದಾರೆ.
ಪಾವಗಡ ಶಾಸಕ ಕೆ.ಎಂ. ತಿಮ್ಮರಾಯಪ್ಪ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಇದಕ್ಕಾಗಿ 345 ಕೋಟಿಯ ಯೋಜನಾ ವರದಿ ತಯಾರಿಸಲಾಗಿದೆ ಎಂದು ಹೇಳಿದ್ದಾರೆ.
ಈ ಯೋಜನೆಯ ಮಾರ್ಗ ಮಧ್ಯದ ಹಳ್ಳಿಗಳಿಗೆ ನೀರು ಸರಬರಾಜು ಮಾಡು ಗ್ರಾಮೀಣಾಭಿವೃದ್ಧಿ ಇಲಾಖೆಯ ವಂತಿಕೆ ಹಣ 214 ಕೋಟಿ ಭರಿಸುವ ಬಗ್ಗೆ ಸಹಮತಿ ಕೋರಲಾಗಿದೆ. ಇದರ ನಂತರ ಪ್ರಸ್ತಾವನೆ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ. ಇದಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತ ನಂತರ ಹಣ ಬಿಡುಗೆ ಮಾಡಲು ಹಾಗೂ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.