ನಾಳೆ ಪ್ರತಿಭಾ ಪುರಸ್ಕಾರ
ಶಿರಾ: ಪಟ್ಟಣದ ಸರ್ಕಾರಿ ಬಾಲಕಿಯರ ಪಪೂ ಕಾಲೇಜಿನಲ್ಲಿ ಜುಲೈ 27 ಶನಿವಾರ ಬೆಳಗ್ಗೆ 10 ಗಂಟೆಗೆ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ಪರಂಪರೆ ಕೂಟ ಕಾರ್ಯಕ್ರಮದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಪಿ.ಹೆಚ್.ಮಹೇಂದ್ರಪ್ಪ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಕಾನೂನು ಸಚಿವರಾದ ಟಿ.ಬಿ.ಜಯಚಂದ್ರ ಅವರು ಅಧ್ಯಕ್ಷತೆ ವಹಿಸುವರು, ಸಾಹಿತಿ ವಿಧಾನಪರಿಷತ್ ಸದಸ್ಯ ಡಾ.ದೊಡ್ಡರಂಗೇಗೌಡ ಉದ್ಘಾಟಿಸುವರು. ವಿಶೇಷ ಉಪನ್ಯಾಸವನ್ನು ರಾಮಕೃಷ್ಣ ಮಠದ ಡಾ.ವಿರೇಶಾನಂದ ಸರಸ್ವತಿ ಸ್ವಾಮೀಜಿಯವರು ನೀಡುವರು. ಪ್ರೆಸಿಡೆನ್ಸ್ಪಬ್ಲಿಕ್ ಶಾಲೆ ಕಾರ್ಯದರ್ಶಿ ಎಂ.ಚಿದಾನಂದ್, ಮತ್ತಿತರರಿರುವರು.
ಅಹವಾಲು ಸ್ವೀಕಾರ ಇಂದು
ಕುಣಿಗಲ್: ಇದೇ 26ರಂದು ಬೆಳಗ್ಗೆ 11ಗಂಟೆಗೆ ತುಮಕೂರು ಲೋಕಾಯುಕ್ತ ನಿರೀಕ್ಷಕರು, ಪಟ್ಟಣದ ಕಂದಾಯಭವನದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನುಢಿ, ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ನೀಡುವಂತೆ ಪ್ರಕಟಣೆಯಲ್ಲಿ ಕೋರಿದೆ.
ಯಶಸ್ವಿನಿ ನವೀಕರಣಕ್ಕೆ ಅರ್ಜಿ
ತುಮಕೂರು: ಯಶಸ್ವಿನಿ ರೈತರ ಆರೋಗ್ಯ ರಕ್ಷಣಾ ಯೋಜನೆಯಡಿ ಆರೋಗ್ಯ ರಕ್ಷಣೆಯನ್ನು ಪಡೆಯಲು ಗ್ರಾಮೀಣ ಸಹಕಾರ ಸಂಘಗಳಲ್ಲಿ ಆಗಸ್ಟ್ 1, 2013 ಕ್ಕೆ ಮೂರು ತಿಂಗಳು ಮುಂಚಿತವಾಗಿ ಸದಸ್ಯತ್ವ ಹೊಂದಿರುವವರು ಅರ್ಹರಾಗಿರುತ್ತಾರೆ ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯೋಜನೆಯ ಸಹಕಾರ ಸಂಘಗಳ ಫಲಾನುಭವಿಗಳು 2013-14ನೇ ಸಾಲಿಗೆ ವಾರ್ಷಿಕ ಶುಲ್ಕ 210ರು.ಅನ್ನು ಸಂಘಗಳಿಗೆ ಸಂದಾಯ ಮಾಡಿ ತಮ್ಮ ಸದಸ್ಯತ್ವ ನವೀಕರಿಸಲು ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಒಂದೇ ಕುಟುಂಬದ ಐದು ಜನ ಅಥವಾ ಅದಕ್ಕಿಂತ ಹೆಚ್ಚು ಜನರನ್ನು ನೋಂದಾಯಿಸಿದಲ್ಲಿ ವಂತಿಗೆ ಮೊತ್ತ 200 ರಲ್ಲಿ ಶೇ.15 ರಷ್ಟು ರಿಯಾಯತಿ ಸೌಲಭ್ಯವಿರುತ್ತದೆ ಎಂದು ಅವರು ತಿಳಿಸಿದ್ದಾರೆ. 2012-13 ರಲ್ಲಿ ನೋಂದಣಿಯಾದವರಿಗೆ ಜುಲೈ 15 2013 ರಿಂದ ಆಗಸ್ಟ್ 31 ರವರೆಗೆ ನವೀಕರಿಸಿಕೊಳ್ಳಲು ಅವಕಾಶವಿರುತ್ತದೆ. ಮಧುಗಿರಿ ಉಪವಿಭಾಗದ ಸಹಕಾರ ಸಂಘಗಳು ಸೆ.1, 2013 ಕ್ಕೆ ಸಂಘದ ಲೆಕ್ಕಪತ್ರಗಳನ್ನು ಆಡಿಟ್ ಮಾಡಿಸಿ, ಆಡಿಟ್ ವರದಿಗಳನ್ನು ಪಡೆಯಲು ಕ್ರಮವಿಡುವುದು ಹಾಗೂ ಅಕ್ಟೋಬರ್ 31ರೊಳಗೆ ಸರ್ವಸದಸ್ಯರ ಸಭೆ ನಡೆಸಲು ಕ್ರಮವಿಡುವುದು, ಚುನಾವಣೆ ಇರುವ ಸಹಕಾರ ಸಂಘಗಳಿಗೆ ಚುನಾವಣೆ ನಡೆಸಲು ಸಹಕಾರ ಚುನಾವಣಾ ಆಯೋಗ ದಿನಾಂಕಗಳನ್ನು ನಿಗದಿಪಡಿಸಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳು ಆಗಸ್ಟ್ 25, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಸೆಪ್ಟೆಂಬರ್ 1, ಇತರೆ ಪತ್ತಿನ ಸಹಕಾರ ಸಂಘಗಳು ಸೆಪ್ಟೆಂಬರ್ 7 ಮತ್ತು 8 ಹಾಗೂ ಇತರೆ ಸಹಕಾರ ಸಂಘಗಳಿಗೆ ಸೆಪ್ಟೆಂಬರ್ 15 ರಂದು ಚುನಾವಣೆ ನಡೆಸಲು ತಿಳಿಸಿದೆ.
ನೀತಿ ಸಂಹಿತೆ ಅನುಷ್ಠಾನಗೊಳಿಸಿ
ತುಮಕೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಗೆ ಕುಣಿಗಲ್ ವಿಧಾನಸಭಾ ಕ್ಷೇತ್ರ ಒಳಗೊಂಡಿರುವುದರಿಂದ ಮಾದರಿ ನೀತಿ ಸಂಹಿತೆಯ ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅಬಕಾರಿ ಉಪ ಆಯುಕ್ತರಿಗೆ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಸೂಚಿಸಿದ್ದಾರೆ. ಮಾದರಿ ನೀತಿ ಸಂಹಿತೆಯು ಜುಲೈ 19 ರಿಂದ ಜಾರಿಗೆ ಬಂದಿದ್ದು, ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ. ಸದರಿ ಕ್ಷೇತ್ರ ವ್ಯಾಪ್ತಿಯಲ್ಲಿ ಕುಣಿಗಲ್ ವಿಧಾನಸಭಾ ಕ್ಷೇತ್ರ ಸೇರಿರುವುದರಿಂದ ನೀತಿ ಸಂಹಿತೆಯನ್ನು ಕಟ್ಟುನಿಟ್ಟಿನ ಅನುಷ್ಠಾನ ಮಾಡುವಂತೆ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

