ತುಮಕೂರು

ರಕ್ತ ಚಂದನ ಸಂಗ್ರಹ ಪ್ರಕರಣ, ಐವರು ಬೆಂಗಳೂರಲ್ಲಿ ಬಂಧನ

Published On :

ಕ.ಪ್ರ.ವಾರ್ತೆ ತುಮಕೂರು ಜು. 25
ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆರೋಪಿಗಳನ್ನು ತುಮಕೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
11 ದಿವಸಗಳ ಹಿಂದೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2.5 ಕೋಟಿ ರು. ಮೌಲ್ಯದ ಏಳೂವರೆ ಟನ್ ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿ ಮನೆಯೊಂದರಲ್ಲಿ ಇಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮರದ ತುಂಡುಗಳನ್ನು ವಶಪಡಿಸಿಕೊಂಡು ಆರೋಪಿಗಳ ಬೇಟೆಗೆ ಬಲೆ ಬೀಸಿದ್ದರು.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಎಸ್ಪಿ ರಮಣಗುಪ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿಯನ್ನು ಬೆಂಗಳೂರಿನಲ್ಲಿ ಸೆರೆ ಹಿಡಿಯಲಾಗಿದ್ದು ಇನ್ನು 6 ಮಂದಿ ತಲೆ ಮರೆಸಿಕೊಂಡಿದ್ದಾರೆ. ಸತೀಶ್‌ಕುಮಾರ್, ಮಂಜು, ಸನಾವುಲ್ಲಾ, ಮೃತ್ಯುಂಜಯ, ಆನಂದ್ ಬಂಧಿತ ಆರೋಪಿಗಳು. ಇವರಲ್ಲಿ ಸತೀಶ್ ಕುಮಾರ್ ಮುಖ್ಯ ಆರೋಪಿಯಾಗಿದ್ದಾನೆ. ದೆಹಲಿ ಮೂಲದ ಶರ್ಮ ಎಂಬುವರಿಗೆ ಈ ರಕ್ತ ಚಂದನ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ ಎಂದು ಮಾಹಿತಿ ನೀಡಿದರು. ಎಸ್ಪಿ ರಮಣಗುಪ್ತ, ಅಡಿಷನಲ್ ಎಸ್ಪಿ ಹನುಮಂತರಾಯ, ಡಿವೈಎಸ್ಪಿ ಜಗದೀಶ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ಮರಿಯಪ್ಪ, ಪಿಎಸ್‌ಐ ಅವಿನಾಶ್,  ಕೋರಾ ಠಾಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.