ತುಮಕೂರು

ತುಮಕೂರಿನಲ್ಲಿ ವಿಜಯ್ ದಿವಸ್ ಆಚರಣೆ

Published On :

ಕ.ಪ್ರ. ವಾರ್ತೆ ತುಮಕೂರು ಜು. 26
ಭಗತ್ ಕ್ರಾಂತಿ ಸೇನೆ ವತಿಯಿಂದ ನಗರದ ಟೌನ್‌ಹಾಲ್ ವೃತ್ತದಲ್ಲಿ ವಿಜಯ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
ದೇಶ ಇಲ್ಲಿಯವರೆಗೆ ಗೆದ್ದ ಯುದ್ದಗಳ ಸ್ಮರಣಾರ್ಥವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಗತ್ ಕ್ರಾಂತಿ ಸೇನೆ ಯುವಕರು ಶುಕ್ರವಾರ ಬೆಳಗ್ಗೆ ನಗರದ ಟೌನ್‌ಹಾಲ್ ವೃತ್ತದಲ್ಲಿ ಜಮಾವಣೆಗೊಂಡು ದೇಶಕ್ಕಾಗಿ ಯುದ್ದಗಳಲ್ಲಿ ತಮ್ಮ ಪ್ರಾಣಾರ್ಪಣೆ ಮಾಡಿ ವಿಜಯಕ್ಕೆ ಕಾರಣರಾದ ವೀರಯೋಧರ ಭಾವಚಿತ್ರ ಇಟ್ಟು ಪುಷ್ಪಾರ್ಚನೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ವಿಜಯ ದಿವಸ್ ಕಾರ್ಯಕ್ರಮವನ್ನು ಹಾಗೂ ಈ ದಿನವನ್ನು ವೀರ ಸೈನಿಕರಿಗೆ ಹಾಗೂ ಪೊಲೀಸರಿಗೆ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಚೇತನ ಟುಟೋರಿಯಲ್ಸ್‌ನ ರವೀಶ್, ಸೈನಿಕರು ತಮ್ಮ ಪ್ರಾಣವನ್ನು ಒತ್ತೆ ಇಟ್ಟು ನಮ್ಮನ್ನೆಲ್ಲಾ ಕಾಪಾಡುತ್ತಾರೆ. ಅಂತಹ ಸೈನಿಕರಿಗೆ ಹಾಗೂ ಪೊಲೀಸರಿಗೆ ಗೌರವಾರ್ಪಣೆ ಮಾಡುವ ಮೂಲಕ ನೈತಿಕ ಬೆಂಬಲ ಹಾಗೂ ಆತ್ಮಸ್ಥೈರ್ಯವನ್ನು ನೀಡಬೇಕೆಂದರು.
ಕಾರ್ಯಕ್ರಮದ ನೇತೃತ್ವವನ್ನು ಆರಾಧ್ಯ ಮಂಚಲದೊರೆ, ಚೇತನ್, ಸ್ವಾಮಿ, ಪ್ರತಾಪ್, ಗಂಧರ್ವ, ಕಿರಣ್, ಶ್ರೀನಿವಾಸಗೌಡ, ರೋಷನ್, ಹೇಮಂತ್, ನಿಶಾಂತ್, ತೇಜ, ರವಿ, ಪವನ್,ಸುಹಾಸ್, ಮನು, ರಾಜು, ಗೌಡ, ರಘು, ನಿಜ, ರುದ್ರೇಶ್, ಪವನ್ ಪೂಜಾರಿ, ಆದಿ, ಶಶಿ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.