ದೇಸಿ ಆರ್ಟಿಸಾನ್ ಹಬ್ನೆಡೆಸರ್ಕಾರದ ನಡೆ ಸಂತಸ: ಜಿಎಸ್ಬಿ
ತುಮಕೂರು: ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ದೇಸಿ ಆರ್ಟಿಸಾನ್ ಹಬ್, ಕ್ಲಸ್ಟರ್ ಹಬ್ ಸ್ಥಾಪನೆ ಕುರಿತು ಸಾಧ್ಯತಾ ವರದಿಯನ್ನು ತಯಾರಿಸುವ ಪ್ರಸ್ತಾವನೆಗೆ ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಅನುಮೋದನೆ ನೀಡಿರುವುದಕ್ಕೆ ಯೋಜನೆ ರೂವಾರಿ ಹಾಗೂ ಸಂಸದ ಜಿ.ಎಸ್. ಬಸವರಾಜ್ ಹರ್ಷ ವ್ಯಕ್ತ ಪಡಿಸಿದ್ದಾರೆ. ರಾಷ್ಟ್ರೀಯ ಉತ್ಪಾದನಾ ಮತ್ತು ಹೂಡಿಕೆ ವಲಯದ (ನಿಮ್ಜ್) ಮಾಸ್ಟರ್ ಪ್ಲಾನ್ ತಯಾರಿಸುವ ಮುನ್ನ ದೇಸಿ ಆರ್ಟಿಸಾನ್ ಹಬ್ ಸ್ಥಾಪನೆ ಕುರಿತು ಸಾಧ್ಯತಾ ವರದಿ ಸಿದ್ದಪಡಿಸಿದಲ್ಲಿ ಯೋಜನೆಯನ್ನು ಪ್ರತ್ಯೇಕವಾಗಿ ಅಥವಾ ನಿಮ್ಜ್ ಯೋಜನೆಯಡಿಯೇ ಹಬ್ ನಿರ್ಮಿಸಲು ಸಹಕಾರಿಯಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಸಣ್ಣ ಕೈಗಾರಿಕಾ ಸಚಿವ ಪ್ರಕಾಶ್ ಬಿ. ಹುಕ್ಕೇರಿ ರವರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ರವರಿಗೆ ಕೈಗಾರಿಕಾ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತದ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಜಾರಿಯಾಗಿರುವ ಈವರೆಗಿನ ಯೋಜನೆಗಳಿಗಿಂತ ಅತ್ಯುತ್ತಮವಾದ ಬೃಹತ್ ಯೋಜನೆ ದೇಸಿ ಆರ್ಟಿಸಾನ್ ಹಬ್. ಸದುಪಯೋಗ ಪಡಿಸಿಕೊಳ್ಳಲು ಜಿಲ್ಲೆಯ ಕೈಗಾರಿಕೋದ್ಯಮಿಗಳಿಗೆ ತುಮಕೂರು ಡಿಸ್ಟ್ರಿಕ್ಟ್ ಟ್ಯಾಕ್ಸ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಎಸ್. ಪ್ರಕಾಶ್ ರವರು ಕರೆ ನೀಡಿದ್ದಾರೆ. ನಗರದ ಶೆಟ್ಟಿಹಳ್ಳಿ ಮುಖ್ಯ ರಸ್ತೆಯಲ್ಲಿರುವ ಭಾರದ್ವಾಜ್ ಟವರಸ್ನಲ್ಲಿ ನಡೆದ ಎಸ್.ಪಿ.ವಿ ಗಳ ಆಕ್ಟ್ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಅಭಿವೃದ್ಧಿ ರೆವೂಲ್ಯೂಷನ್ ಫೋರಂ ಅಧ್ಯಕ್ಷ ಕುಂದರನಹಳ್ಳಿ ರಮೇಶ್, ಟಿ.ಆರ್ . ರಘೋತ್ತಮರಾವ್, ಪಾವಟೆ, ಖುರ್ಷಿದ, ಆಶಾ, ತೇಜಾವತಿ, ಜಿಲ್ಲಾದ್ಯಂತ ಸ್ಥಾಪಿಸಲುದ್ದೇಶಿಸಿರುವ 57 ಕ್ಲಸ್ಟರ್ಗಳ ಪ್ರಮುಖರು ಭಾಗವಹಿಸಿದ್ದರು.
ಇಂದು ನೋಟ್ ಪುಸ್ತಕಗಳ ವಿತರಣೆ
ಕೊರಟಗೆರೆ: ಇಲ್ಲಿನ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಕೊರಟಗೆರೆ ತಾಲೂಕಿನ ಎಲ್ಲಾ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ 2012-13 ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಧನ ಮತ್ತು ನೋಟ್ ಪುಸ್ತಕಗಳ ವಿತರಣೆ ಸಮಾರಂಭ ಇದೇ ತಿಂಗಳ 27 ರಂದು ಶನಿವಾರ ನಡೆಯಲಿದೆ. ಇದಲ್ಲದೆ ತಾಲೂಕಿನ ಎಲ್ಲಾ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ 2013-14 ನೇ ಸಾಲಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಗುವುದು. ತಾಲೂಕಿನ ಎಲ್ಲಾ ಕಾಲೇಜು ಮತ್ತು ಪ್ರೌಢಶಾಲೆಯ ಉಪನ್ಯಾಸಕರು ಮತ್ತು ಶಿಕ್ಷಕರು ತಮ್ಮ ವಿದ್ಯಾರ್ಥಿಗಳನ್ನು ಸಮಾರಂಭಕ್ಕೆ ಕರೆದುಕೊಂಡು ಬರಲು ಸೂಚಿಸಿದೆ.
ವಿದ್ಯಾರ್ಥಿಗಳ ಉತ್ತಮ ಅಭ್ಯಾಸ, ರ್ಯಾಗಿಂಗ್ ನಾಶ
ಕುಣಿಗಲ್: ಪದವಿ ಹಂತದ ಕಾಲೇಜುಗಳಲ್ಲಿ ರ್ಯಾಗಿಂಗ್ ಪಿಡುಗು ತೊಡೆದುಹಾಕಲು, ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಸ್ಪರ್ಧೆ, ಸದಭಿರುಚಿಯ ವಾತಾವರಣ ನಿರ್ಮಾಣ ಮಾಡುವುದರ ಜತೆಯಲ್ಲಿ, ವಿದ್ಯಾರ್ಥಿಗಳು ಆತ್ಮಾವಲೋಕನ ಮಾಡಿಕೊಂಡು ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದು ಹಿರಿಯಶ್ರೇಣಿ ಸಿವಿಲ್ ನ್ಯಾ. ಎಲ್.ಶಾರದ ತಿಳಿಸಿದರು. ಶುಕ್ರವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ, ತಾಲೂಕು ಕಾನೂನುಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ, ಪದವಿ ವ್ಯಾಸಂಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ ಕಾನೂನು ಅರಿವು -ನೆರವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ವಿದ್ಯಾರ್ಥಿ ರ್ಯಾಗಿಂಗ್ ಪಿಡುಗಿಗೆ ಒಳಗಾದಲ್ಲಿ ಉಚಿತ ಸಹಾಯವಾಣಿ 1800-180-5522 ಸಂಖ್ಯೆಗೆ ಕರೆ ಮಾಡಿ ಸದುಪಯೋಗ ಪಡೆದುಕೊಳ್ಳಬಹುದು ಎಂದರು. ನ್ಯಾಯಾಧೀಶರಾದ ಎನ್.ಮುನಿರಾಜು ಮಾತನಾಡಿದರು. ನ್ಯಾ. ಜಿ.ಕೆ.ದಾಕ್ಷಾಯಿಣಿ, ವಕೀಲ ಬಿ.ಕೆ.ವೆಂಕಟಕೃಷ್ಣರಾವ್, ಲೋಕೇಶ್ ಉಪನ್ಯಾಸ ನೀಡಿದರು. ಪ್ರಾಚಾರ್ಯ ಡಿ.ಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ದಯಾನಂದ್, ಪದಾಧಿಕಾರಿಗಳಾದ ಚಂದ್ರಶೇಖರ್, ಮುಮ್ತಾಜ್ ಅಹಮದ್, ರಂಗಸ್ವಾಮಿ, ನಿಸ್ಸಾರ್ ಅಹಮದ್, ಸುರೇಖಾ ಹಿರೇಮಠ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

