ದೇವೇಗೌಡರ ನೇತೃತ್ವದಲ್ಲಿ ನಾಳೆ ಜೆಡಿಎಸ್ ಸಭೆ
ಕುಣಿಗಲ್: ಮುಂಬರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯ ಅಂಗವಾಗಿ ಜಿಡಿಎಸ್ ಕಾರ್ಯಕರ್ತರ ಸಭೆಯನ್ನು ಇದೇ 30ರ ಮಂಗಳವಾರ ಪಟ್ಟಣದ ತಿರುಮಲೇಶ ಸಮುದಾಯ ಭವನದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಶಾಸಕ ಡಿ.ನಾಗರಾಜಯ್ಯ ಸೇರಿದಂತೆ ತಾಲೂಕು ಸೇರಿದಂತೆ ರಾಜ್ಯಮಟ್ಟದ, ಜಿಲ್ಲಾ ಮಟ್ಟದ ಜೆಡಿಎಸ್ನಿಂದ ಆಯ್ಕೆಯಾದ ಜನಪ್ರತಿನಿಧಿಗಳು, ಇತರೆ ಮುಖಂಡರು ಪಾಲ್ಗೊಳ್ಳಲಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ವಕ್ತಾರ ಕಿತ್ತನಾಮಂಗಲ ರಮೇಶ್ ಮನವಿ ಮಾಡಿದ್ದಾರೆ.
ತಾಂತ್ರಿಕ ದೋಷದಿಂದ ಹೊತ್ತು ಉರಿದ ವಾಹನ
ತುಮಕೂರು: ವಾಹನದಲ್ಲಿ ತಾಂತ್ರಿಕ ದೋಷದಿಂದ ವಾಹನ ಹೊತ್ತಿ ಉರಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ನಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಗುಬ್ಬಿಯಿಂದ ಹುಳಿಯಾರಿಗೆ ನಾರು ಸಾಗಿಸುತಿದ್ದ ಟಾಟಾ ಎಸಿ ವಾಹನ ಬೆಂಕಿಗೆ ಆಹುತಿಯಾಗಿದೆ. ನಿಂಗಪ್ಪ ಎಂಬುವವರಿಗೆ ಈ ವಾಹನ ಸೇರಿದೆ. ತಾಂತ್ರಿಕದಿಂದ ಬೆಂಕಿ ಕಾಣಿಸಿಕೊಂಡಾಗ ವಾಹನದಲ್ಲಿದ್ದ ಚಾಲಕ ಹಾಗೂ ಕ್ಲೀನರ್ ವಾಹನದಿಂದ ಇಳಿದಿದ್ದಾರೆ. ಇದನ್ನು ಕಂಡ ಸ್ಥಳೀಯರು ಬೆಂಕಿಯನ್ನು ನಂದಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಕ್ಷ್ಮೀಶ ಅವಿರೋಧ ಆಯ್ಕೆ
ಶಿರಾ: ರಾಜ್ಯ ಸರ್ಕಾರಿ ನೌಕರರ ಸಂಘದ ಶಿರಾ ತಾಲೂಕು ಶಾಖೆಯ ಅಧ್ಯಕ್ಷರಾಗಿ ಭೂಮಾಪನಾ ಇಲಾಖೆಯ ಬಿ.ಎಂ.ಲಕ್ಷ್ಮೀಶ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸಿದ್ದಯ್ಯ ತಿಳಿಸಿದ್ದಾರೆ. ಖಜಾಂಚಿ ಸ್ಥಾನಕ್ಕೆ ಆರೋಗ್ಯ ಇಲಾಖೆಯ ಕೆ.ಎನ್.ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದು ಉಳಿದ ರಾಜ್ಯ ಪರಿಷತ್ ಒಂದು ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದು ಆಗಸ್ಟ್ 1 ರಂದು ಚುನಾವಣೆ ನಡೆಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

