ರೈತಸಂಘ, ಹಸಿರುಸೇನೆಯಿಂದ ಪಂಜಿನ ಮೆರವಣಿಗೆ
ಕ.ಪ್ರ. ವಾರ್ತೆ ಅರಸೀಕೆರೆ ಜು. 29
ತಾಲೂಕಿನಲ್ಲಿ ಬರಗಾಲ, ಮಳೆಯ ಅಭಾವ, ತೇವಾಂಶ ಕೊರತೆ ಹಾಗೂ ತೆಂಗು ಬೆಳೆ ರೋಗಬಾಧೆಯಿಂದ ಸುಳಿ ಬಿದ್ದು ಹೋಗಿ ಸಂಪೂರ್ಣ ವಿನಾಶದ ಅಂಚಿಗೆ ತಲುಪಿರುವುದರಿಂದ ಬೆಳೆಗಾರರಲ್ಲಿ ಆತ್ಮಸ್ತೈರ್ಯ ತುಂಬಲು ನಾಶವಾಗಿರುವ ತೆಂಗು ಹಾಗೂ ಅಡಕೆ ಮರಗಳಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ತಾಲೂಕಿನ ಹಸಿರುಸೇನೆ ಹಾಗೂ ರೈತ ಸಂಘದ ಕಾರ್ಯಕರ್ತರು ಭಾನುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಸುಳಿ ಬಿದ್ದು ನಾಶವಾಗಿರುವ ತೆಂಗು ಹಾಗೂ ಅಡಕೆ ಮರಗಳಿಗೆ ಪರಿಹಾರ ನೀಡಬೇಕೆಂದು ಘೋಷಣೆಗಳನ್ನು ಕೂಗುತ್ತಾ ರಾಷ್ಟ್ರೀಯ ಹೆದ್ದಾರಿಯ ಮೂಲಕ ಪಂಜಿನ ಮೆರವಣಿಗೆ ನಡೆಸಿದ ರೈತರು ಬಸವೇಶ್ವರ ವೃತ್ತದಲ್ಲಿ ಸ್ವಲ್ಪ ಕಾಲ ರಸ್ತೆ ತಡೆ ಚಳುವಳಿ ನಡೆಸಿ ರೈತರ ಸಮಸ್ಯೆಗೆ ಸರ್ಕಾರ ಕೂಡಲೇ ಸ್ಪಂದಿಸಬೇಕೆಂದು ಆಗ್ರಹಿಸಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ಮೇಳೆನಹಳ್ಳಿ ನಾಗರಾಜ್, ತಾಲೂಕಿನಾದ್ಯಂತ ಶೇ.60ಕ್ಕಿಂತ ಹೆಚ್ಚು ತೆಂಗಿನ ಬೆಳೆ ಹಾಳಾಗಿದ್ದು ಅಳಿದುಳಿದಿರುವ ಮರಗಳು ಕೂಡ ಒಂದೆರಡು ತಿಂಗಳಲ್ಲಿ ಬಿದ್ದು ಹೋಗುವ ಸಾಧ್ಯತೆ ಇದೆ. ಸರ್ಕಾರ ಗಮನ ಹರಿಸಿ ಸೂಕ್ತ ಪರಿಹಾರದೊಂದಿಗೆ ಪುನಶ್ಚೇತನ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ಆಗ್ರಹಿಸಿದರು.
ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಮಾತನಾಡಿ, ಸುಳಿ ಬಿದ್ದು ಹೋಗಿರುವ ಪ್ರತಿ ತೆಂಗಿನ ಮರಕ್ಕೆ ಕೇರಳ ಮಾದರಿಯಲ್ಲಿ ಕನಿಷ್ಠ 15ಸಾವಿರ ರು. ಪರಿಹಾರ ವಿತರಿಸಬೇಕೆಂದು ಒತ್ತಾಯಿಸಿದರು.
ಮೆರವಣಿಗೆಯಲ್ಲಿ ರೈತ ಸಂಘದ ಗೌರವಾಧ್ಯಕ್ಷ ಜವನಹಳ್ಳಿ ನಿಂಗಪ್ಪ, ಕಾರ್ಯದರ್ಶಿ ಅಣ್ಣಾಯಕನಹಳ್ಳಿ ಶಿವಮೂರ್ತಿ, ಮಾಗೇನಹಳ್ಳಿ ಮಲ್ಲಿಕಾರ್ಜುನ್, ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷ ಬೋರನಕೊಪ್ಪಲು ಶಿವಲಿಂಗಪ್ಪ, ಗೀಜೀಹಳ್ಳಿ ಪ್ರಸಾದ್, ಕರಗುಂದ ಶಿವಲಿಂಗಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

