ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಚಿಂತನೆ ಬಿತ್ತುವುದು ಅಗತ್ಯ
ಕ.ಪ್ರ.ವಾರ್ತೆ ಚಿಂತಾಮಣಿ ಜು.29
ಜಾಗತೀಕರಣದ ಅಪಾಯದಿಂದ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಚಿಂತನೆ ಬಿತ್ತುವ ಕೆಲಸ ಮಾಡಬೇಕಾಗಿದೆ ಎಂದು ಸಾಹಿತಿ ಹಾಗೂ ಗೀತ ರಚನೆಕಾರ ಗೊಲ್ಲಹಳ್ಳಿ ಶಿವಪ್ರಸಾದ್ ಹೇಳಿದರು.
ಪಟ್ಟಣದ ನಗರಸಭಾ ಸಭಾಂಗಣದಲ್ಲಿ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಾಂಸ್ಕೃತಿಕ ಕಲಾತಂಡ ಆಯೋಜಿಸಿದ್ದ ಪ್ರತಿಭಾ ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡುತ್ತಾ, ಪಾಶ್ಚಿಮಾತ್ಯ ಸಂಸ್ಕೃತಿಯ ದಾಳಿಗೆ ದೇಶೀಯ ಕಲೆ, ಸಂಸ್ಕೃತಿ ಪರಂಪರೆ ನಲುಗುತ್ತಿದೆ. ಇಂತಹ ಸಂದರ್ಭದಲ್ಲಿ ಈ ಶಿಕ್ಷಕರ ಕಲಾ ತಂಡ ಹಮ್ಮಿಕೊಂಡಿರುವ ಕಾರ್ಯಕ್ರಮ ಅನುಕರಣೀಯ ಮತ್ತು ಅಭಿನಂದನಾರ್ಹ ಎಂದರು. ಚಿಕ್ಕಬಳ್ಳಾಪುರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಲ್.ಶ್ರೀನಿವಾಸ್ ಮಾತನಾಡಿದರು.
ಪ್ರಶಸ್ತಿ ಪ್ರದಾನ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪಟ್ಟಣದ ಸಂಗೀತ ಮಹಾ ವಿದ್ಯಾಲಯದ ಸಂಸ್ಥಾಪಕ ವಿದ್ವಾನ್ ಎಲ್.ವೈ.ಶ್ರೀನಿವಾಸರೆಡ್ಡಿ ಸಾಂಸ್ಕೃತಿಕ ಕಲಾ ಪ್ರತಿಭಾ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಸನ್ಮಾನ: ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ನೌಕರರ ಸಂಘಕ್ಕೆ ನಿರ್ದೇಶಕರಾಗಿ ಚುನಾವಣೆಯಲ್ಲಿ ಆಯ್ಕೆಗೊಂಡ ಶಿಕ್ಷಣ ಸಂಯೋಜಕ ಬಿ.ಜನಾರ್ಧನರೆಡ್ಡಿ, ಶಿಕ್ಷಕ ಕೆ.ರವಣಪ್ಪ, ಶಾಸಕರ ಅಪ್ತ ಸಹಾಯಕ ಜಿವಿ.ನಾಗರಾಜ್,ಸಿ.ಆರ್.ಪಿ ವೆಂಕಟಾಚಲಪತಿಯವರನ್ನು ಅಭಿನಂದಿಸಲಾಯಿತು. ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ರಂಗಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎನ್.ವಸಂತರೆಡ್ಡಿ ಮುಖ್ಯ ಅತಿಥಿ ಭಾಷಣ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಾಂಸ್ಕೃತಿಕ ಕಲಾ ತಂಡದ ಸಂಘಟಕ, ಕವಿ ಮೂಡಲಗೊಲ್ಲಹಳ್ಳಿ ಕೆ.ನರಸಿಂಹಪ್ಪ ಪ್ರಾಸ್ತಾವಿಕ ಭಾಷಣ ಮಾಡಿದರು.
ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಪಿ.ಪ್ರಕಾಶರೆಡ್ಡಿ, ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಬಿ.ಹೆಚ್.ಮಂಜುನಾಥ್, ಬಟ್ಲಹಳ್ಳಿ ಸಿ.ಆರ್.ಪಿ ಜಿ.ವಿ.ಶ್ರೀನಿವಾಸ್, ಬನಹಳ್ಳಿ ಶ್ರೀನಿವಾಸ್, ವಂಗಿಮಾಳ್ಳು ರಮೇಶ್, ಕೀರ್ತಿ ಬಸಪ್ಪ ಲಗಳಿ, ಕೆ.ಎಂ.ಶಿವಪ್ರಸಾದ್, ಎನ್.ಎಂ.ಮಂಜುನಾಥ್, ಎಸ್.ರಮೇಶ್ ಹಾಗೂ ಕಲಾತಂಡ ಸದಸ್ಯರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

