ಶಾರದ ಆಂಗ್ಲ ಪ್ರೌಢಶಾಲೆಯಲ್ಲಿ ತೂಕ - ಅಳತೆ ಬಗ್ಗೆ ಜಾಗೃತಿ ಕಾರ್ಯಕ್ರಮ
ಅರಸೀಕೆರೆ: ಶಾಲಾ ದಿನಗಳಲ್ಲಿ ಮಕ್ಕಳಿಗೆ ಚಿಕ್ಕಂದಿನಿಂದಲೇ ವಿದ್ಯಾಭ್ಯಾಸದ ಜೊತೆಗೆ ವ್ಯವಹಾರಿಕ ಜ್ಞಾನ ಉಂಟಾಗಲು ಮನೆಗೆ ಅಗತ್ಯವಿರುವ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವ ಪ್ರಯತ್ನ ಆರಂಭಿಸಿದರೆ ತೂಕ ಮತ್ತು ಅಳತೆಯಲ್ಲಿ ವ್ಯಾಪಾರಸ್ಥರು ಮಾಡುವ ಮೋಸವನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ರೆಡ್ಕ್ರಾಸ್ ಸಂಸ್ಥೆಯ ತೂಕ ಮತ್ತು ಅಳತೆ ವಿಭಾಗದ ಅಧಿಕಾರಿ ಆನಂದ್ ಹೇಳಿದರು. ರೆಡ್ಕ್ರಾಸ್, ರೋಟರಿ, ಇನ್ನರ್ವೀಲ್ ಸಂಸ್ಥೆಗಳ ಆಶ್ರಯದಲ್ಲಿ ಶಾರದ ಆಂಗ್ಲ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ತೂಕ ಮತ್ತು ಅಳತೆಯ ಬಗ್ಗೆ ಜಾಗೃತಿ ಉಂಟುಮಾಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವ್ಯಾಪಾರಿಗಳು ಬಳಸುವ ಅಳತೆ ಮಾಪನಗಳಾದ ಎಲೆಕ್ಟ್ರಿಕ್ ಸ್ಕೇಲ್, ತಕ್ಕಡಿ ಹಾಗೂ ಲೀಟರ್ಗಳಲ್ಲಿ ಸಾಕಷ್ಟು ಏರು ಪೇರುಗಳಿರುತ್ತವೆ. ಪಡಿತರ ಪದಾರ್ಥಗಳನ್ನು ಪಡೆಯುವಾಗ ತಮ್ಮ ತಿಳಿವಳಿಕೆಯ ಸಹಾಯದಿಂದ ವ್ಯತ್ಯಾಸ ಉಂಟಾಗದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದರು. ನೀವು ಅಗತ್ಯ ವಸ್ತುಗಳನ್ನು ಕೊಳ್ಳುವಾಗ ವ್ಯಾಪಾರಸ್ಥರಿಂದ ತೂಕದಲ್ಲಿ ವ್ಯತ್ಯಾಸವಾಗಿರುವುದು ಕಂಡುಬಂದಲ್ಲಿ ಈ ಸಂಬಂಧ ಇಲಾಖೆಗೆ ದೂರು ನೀಡಿದಲ್ಲಿ ಮೋಸಗಾರರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷ ಪಿಜಿಯೋ ಮಧು ಮಾತನಾಡಿದರು. ಇನ್ನರ್ವೀಲ್ ಸಂಸ್ಥೆ ಅಧ್ಯಕ್ಷೆ ಅನ್ನಲಕ್ಷ್ಮೀ, ಸಂಧ್ಯಾ ವಿಶ್ವನಾಥ್, ರೋಟರಿ ಸಂಸ್ಥೆ ಅಧ್ಯಕ್ಷ ಪ್ರವೀಣಕುಮಾರ್, ಕಾರ್ಯದರ್ಶಿ ಬಿ.ಎಂ.ಮೋಹನ್, ಶಾಲೆ ಕಾರ್ಯದರ್ಶಿ ನಿಖಿಲ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

