ಗ್ರಾಮೀಣರ ಜೀವನ ಮಟ್ಟ ಸುಧಾರಿಸುವ ಉದ್ಯೋಗ ಖಾತ್ರಿ ಯೋಜನೆ: ಶಾಸಕ
ತಿಪಟೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಜನರ ಜೀವನ ಮಟ್ಟವನ್ನು ಸುಧಾರಿಸುವ ಪ್ರಮುಖ ಯೋಜನೆಯಾಗಿದ್ದು, ಇದು ಪ್ರಧಾನ ಮಂತ್ರಿಯವರ ಕನಸಿನ ಯೋಜನೆಯೂ ಆಗಿದೆ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ನಗರದ ಗುರುಕುಲ ಕಲ್ಯಾಣ ಮಂಟಪದಲ್ಲಿ ತಾ.ಪಂ. ವತಿಯಿಂದ ಏರ್ಪಡಿಸಿದ್ದ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಗಾಂಧೀಜಿಯವರು ಕಂಡಿದ್ದ ಗ್ರಾಮ ಸ್ವರಾಜ್ಯ ಕನಸನ್ನು ನನಸು ಮಾಡುವ ಏಕೈಕ ಯೋಜನೆ ಇದಾಗಿದೆ.
ಗ್ರಾಮೀಣ ಜನರಿಗೆ ಧೀರ್ಘಕಾಲದ ಜೀವನೋಪಾಯದ ಮಾರ್ಗಗಳನ್ನು ಬಲಪಡಿಸಬಹುದಾದ ಯೋಜನೆಯಾಗಿದ್ದು, ಚುನಾಯಿತ ಪ್ರತಿನಿಧಿಗಳು ಈ ಯೋಜನೆಯ ಬಗ್ಗೆ ಜನರಿಗೆ ಮನವರಿಕೆ ಮಾಡಿ ತಮ್ಮ ತಮ್ಮ ಗ್ರಾಮಗಳಲ್ಲಿ ಕೈಗೊಳ್ಳಬಹುದಾದಂತಹ ಅಭಿವೃದ್ಧಿ ಕೆಲಸಗಳನ್ನು ಮಾಡುವ ಪ್ರಯತ್ನ ಸದಸ್ಯರುಗಳ ಜವಾಬ್ದಾರಿಯಾಗಿದೆ.
ಈ ಕಾರ್ಯಗಾರದಲ್ಲಿ ಪಾಲ್ಗೊಂಡಿರುವ ಗ್ರಾ.ಪಂ. ಹಾಗೂ ತಾ.ಪಂ. ಸದಸ್ಯರು ಗ್ರಾಮೀಣ ಬದುಕಿನ ಅನುಭವವನ್ನು ಹಂಚಿಕೊಂಡು ಇಲಾಖೆ ನಿಯಮದಂತೆ ಗುಣಮಟ್ಟದ ಕಾಮಗಾರಿಗಳಿಗೆ ಆದ್ಯತೆ ನೀಡಬೇಕಿದೆ ಎಂದರು.
ಅನುಷ್ಠಾನ ಅಗತ್ಯ: ಕಾರ್ಯಗಾರದ ಅಧ್ಯಕ್ಷತೆ ವಹಿಸಿದ್ದ ತಾ.ಪಂ. ಅಧ್ಯಕ್ಷ ಭಾನುಪ್ರಕಾಶ್ ಮಾತನಾಡಿ ಸದಸ್ಯರು ಪಕ್ಷಭೇದ ಮರೆತು ಈ ಯೋಜನೆಯನ್ನು ಅನುಷ್ಠಾನಕ್ಕೆ ತರುವುದರ ಮೂಲಕ ಗ್ರಾಮಗಳಲ್ಲಿ ಅಭಿವೃದ್ಧಿ ಕೆಲಸವನ್ನು ಮಾಡಬೇಕು. ಅಧ್ಯಕ್ಷರು ಮತ್ತು ಗ್ರಾ.ಪಂ ಅಧಿಕಾರಿಗಳು ಉತ್ತಮ ಬಾಂಧವ್ಯ ಹೊಂದಿದ್ದರೆ ಮಾತ್ರ ಈ ಯೋಜನೆಯು ಹೆಚ್ಚು ಉಪಯೋಗಕಾರಿಯಾಗಿ ಜಾರಿಯಾಗಲು ಸಹಕಾರಿಯಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

