ಪ್ರತಿಯೊಬ್ಬ ವಿದ್ಯಾರ್ಥಿ ಆಶಾವಾದಿಯಾಗಿರಲಿ
ಹುಳಿಯಾರು: ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಅತಿ ಮುಖ್ಯವಾದದ್ದು, ವಿದ್ಯಾರ್ಥಿ ತಾನು ಮಾಡುವ ಕಾರ್ಯವನ್ನು ಶ್ರದ್ಧೆ, ಶಿಸ್ತಿನಿಂದ ಮಾಡಿದರೆ ಅದರಲ್ಲಿ ಜಯ ಸಿದ್ಧಿಸುತ್ತದೆ. ಅಂತೆಯೇ ಒಮ್ಮೆ ಎದುರಾದ ಸೋಲಿಗೆ ಎದೆಗುಂದದೆ ಪ್ರತಿಯೊಬ್ಬ ವಿದ್ಯಾರ್ಥಿಯು ಮುಂದೆ ಒಂದಲ್ಲ ಒಂದು ದಿನ ತಾನು ಗೆದ್ದೆ ಗೆಲ್ಲುತ್ತೇನೆ, ತನಗೂ ಉತ್ತಮವಾದ ಸ್ಥಾನ ದೊರೆಯುತ್ತದೆ ಎಂಬ ಆಶಾವಾದದಿಂದ ನಡೆಯಬೇಕು ಎಂದು ವಾಸವಿ ವಿದ್ಯಾಸಂಸ್ಥೆಯ ಸಹ ಕಾರ್ಯದರ್ಶಿ ಎಲ್.ಆರ್.ಚಂದ್ರಶೇಖರ್ ಕಿವಿಮಾತು ಹೇಳಿದರು.
ಹುಳಿಯಾರಿನ ವಾಸವಿ ಶಾಲಾ ಮೈದಾನದಲ್ಲಿ ದಸೂಡಿ ಪ್ರೌಢಶಾಲೆಯವರು ಆಯೋಜಿಸಿದ್ದ ಹೋಬಳಿ ಮಟ್ಟದ ಬಿ ವಿಭಾಗದ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿ ಸ್ವೀಕರಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಶಾಲೆಗಳಲ್ಲಿ ಆಟದ ಮೈದಾನದ ಕೊರತೆಯಿದ್ದು ಅನೇಕ ಶಾಲೆಗಳಲ್ಲಿ ಮಕ್ಕಳು ಎಲ್ಲಾ ಕ್ರೀಡೆಗಳಲ್ಲಿ ಸ್ಪರ್ಧಿಸದೆ ಹಿಂದೆ ಉಳಿಯುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಪಾಲ್ಗೊಳ್ಳುವ ಮೂಲಕ ತನ್ನ ಪ್ರತಿಭೆಯನ್ನು ಪ್ರದರ್ಶಿಸಲು ಸುವರ್ಣ ಅವಕಾಶವಿದ್ದು ಎಲ್ಲಾ ಆಟಗಳಲ್ಲಿ ಸಕ್ರಿಯವಾಗಿ ಸ್ಪರ್ಧಿಸುವಂತೆ ತಿಳಿಸಿದರು. ಕ್ರೀಡೆಯಲ್ಲಿ ಸೋಲು ಗೆಲವು ಮುಖ್ಯವಲ್ಲ. ವಿಶಾಲ ಮನೋಭಾವದಿಂದ ಆಟ ಆಡುವ ಮೂಲಕ ಶಾಲೆಗೆ ಕೀರ್ತಿ ತರುವಂತೆ ಆಶಿಸಿದರು. ದಸೂಡಿ ಪ್ರೌಢಶಾಲೆಯಲ್ಲಿ ಶಿಕ್ಷಕ ವೃತ್ತಿ ಸಲ್ಲಿಸಿ ಪ್ರಸ್ತುತ ದಾವಣಗೆರೆ ಜಿಲ್ಲೆಯ ಮಾಯಗೊಂಡನಹಳ್ಳಿಯಲ್ಲಿ ಪಿಎಸೈ ಆಗಿ ಕಾರ್ಯನಿರ್ವಹಿಸುತ್ತಿರುವ ಡಿ.ಸುರೇಶ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

