ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗೆ ಜ್ಞಾನಬುತ್ತಿ ಸತ್ಸಂಗ ಕೇಂದ್ರ
ಕ. ಪ್ರ. ವಾರ್ತೆ , ತುಮಕೂರು , ಜು.31
ತುಮಕೂರಿನ ಹೆಮ್ಮೆಯ ಸಂಸ್ಥೆಗಳಲ್ಲಿ ಒಂದಾದ ಹಾಗೂ ನಿರಂತರವಾಗಿ ನಡೆಯುತ್ತಾ ಬಂದಿರುವ ಜ್ಞಾನಬುತ್ತಿ ಸತ್ಸಂಗ ಕೇಂದ್ರ ಇದೀಗ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಸೇರಿ ಪ್ರಶಸ್ತಿ ಗರಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.
ಈ ಸತ್ಸಂಗ ಕೇಂದ್ರ ಪಿ. ಶಾಂತಿಲಾಲ್ ನೇತೃತ್ವದಲ್ಲಿ ಜುಲೈ 20, 2009 ರಲ್ಲಿ ಪ್ರಾರಂಭವಾಗಿ ಇಲ್ಲಿಯವರೆಗೂ ನಿಲ್ಲದೆ ಸತತವಾಗಿ 211 ವಾರದವರೆಗೂ ನಡೆಯುತ್ತಾ ಬಂದು ತನ್ನದೇ ಜ್ಞಾನವಂತ ಸಭಿಕರನ್ನು ಹೊಂದಿರುವ ಆಧ್ಯಾತ್ಮಿಕ ಸಂಸ್ಥೆಯಾಗಿದೆ.
ಇಂದಿಗೂ ಪ್ರತಿ ಮಂಗಳವಾರ ರಾತ್ರಿ 7 ರಿಂದ 8.15 ರವರೆಗೆ ನಗರದ ವಿದ್ಯಾವಾಹಿನಿ ಪ .ಪೂ. ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯುತ್ತಾ ಬಂದಿರುವುದು ಈ ಸತ್ಸಂಗ ಕೇಂದ್ರದ ಹೆಗ್ಗಳಿಕೆಯಾಗಿದೆ. ಭಾರತದಲ್ಲೇ 200 ವಾರಗಳಿಗೂ ಹೆಚ್ಚು ಕಾಲ ನಡೆಯುತ್ತಾ ಬಂದಿರುವ ಈ ಜ್ಞಾನಬುತ್ತಿ ಸತ್ಸಂಗ ಕೇಂದ್ರದ ಸಾಧನೆಯನ್ನು ಗುರುತಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆ ತನ್ನ ದಾಖಲೆಗೆ ಸೇರಿಸಿಕೊಂಡು ಪ್ರಶಸ್ತಿಯನ್ನು ಈ ಸತ್ಸಂಗ ಕೇಂದ್ರಕ್ಕೆ ನೀಡಿ ಗೌರವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

