ಶಾಲಾ ಮಕ್ಕಳಿಗೆ ಸಿಗುವ ಎಲ್ಲಾ ಸವಲತ್ತು ಲಭ್ಯ: ಬಸವರಾಜು
ಗುಬ್ಬಿ: ಸರ್ಕಾರದಿಂದ ಶಾಲಾ ಮಕ್ಕಳಿಗೆ ಸಿಗುವ ಎಲ್ಲಾ ಸವಲತ್ತುಗಳನ್ನು ಶಾಲಾ ಆರಂಭದ ದಿನವೇ ಒದಗಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ. ಬಸವರಾಜು ತಿಳಿಸಿದರು.
ಅವರು ಗುಬ್ಬಿ ತಾಲೂಕು ಅಮ್ಮಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪ್ರೌಢಶಾಲಾ ಮುಖ್ಯಶಿಕ್ಷಕರ ಸಭೆಯಲ್ಲಿ ಶೇಕಡಾ 100 ಫಲಿತಾಂಶ ತಂದ ಶಾಲಾ ಶಿಕ್ಷಕರಿಗೆ ಸನ್ಮಾನಿಸಿ ಮಾತನಾಡಿ ಗುಬ್ಬಿ ತಾಲೂಕಿನಲ್ಲಿ ಎಲ್ಲಾ ಪ್ರೌಢಶಾಲೆಗಳಿಗೆ ರಾಷ್ಟೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಕಟ್ಟಡ ನಿರ್ಮಾಣ, ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ಗ್ರಂಥಾಲಯ ಅಭಿವೃದ್ಧಿ ಸೇರಿದಂತೆ ವಿವಿಧ ಶೈಕ್ಷಣಿಕ ಚಟುವಟಿಕೆಗೆ ಪೂರಕವಾದ ಅನುದಾನವನ್ನು ನೀಡಲಾಗಿದೆ ಎಂದರು.
ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಿಂದಲೇ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ವಿಶೇಷ ಗಮನಹರಿಸಿ ಮುಂದಿನ ಪರೀಕ್ಷೆಯಲ್ಲಿ ಮತ್ತಷ್ಟು ಉತ್ತಮ ಫಲಿತಾಂಶ ಗಳಿಸಲು ಶಿಕ್ಷಕರು ಶ್ರಮವಹಿಸುವಂತೆ ಕರೆ ನೀಡಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸೋಮಶೇಖರ್ ಮಾತನಾಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಬಿಸಿಯೂಟ ಕಾರ್ಯಕ್ರಮವನ್ನು ಸಿಹಿಯೂಟದೊಂದಿಗೆ ಆರಂಭಸಲಾಗಿದೆ. ಉತ್ತಮ ಪೌಷ್ಟಿಕಾಂಶವುಳ್ಳ ಆಹಾರ ತಯಾರಿಕೆಗೆ ಮುಖ್ಯ ಶಿಕ್ಷಕರು ನಿಗಾವಹಿಸಬೇಕು. ಶುಚಿತ್ವ, ಕುಡಿಯುವ ನೀರು, ತಾಜಾ ತರಕಾರಿ ಬಳಸುವಂತೆ ತಿಳಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ನರೇಂದ್ರಕುಮಾರ್ ಮಾತನಾಡಿ ಕೊಠಡಿ ಕೊರತೆ ಎದುರಿಸುತ್ತಿರುವ ಶಾಲೆಗಳಿಗೆ ಶೀಘ್ರದಲ್ಲಿ ಕೊಠಡಿ ನಿರ್ಮಾಣ, ಪಾಠೋಪಕರಣ ಮತ್ತು ಪಿಠೋಪಕರಣ ಮಂತಾದ ಸೌಲಭ್ಯವನ್ನು ನೀಡಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ಸೃಷ್ಟಿಸಿಕೊಂಡುವಂತೆ ಶಿಕ್ಷಕರಿಗೆ ತಿಳಿಸಿದರು.
ಇದೇ ಸಂರ್ಭದಲ್ಲಿ ಶೇಕಡಾ 100 ರಷ್ಟು ಫಲಿತಾಂಶ ಪಡೆದ ತಾಲೂಕು ಅಮ್ಮಘಟ್ಟ ಸರ್ಕಾರಿ ಪ್ರೌಢಶಾಲೆಯ ಎಲ್ಲಾ ಶಿ ಕ್ಷಕರಿಗೆ ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

