ಮಾದಿಗರನ್ನು ಅಧ್ಯಕ್ಷರನ್ನಾಗಿ ಮಾಡಿ
ತುಮಕೂರು: ತುಮಕೂರು ತಾ.ಪಂ. ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಇದೇ 5 ರಂದು ಚುನಾವಣೆ ನಡೆಯಲಿದ್ದು ಆ ಸಮಿತಿಗೆ ಮಾದಿಗ ಜನಾಂಗದ ಸದಸ್ಯರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂದು ಬಾಬಾ ಅಂಬೇಡ್ಕರ್ ಜಗಜೀವನರಾಂ ಜನಜಾಗೃತಿ ಸಮಿತಿಯ ಕೆ.ವಿ. ಶ್ರೀನಿವಾಸ ಕಲ್ಕೆರೆ ಅಭಿಪ್ರಾಯಪಟ್ಟಿದ್ದಾರೆ. 2013 ರ ವಿಧಾನಸಭಾ ಚುನಾವಣೆಯಲ್ಲಿ ಹಲವು ಕಾರಣಗಳಿಗಾಗಿ ಕ್ಷೇತ್ರದ ಮಾದಿಗ ಜನಾಂಗದ ಮತದಾರರು ಅಧಿಕ ಸಂಖ್ಯೆಯಲ್ಲಿ ಬೆಂಬಲಿಸಿದ್ದರಿಂದ ತಾವು ಜಯಗಳಿಸಿದ್ದೀರ. ಆದ್ದರಿಂದ ತುಮಕೂರು ತಾ.ಪಂ. 19 ಜನ ಸದಸ್ಯರು ಬಿಜೆಪಿ ಪಕ್ಷದ ತಮ್ಮ ಬೆಂಬಲಿಗರೇ ಆಗಿರುವುದರಿಂದ ಮಾದಿಗ ಜನಾಂಗದ ತಾ.ಪಂ. ಸದಸ್ಯರೊಬ್ಬರನ್ನು ಸಾಮಾನ್ಯ ಸ್ಥಾಯಿ ಸಮಿತಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

