ತುಮಕೂರು

ಕಾರು ಅಡ್ಡಗಟ್ಟಿ ನಗ ನಾಣ್ಯ ದರೋಡೆ

Published On :

ಮದ್ದೂರು: ಬೆಂಗಳೂರು ಮೂಲದ ವ್ಯಕ್ತಿಯೊಬ್ಬರ ಕಾರು ಅಡ್ಡಗಟ್ಟಿದ ಮೂವರು ದುಷ್ಕರ್ಮಿಗಳ ಗುಂಪು ನಗದು ಹಾಗೂ ಚಿನ್ನಾಭರಣ ದೋಚಿರುವ ಘಟನೆ ತಾಲೂಕಿನ ನಿಡಘಟ್ಟ ಸಮೀಪ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಜರುಗಿದೆ.
ಬೆಂಗಳೂರಿನ ಜ್ಞಾನಭಾರತಿ ಸಮೀಪದ ಶ್ರೀಗಂಧ ಕಾವಲುಪಡೆ ಬಡಾವಣೆ ನಿವಾಸಿ ಬಿ.ಎಂ.ಪ್ರವೀಣ ಮತ್ತು ಕುಟುಂಬದವರು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ಕಲ್ಲು ತೂರಿದ ದುಷ್ಕರ್ಮಿಗಳು ಪ್ರವೀಣ ಬಳಿ ಇದ್ದ 1500 ನಗದು, 2 ಮೊಬೈಲ್ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಬಿ.ಎಂ. ಪ್ರವೀಣ ಕುಶಾಲ್ ನಗರದಲ್ಲಿ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ತಮ್ಮ ಕುಟುಂಬದವರೊಂದಿಗೆ ಇನೋವಾ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ನಿಡಘಟ್ಟ ಸಮೀಪದ ಬೆಂಗಳೂರು - ಮೈಸೂರು ಹೆದ್ದಾರಿ ದರ್ಗಾ ಬಳಿ ರಾತ್ರಿ 8.30ರ ಸುಮಾರಿಗೆ ಕಾರಿಗೆ ಕಲ್ಲು ತೂರಿ ಅಡ್ಡಗಟ್ಟಿ ಪ್ರಯಾಣಿಕರಿಗೆ ಕಬ್ಬಿಣದ ರಾಡು ತೋರಿಸಿ ಬೆದರಿಕೆ ಹಾಕಿದ ನಂತರ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಪ್ರವೀಣ ಜೊತೆ ನವ ದಂಪತಿ ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದರು. ಅವರ ಬಳಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ಇತ್ತು. ಅವರು ಬ್ಯಾಗಿನಲ್ಲಿ ಆಭರಣಗಳು ಇಟ್ಟಿದ್ದ ಕಾರಣ ದುಷ್ಕರ್ಮಿಗಳ ಕಣ್ಣಿಗೆ ಸಿಗದೇ ಆಭರಣಗಳನ್ನು ರಕ್ಷಣೆ ಮಾಡಿಕೊಂಡಿದ್ದರು. ಪ್ರವೀಣ ನೀಡಿದ ದೂರಿನ ಮೇಲೆ ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜಣ್ಣ, ವೃತ್ತ ನಿರೀಕ್ಷಕ ಪುಟ್ಟಓಬಳರೆಡ್ಡಿ, ಸಬ್ಇನ್ಸ್ಪೆಕ್ಟರ್ ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.