ಪರಿಸರ ಜಾಗೃತಿ ಆಂದೋಲನ
ತುಮಕೂರು: ಇಲ್ಲಿನ ಸರಸ್ವತಿಪುರಂನಲ್ಲಿರುವ ಆಚಾರ್ಯ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮವನ್ನು ಬೆಳಿಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಪರಿಸರ ಜಾಗೃತಿ ಆಂದೋಲನದ ಕಾರ್ಯಕ್ರಮದ ಅಂಗವಾಗಿ ಮರಳೂರು ದಿಣ್ಣೆ, ಸರಸ್ವತಿ ಪುರಂ ರಸ್ತೆಗಳ ಬದಿಯಲ್ಲಿ ಸಾರ್ವಜನಿಕರ ಸಹಕಾರದಿಂದ 200 ರಿಂದ 250 ಗಿಡಗಳನ್ನು ನೆಟ್ಟು ಸಂರಕ್ಷಿಸಲು ತೀರ್ಮಾನಿಸಲಾಗಿದೆ. ಉದ್ಘಾಟನೆಯನ್ನು ಜಿಲ್ಲಾ ಸಾಮಾಜಿಕ ಅರಣ್ಯ ವಲಯದ ಉಪಅರಣ್ಯ ಸಂರಕ್ಷಣಾಧಿಕಾರಿಗಳು ನಡೆಸಿಕೊಡಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಸಿ. ಯತಿರಾಜು, ಸುಬ್ರಹ್ಮಣ್ಯ ಅಡಿಗ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಎಸ್. ಮಂಜುಳ, ಸನತ್, ಶಿವಕುಮಾರ್ ಭಾಗವಹಿಸಲಿದ್ದಾರೆ. ತುಮಕೂರು ವಿಜ್ಞಾನ ಕೇಂದ್ರದ ಅಧ್ಯಕ್ಷ ಸಿ. ವಿಶ್ವನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
8 ರಂದು ಪ್ರತಿಭಾ ಪುರಸ್ಕಾರ
ಶಿರಾ ತಾಲೂಕು ಚಿಕ್ಕನಹಳ್ಳಿಯಲ್ಲಿ ಜೂ.8 ರಂದು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ. ಜಯಚಂದ್ರ ನೇತೃತ್ವದಲ್ಲಿ ನಿವೃತ್ತ ಪ್ರೌಢಶಾಲಾ ಸಹ ಶಿಕ್ಷಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 2013ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ. 85 ಹಾಗೂ ಅದಕ್ಕಿಂತ ಹೆಚ್ಚು ಫಲಿತಾಂಶ ಪಡೆದ ಶಿರಾ ತಾಲೂಕಿನ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯ ಶಿಕ್ಷಕರ, ಮುಖ್ಯ ಶಿಕ್ಷಕರ ಮಕ್ಕಳು, ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು. ಆಸಕ್ತರು ನಾಗಭೂಷರು, ಜಿ.ವಿ., ಅಧ್ಯಕ್ಷರು, ಕ.ರಾ. ಪ್ರೌ. ಶಾ.ಸ.ಶಿ. ಸಂಘ, ಶಿರಾ, ಮೊಬೈಲ್ 96117 33142 ಸಂಪರ್ಕಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

