ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 9 ಲಾರಿ ವಶ
ಕ.ಪ್ರ. ವಾರ್ತೆ , ಶಿರಾ , ಜೂ. 5
ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 9 ಲಾರಿಗಳನ್ನು ಕಳ್ಳಂಬೆಳ್ಳ ಠಾಣಾ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ.
ತಾಲೂಕಿನ ಕಳ್ಳಂಬೆಳ್ಳ ಸಮೀಪ ಕರೇಜವನಹಳ್ಳಿ ಟೋಲ್ಗೇ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಕ್ರಮ ಕೈಗೊಂಡಿದ್ದಾರೆ. ಯಾವುದೇ ದಾಖಲೆಗಳಿಲ್ಲದ ಹಾಗೂ ಸರ್ಕಾರಕ್ಕೆ ರಾಜಧನ ಪಾವತಿ ಮಾಡದೆ ಅಕ್ರಮವಾಗಿ ಮರಳು ಸಾಗಿಸಲಾಗುತ್ತಿತ್ತೆನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಸಬ್ ಇನ್ಸೆಪೆಕ್ಟರೆ ಘೋರ್ಪಡೆ ಯಲ್ಲಪ್ಪ ಮತ್ತು ಸಿಬ್ಬಂದಿ ಸದರಿ 9 ಲಾರಿಗಳನ್ನು ವಶಪಡಿಸಿಕೊಂಡು ಕೇಸು ದಾಖಲಿಸಿದ್ದಾರೆ.
18 ಮರಳು ತುಂಬಿದ ಲಾರಿ ವಶ
ಕುಣಿಗಲ್: ತಾಲೂಕಿನ ವಿವಿಧೆಡೆ ಅಕ್ರಮ ಮರಳು ಸಾಗಾಣೆ ವಿರುದ್ಧ ತಹಸೀಲ್ದಾರ್ ಜಗದೀಶ್ ನೇತೃತ್ವದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಬುಧವಾರ ರಾತ್ರಿಯಿಂದ ಕಾರ್ಯಾಚರಣೆ ನಡೆಸಿ 18 ಮರಳು ತುಂಬಿದ ಲಾರಿಗಳನ್ನು ವಶಪಡಿಸಿಕೊಂಡು, ತಾಲೂಕು ಕಚೇರಿ ಆವರಣದಲ್ಲಿ ನಿಲ್ಲಿಸಿದ್ದಾರೆ. ತಾಲೂಕಿನ ಮೂಲಕ ಇತರೆ ಜಿಲ್ಲೆಗಳಿಂದ ಅಕ್ರಮ ಮರಳು ಸಾಗಾಣೆ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಹಾಗೂ ಕಂದಾಯ ಇಲಾಖಾ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದಾರೆ.
ಎಂ.ಡಿ. ಶ್ರೀನಿವಾಸ್ ಆಯ್ಕೆಗೆ ಸಂತಸ
ತುಮಕೂರು: ಮಧುಗಿರಿ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಇತಿಹಾಸ ತಜ್ಞ ಎಂ.ಡಿ. ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಿರುವುದು ತುಂಬಾಸೂಕ್ತ ಎಂದು ಸಿದ್ದಾರ್ಥ ಪ್ರೌಢಶಾಲೆಯ ಎಂ.ವಿ. ನಂಜಪ್ಪ ಅಭಿಪ್ರಾಯಪಟ್ಟಿದ್ದಾರೆ.
'ಡೊನೇಷನ್ ಹಾವಳಿ ತಡೆಗಟ್ಟದಿದ್ದರೆ ಹೋರಾಟ'
ತಿಪಟೂರು: ರಾಜ್ಯದಲ್ಲಿ ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಪ್ರವೇಶಾತಿ ಪ್ರಾರಂಭವಾಗಿದ್ದು ಕೆಲ ಖಾಸಗಿ ಸಂಸ್ಥೆಗಳು ಸರ್ಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿ ದೇಣಿಗೆ ರೂಪದಲ್ಲಿ ಅಕ್ರಮವಾಗಿ ಡೊನೇಷನ್ ವಸೂಲಿ ಮಾಡುತ್ತಿರುವುದು ಮತ್ತು ದಾಖಲಾತಿಗೆ ಸಂಗ್ರಹಿಸಬೇಕಾದ ಶುಲ್ಕ ಕುರಿತಂತೆ ಮೀಸಲಾತಿ ನಿಯಮವನ್ನು ಅನುಸರಿಸುತ್ತಿಲ್ಲ ಎಂದು ಕಲ್ಪತರು ಜನಪರ ವೇದಿಕೆ ಸಲಹಾ ಸಮಿತಿ ಮುಖಂಡ ತರಕಾರಿ ಎಂ.ನಾಗರಾಜು ದೂರಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ಕೇವಲ ವ್ಯಾಪಾರ ದಂಧೆಯನ್ನಾಗಿ ಮಾಡಿಕೊಂಡಿದ್ದು, ಹಣಗಳಿಕೆಯನ್ನೇ ಮೂಲ ಉದ್ದೇಶವನ್ನಾಗಿಸಿಕೊಂಡಿವೆ. ಬಡ ಮತ್ತು ಮಧ್ಯಮ ವರ್ಗದವರುಗಳಿಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಎಂಬುದು ಕನಸಿನ ಮಾತಾಗಿದೆ. ಎಲ್.ಕೆ.ಜಿ, ಯು.ಕೆ.ಜಿ ಮತ್ತು ಪ್ರಾಥಮಿಕ ಶಿಕ್ಷಣಕ್ಕೆ ಖಾಸಗಿ ಶಾಲೆಗಳು ಸಾವಿರಾರು ರು.ಗಳನ್ನು ಡೊನೇಷನ್ ರೂಪದಲ್ಲಿ ಪಡೆಯುತ್ತಿದ್ದು, ಬಡ ಮಕ್ಕಳ ಉತ್ತಮ ಶಿಕ್ಷಣ ಪಡೆಯುವುದು ಕಷ್ಟವಾಗಿದೆ. ಈ ಡೊನೇಷನ್ ಹಾವಳಿ ತಿಪಟೂರಿನಲ್ಲಿ ವ್ಯಾಪಕವಾಗಿ ನಡೆಯುತ್ತಿದ್ದು, ಇದು ಕಾನೂನು ಬಾಹಿರವಾಗಿದೆ. ಸರ್ಕಾರದ ಸುತ್ತೋಲೆ ಪ್ರಕಾರ ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾದ ಶಿಕ್ಷಣ ಇಲಾಖೆ ಮೃದು ಧೋರಣೆ ತಳೆದಿರುವುದು ತರುವಲ್ಲ. ಡೊನೇಷನ್ ದಂಧೆಯಿಂದ ಬಡ ಮಕ್ಕಳು ಉತ್ತಮ ಶಿಕ್ಷಣದಿಂದ ವಂಚಿತರಾಗಿ, ಸಮಾಜ ವಿರೋಧಿ ಕೃತ್ಯಗಳಲ್ಲಿ ತೊಡಗುವಂತಾಗುತ್ತದೆ. ಆದ್ದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಶಾಲೆಗಳಲ್ಲಿ ಡೊನೇಷನ್ ಹಾವಳಿ ನಿಯಂತ್ರಿಸಲು ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಂಡು ಅಂತಹ ಶಾಲೆಗಳ ಮಾನ್ಯತೆಯನ್ನು ರದ್ದುಗೊಳಿಸಬೇಕು. ಇಲ್ಲದಿದ್ದರೆ ಇನ್ನಿತರೆ ಸಂಘಟನೆಗಳೊಂದಿಗೆ ಹೋರಾಟ ನಡೆಸಬೇಕಾಗುತ್ತದೆ ಎಂದು ತರಕಾರಿ ಎಂ.ನಾಗರಾಜು ಎಚ್ಚರಿಕೆ ನೀಡಿದ್ದಾರೆ.
ರಸ್ತೆ ವಿಭಜಕಕ್ಕೆ ಡಿಕ್ಕಿ: ಬೈಕ್ ಸವಾರ ಸಾವು
ಕುಣಿಗಲ್: ಆದಿಚುಂಚನಗಿರಿ ಕ್ಷೇತ್ರಕ್ಕೆ ಬೆಂಗಳೂರಿನಿಂದ ಬರುತ್ತಿದ್ದ ಬೈಕ್ ಸವಾರ ರಾಹೆ 48ರ ಪಟ್ಟಣದ ಬೈಪಾಸ್ನ ಚನ್ನತಿಮ್ಮನಪಾಳ್ಯದ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೆ ಮೃತಪಟ್ಟ ಘಟನೆ ಬುಧವಾರ ಬೆಳಗಿನ ಜಾವ ಮೂರು ಗಂಟೆಯಲ್ಲ ಸಂಭವಿಸಿದೆ. ಮೃತನನ್ನು ಬೆಂಗಳೂರಿನ ದೇವನಹಳ್ಳಿ ಮುನಿರಾಜು (30) ಎಂದು ಗುರುತಿಸಲಾಗಿದೆ. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಿ.ಕೆ. ಆನಂದ್ ನೇಮಕ
ತುಮಕೂರು: ಕೆಪಿಸಿಸಿ ನಿರ್ದೇಶನದ ಮೇರೆಗೆ ಅಂತಾರಾಷ್ಟ್ರೀಯ ಕ್ರೀಡಾಪಟು ಟಿ.ಕೆ. ಆನಂದ್ ಅವರನ್ನು ಡಿಸಿಸಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಷಫಿ ಅಹಮದ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

