ತುಮಕೂರು

ಹೊಂಗೆ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಿಸಿ: ಬಸವರಾಜು

Published On :

ತುಮಕೂರು: ಪ್ರತಿಯೊಬ್ಬರು ಹೊಂಗೆ ಗಿಡಗಳನ್ನು ನೆಡುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕೆಂದು ಸಂಸದ ಜಿ.ಎಸ್. ಬಸವರಾಜು ಕರೆ ನೀಡಿದರು. ಅವರು ತುಮಕೂರಿನ ವಿದ್ಯಾ ನಗರದ ಗಣಪತಿ ಪಾರ್ಕಿನಲ್ಲಿ ಜಿಲ್ಲಾ ಬಸವ ಸೇನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಂಸದರು ಸಸಿಗಳನ್ನು ನೆಟ್ಟು ಮಾತನಾಡಿದರು.
ಮುಂಗಾರು ಮಳೆ ಆರಂಭವಾಗಿರುವುದರಿಂದ ನಗರದ ಎಲ್ಲೆಡೆ ಸಸಿ ನೆಡುವ ಕಾರ್ಯಕ್ರಮ ಆರಂಭಿಸಬೇಕು. ಅರಣ್ಯ ಇಲಾಖೆಯವರು ವಿಶೇಷ ಆಸಕ್ತಿ ವಹಿಸಿ ಸಸಿ ನೆಡುವ ಕಾರ್ಯಕ್ರಮವನ್ನು ಪ್ರಾರಂಭಿಸಬೇಕು ಎಂದು ಹೇಳಿದರು.
ಜಿಲ್ಲಾ ಬಸವ ಸೇನೆ ಉಪಾಧ್ಯಕ್ಷ ಟಿ.ಆರ್. ಸದಾಶಿವಯ್ಯ ಮಾತನಾಡಿ ಶಾಲಾ ಕಾಲೇಜು ಆವರಣ ಸೇರಿದಂತೆ ರಸ್ತೆ ಪಕ್ಕ ಮತ್ತಿತರೆಡೆ ಗಿಡ ಬೆಳೆಸುವ ಪ್ರವೃತ್ತಿಯನ್ನು  ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕೆಂದರು. ಹೊಂಗೆ ಗಿಡಗಳನ್ನು ಹಾಗೂ ಹಣ್ಣು ಹಂಪಲಿನ ಗಿಡಗಳನ್ನು ಬೆಳೆಸಲು ಮನವಿ ಮಾಡಿಕೊಂಡರು. ಜಿಲ್ಲಾ ಬಸವ ಸೇನೆ ಅಧ್ಯಕ್ಷ ಪಿ. ಗಂಗರಾಜು ಅಧ್ಯಕ್ಷತೆ ವಹಿಸಿದ್ದರು. ಎಪಿಎಂಸಿ ಉಪಾಧ್ಯಕ್ಷ ಶಿವಕುಮಾರ್, ತಹಸೀಲ್ದಾರ್ ಮಾರುತಿ ಪ್ರಸನ್ನ, ನಗರಸಭಾ ಸದಸ್ಯ ರವಿಕುಮಾರ್, ಜಿಲ್ಲಾ ಕನ್ನಡ ಸೇನೆ ಅಧ್ಯಕ್ಷ ಧನಿಯಾಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.