ತುಮಕೂರು

ಧನಂಜಯ ಅವಿರೋಧ ಆಯ್ಕೆ

Published On :

ತುರುವೇಕೆರೆ: ತಾಲೂಕಿನ ಭೈತರಹೊಸಳ್ಳಿ ಗ್ರಾಮ ಪಂಚಾಯ್ತಿಯ ಖಾಲಿ ಇದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಜಿ. ಧನಂಜಯ  ಅವರು ಅವಿರೋಧವಾಗಿ ಆಯ್ಕೆಯಾದರು.  ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ಮಂಜೇಗೌಡ ಕರ್ತವ್ಯ ನಿರ್ವಹಿಸಿದರು. ಉಪಾಧ್ಯಕ್ಷರಾಗಿ ಚಂದ್ರಮ್ಮ ಅಧಿಕಾರದಲ್ಲಿದ್ದಾರೆ. ನೂತನ ಅಧ್ಯಕ್ಷರನ್ನು ಎಪಿಎಂಸಿ ನಿರ್ದೇಶಕರಾದ ರಾಮಚಂದ್ರು, ಕುಶಾಲ್ ಕುಮಾರ್, ರಾಜೇಶ್ ಹಾಗೂ ಗ್ರಾಮ ಪಂಚಾಯ್ತಿಯ ಸದಸ್ಯರುಗಳು ಅಭಿನಂದಿಸಿದರು. ಕುಡಿಯುವ ನೀರು, ವಿದ್ಯುತ್ ಹಾಗೂ ಸ್ವಚ್ಛತೆಗೆ ಮೊದಲ ಆಧ್ಯತೆ ನೀಡುವುದಾಗಿ ನೂತನ ಅಧ್ಯಕ್ಷ ಜಿ.ಧನಂಜಯ ಭರವಸೆ ನೀಡಿದ್ದಾರೆ.
ಇಂದು ಚಿತ್ರಕಲೆ ಪ್ರಬಂಧ ಸ್ಪರ್ಧೆ
ತುಮಕೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ತುಮಕೂರು ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ತುಮಕೂರು ನಗರದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಜೂ. 8 ರಂದು ಬಾಲಭವನದ ಆವರಣದಲ್ಲಿ ಏರ್ಪಡಿಸಿದೆ.
ಇಂದು ನಾಟಕ
ತುಮಕೂರು: ತುಮಕೂರು ಗ್ರಾಮಾಂತರದ ಹೆಬ್ಬೂರು ಹೋಬಳಿಯ ಮಾಕನಹಳ್ಳಿ ಅಪ್ಪಾಜಪ್ಪನಪಾಳ್ಯದಲ್ಲಿ ಮುನೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜಗಜ್ಯೋತಿ ಬಸವೇಶ್ವರ ನಾಟಕವನ್ನು ಜೂ. 8 ರಂದು ರಾತ್ರಿ 8 ಗಂಟೆಗೆ ಏರ್ಪಡಿಸಲಾಗಿದೆ.
ಅರ್ಜಿ ಆಹ್ವಾನ
ಚಿಕ್ಕನಾಯಕನಹಳ್ಳಿ:  ರಾಷ್ಟ್ರೀಯ ಕೃಷಿ ವಿಮಾ ಯೋಜನೆಯನ್ನು 2013ರ ಮುಂಗಾರು ಹಂಗಾಮಿನಲ್ಲಿ ಅನುಷ್ಠಾನ ಗೊಳಿಸಲು ಘಟಕವಾರು ಬೆಳೆ ವಿಮೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಈ ಯೋಜನೆಯ ಉದ್ದೇಶ- ಅಧಿಸೂಚಿತ ಬೆಳೆಗಳು  ಪ್ರಕೃತಿ ವಿಕೋಪ, ಕೀಟಬಾಧೆ ಮತ್ತು ರೋಗಗಳಿಂದ ವಿಫಲಗೊಂಡಲ್ಲಿ, ಅಂತಹ ಬೆಳೆಗಳನ್ನು ಅಧಿಸೂಚಿತ ಘಟಕಗಳಲ್ಲಿ ಬೆಳೆದ ರೈತರಿಗೆ ವಿಮಾ ರಕ್ಷೆ ಹಾಗೂ ಆರ್ಥಿಕ ನೆರವನ್ನು ನೀಡಲಾಗುತ್ತದೆ. ಕೃಷಿ ವರಮಾನವನ್ನು ವಿಶೇಷವಾಗಿ ಪ್ರಕೃತಿ ವಿಕೋಪಗಳಿಗೆ ತುತ್ತಾದ ವರ್ಷಗಳಲ್ಲಿ ಸ್ಥಿರಗೊಳಿಸಲು ನೆರವಾಗುವುದು, ಪ್ರಕೃತಿ ವಿಕೋಪಗಳಿಂದ ಪ್ರವಾಹ, ಆಲಿಕಲ್ಲು ಮಳೆ, ಭೂಕುಸಿತ ಮತ್ತು ಚಂಡಮಾರುತ ಇವುಗಳು ಉಂಟಾದ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ನಷ್ಟದ ನಿರ್ಧರಣೆಗಾಗಿ ಅಳವಡಿಸಿಕೊಳ್ಳಲಾಗುವುದು. ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 48 ಗಂಟೆಯೊಳಗೆ ತಿಳಿಸಬೇಕು.  ರೈತರು ಹೆಚ್ಚಿನ ವಿವರಗಳಿಗೆ ಕೃಷಿ ಇಲಾಖೆಯನ್ನಾಗಲಿ, ಅಥವಾ ರೈತ ಸಂಪರ್ಕ ಕೇಂದ್ರಗಳನ್ನಾಗಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಕೃಷಿ  ಸಹಾಯಕ ನಿದೇಶಕರಾದ ಕೃಷ್ಣಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.