ತುಮಕೂರು

ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಿ

Published On :

ಕ.ಪ್ರ.ವಾರ್ತೆ   ಮಧುಗಿರಿ   ಜೂ 7
ಜೀವ ಸಂಕುಲ ಬೆಳವಣಿಗೆ, ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಬೇಕು ಎಂದು ಹಿರಿಯ ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ಅಭಿಪ್ರಾಯಪಟ್ಟರು.
ಮಧುಗಿರಿ ಕಸಬಾ ಬಿಜವರ ಗ್ರಾಮದ ಶಿವಾನಂದ ಪ್ರೌಢಶಾಲೆ ಆವರಣದಲ್ಲಿ ಏರ್ಪಟಾಗಿದ್ದ ಭಾರತ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು  ಶ್ರೀಯಾಂಕ ಏಜುಕೇಷನ್ ಅಂಡ್ ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಕಾಡು ಬೆಳಸುವ ಮೂಲಕ ಜೀವ ವೈವಿಧ್ಯ ಸಂರಕ್ಷಣೆಗೆ ಮುಂದಾಗಬೇಕು. ಮರ, ಗಿಡ ಸಸ್ಯ ಸಂಕುಲ ಕಾಪಾಡಿದಾಗ ಮಾತ್ರ ಪ್ರಾಣಿ ಸಂಕುಲ ಜೀವಿಸಲು ಸಾಧ್ಯ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪರಿಸರ ರಕ್ಷಿಸಲು ಎಲ್ಲರೂ ಕಟಿಬದ್ಧರಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಶ್ರಿಯಾಂಕ ಟ್ರಸ್ಟ್ ಅಧ್ಯಕ್ಷ ಎಂ.ವಿ. ಮೂಡ್ಲಗಿರೀಶ್ ಪ್ರತಿಯೊಬ್ಬರು ಗಿಡ ಬೆಳಸುವ ಮೂಲಕ ಪರಿಸರ ರಕ್ಷಣೆಗೆ ಅಧಿಕ ಒತ್ತು ಕೊಡಬೇಕು ಎಂದರು. ವಲಯ ಅರಣ್ಯಾಧಿಕಾರಿ ಗೋವರ್ದನ್ ಸಿಂಗ್, ಗ್ರಾ.ಪಂ.ಸದಸ್ಯ ಗಂಗಹನುಮಯ್ಯ, ಅಂಗನವಾಡಿ ಕಾರ್ಯಕರ್ತೆ ಪ್ರೇಮಾ, ಸಂಪನ್ಮೂಲ ಸದಸ್ಯ ನರಸರೆಡ್ಡಿ, ಶಿವಕುಮಾರ, ಗೋಪಾಲರೆಡ್ಡಿ, ಮಜುಂದಾರ್ ಇನ್ನು ಅನೇಕರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.