ಜನಪದ, ರಂಗಗೀತೆ 23ರಂದು ಸ್ಪರ್ಧೆ
ತಿಪಟೂರು: ನಗರದ ಸಂಕಲ್ಪ ಶ್ರೀ ಹೆಲ್ತ್ ಏಜುಕೇಷನ್ ಮತ್ತು ರೂರಲ್ ಡೆವಲಪ್ಮೆಂಟ್ ಸೊಸೈಟಿ ವತಿಯಿಂದ ತಾಲೂಕು ಮಟ್ಟದಲ್ಲಿ ನಶಿಸುತ್ತಿರುವ ಮೂಲ ಜಾನಪದ, ರಂಗಗೀತೆ, ಸೊಬಾನ ಪದ, ಗಾಯನ ಸ್ಪರ್ಧೆ ಜೂ.23ರಂದು ಹಮ್ಮಿಕೊಳ್ಳಲಾಗಿದೆ. ಆಸಕ್ತರು ನೋಂದಾಯಿಸಿಕೊಳ್ಳಲು ಜೂ.22 ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ 8711061603, 8453371535 ಅಥವಾ 8880525269 ಸಂಪರ್ಕಿಸಬಹುದು.
ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ತಿಪಟೂರು: ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಂಗಾಪುರ ಗ್ರಾಪಂ ವ್ಯಾಪ್ತಿಯ ಹೊಸಹಳ್ಳಿ ಹಾಗೂ ಗ್ಯಾರಘಟ್ಟ ಗ್ರಾಪಂ ವ್ಯಾಪ್ತಿಯ ಸೂರನಹಳ್ಳಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಸಹಾಯಕಿ ಗೌರವಧನ ಸೇವೆಗೆ ಸಾಮಾನ್ಯ ವರ್ಗದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಜೂ.15ರ ಸಂಜೆ 5.30ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ತಿಪಟೂರಿನಲ್ಲಿ ಇಟ್ಟಿರುವ ಟೆಂಡರ್ ಪೆಟ್ಟಿಗೆಯಲ್ಲಿ ದಾಖಲೆಗಳೊಂದಿಗೆ ಹಾಕಬೇಕು.
ಹಾಸ್ಟೆಲ್ಗೆ ಅರ್ಜಿ ಆಹ್ವಾನ
ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸುವ ಸರ್ಕಾರಿ ಬಾಲಕರ ಕಾಲೇಜು ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2013-14ನೇ ಸಾಲಿಗೆ ತಾಲೂಕು ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಪಿಯುಸಿ, ಬಿಎ, ಬಿಕಾಂ, ಬಿಎಸ್ಡಬ್ಲ್ಯು, ಐಟಿಐ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಜು. 30 ಕೊನೆ ದಿನ ಎಂದು ಸಮಾಜ ಕಲ್ಯಾಣಾಧಿಕಾರಿ ಗಣೇಶ್ ತಿಳಿಸಿದ್ದಾರೆ.
ವಿದ್ಯಾರ್ಥಿ ನಿಲಯಪ್ರವೇಶವಕಾಶ
ಕೊರಟಗೆರೆ: ಪಟ್ಟಣ ಮತ್ತು ಅಕ್ಕಿರಾಂಪುರದಲ್ಲಿ ಇಲಾಖೆಯ ವತಿಯಿಂದ ನಡೆಯುತ್ತಿರುವ ಸಾರ್ವಜನಿಕ ಬಾಲಕರ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಉಚಿತ ಪ್ರವೇಶವಕಾಶ ಒದಗಿಸಲು 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಂದ ಹಾಗೂ ಕಾಶಾಪುರ ಗೇಟಿನ ಹಕ್ಕಿ-ಪಿಕ್ಕಿ ಕಾಲೋನಿಯ ಸರ್ಕಾರಿ ಆಶ್ರಮ ಶಾಲೆ ಇಲ್ಲಿಗೆ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಎಲ್ಲಾ ಜಾತಿಯ ಅರ್ಹ ವಿದ್ಯಾರ್ಥಿಗಳು ಸಂಬಂಧಿಸಿದ ವಾರ್ಡನ್ ಅವರಿಂದ ಅಥವಾ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಕೊರಟಗೆರೆ ಇಲ್ಲಿ ನಿಗದಿತ ಅರ್ಜಿ ಪಡೆದು ಇದೇ ತಿಂಗಳ 10 ರೊಳಗೆ ಕಚೇರಿ ವೇಳೆಯಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

