ಅಪರಾಧ ಶೀಘ್ರ ತಡೆಗಟ್ಟಿ: ಶಾಸಕ ತಿಮ್ಮರಾಯಪ್ಪ
ಪಾವಗಡ: ಬಾಲ್ಯ ವಿವಾಹ ಸೇರಿದಂತೆ ಮಕ್ಕಳ ಕಳ್ಳ ಸಾಗಾಣಿಕೆ, ಮಹಿಳಾ ದೌರ್ಜನ್ಯ ಪ್ರಕರಣಗಳು ತಾಲೂಕಿನಲ್ಲಿ ಹೆಚ್ಚುತ್ತಿದ್ದು ಅದನ್ನು ಪತ್ತೆ ಹಚ್ಚಿ ಅಪರಾಧಗಳನ್ನು ತಡೆಗಟ್ಟುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯೋನ್ಮುಖವಾಗಬೇಕೆಂದು ಶಾಸಕ ಕೆ.ಎಂ. ತಿಮ್ಮರಾಯಪ್ಪ ತಿಳಿಸಿದರು. ತಾಲೂಕು ಆಡಳಿತ, ತಾ.ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಜಂಟಿ ಆಶ್ರಯದಲ್ಲಿ ಸೋಮವಾರ ಪಟ್ಟಣದ ಗುರುಭವನದಲ್ಲಿ ಏರ್ಪಡಿಸಿದ್ದ ಮಹಿಳೆಯರ ಮೇಲೆ ದೌರ್ಜನ್ಯ, ಮಕ್ಕಳ ಕಳ್ಳ ಸಾಗಾಣಿಕೆ ಮತ್ತು ಬಾಲ್ಯವಿವಾಹದ ಬಗ್ಗೆ ಅರಿವು ಮೂಡಿಸುವ ಆಂದೋಲನಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಬಾಲ ಕಾರ್ಮಿಕ ಪದ್ಧತಿ ಸೇರಿದಂತೆ ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಮಕ್ಕಳ ಕಳ್ಳ ಸಾಗಾಣಿಕೆಯ ಪ್ರಕರಣಗಳು ಹೆಚ್ಚುತ್ತಿದ್ದು ಇಂತಹ ಆಘಾತಕಾರಿ ಘಟನೆಗಳನ್ನು ಪತ್ತೆ ಹಚ್ಚಿ ಘಟನೆಗೆ ಕಾರಣರಾದವರ ವಿರುದ್ಧ ಸಂಬಂಧಪಟ್ಟ ಇಲಾಖೆ ದೂರು ನೀಡುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು. ಯಾವುದೇ ಮುಲಾಜಿಗೆ ಒಳಪಡದೆ ಕಾನೂನು ರೀತ್ಯ ಸೂಕ್ತ ಕ್ರಮ ಜರುಗಿಸಿ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು. ಮಹಿಳಾ ದೌರ್ಜನ್ಯ ಹಾಗೂ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಮತ್ತು ಅನಕ್ಷರತೆ ಹೋಗಲಾಡಿಸುವ ನಿಟ್ಟಿನಲ್ಲಿ ಸಿಡಿಪಿಒ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಮಹಿಳಾ ಜಾಗೃತಿ ಹಾಗೂ ಜನಾಂದೋಲನಾ ಕಾರ್ಯಕ್ರಮಗಳನ್ನು ಹೆಚ್ಚಿಗೆ ರೂಪಿಸುವ ಮೂಲಕ ಗ್ರಾಮೀಣಾ ಪ್ರದೇಶಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಅರಿವು ಮೂಡಿಸಬೇಕು ಎಂದ ಅವರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವ ಮೂಲಕ ಉತ್ತಮ ವಿದ್ಯಾವಂತರಾಗಿ ರೂಪಿಸಿ ಎಂದರು. ಮುಖಂಡ ಜಿಪಂ ಸದಸ್ಯ ಆರ್.ಸಿ. ಅಂಜಿನಪ್ಪ ಮಾತನಾಡಿ ಬಡತನ ನಿವಾರಣೆ, ಮಕ್ಕಳ ಕಳ್ಳ ಸಾಗಣಿಕೆ, ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಯಂಥ ಅನಿಷ್ಠ ಪದ್ಧತಿ ಬಗ್ಗೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರಿಂದ ಮಾಹಿತಿ ಪಡೆಯುವ ಮೂಲಕ ಸಿಡಿಪಿಒ ಇಲಾಖೆ ಎಚ್ಚೆತ್ತುಕೊಳ್ಳಬೇಕಿದೆ ಎಂದರು. ಸುಜಾತ, ರಂಗನಾಥ್ ನಳಿನಮ್ಮ, ಉಷಾ, ಮಹಮ್ಮದ್ ರಕೀಬ್ ಮುಂತಾದವರು ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

