ತುಮಕೂರು

ಹುಳಿಯಾರಿನಲ್ಲಿ ಇಂದು ವಿಶ್ವಪರಿಸರ ದಿನಾಚರಣೆ

Published On :

ಹುಳಿಯಾರು: ಚಿ.ನಾ.ಹಳ್ಳಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ತಾಲೂಕು ಅರಣ್ಯ ಸಮಿತಿ ಸಹಯೋಗದಲ್ಲಿ ಪಟ್ಟಣದ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ನ ಸುವರ್ಣಮುಖಿ ಕ್ಯಾಂಪಸ್ನಲ್ಲಿ ಬುಧವಾರ ಮಧ್ಯಾಹ್ನ ವಿಶ್ವ ಪರಿಸರ ದಿನಾಚರಣೆ ಹಮ್ಮಿಕೊಂಡಿದ್ದಾರೆ. ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಕೆ.ಎಸ್.ಕಿರಣ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ. ನಿರ್ಮಲ, ಎನ್. ವೀಣಾ, ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ನ ಕಾರ್ಯದರ್ಶಿ ಕವಿತಾ ಕಿರಣ್ ಕುಮಾರ್, ಸರ್ಕಾರಿ ಸಹಾಯಕ ಅಭಿಯೋಜಕ ರವಿ, ತಾಲೂಕು ವಕೀಲ ಸಂಘದ ಅಧ್ಯಕ್ಷ ಕೆ.ಸಿ. ವಿಶ್ವನಾಥ್, ಉಪಾಧ್ಯಕ್ಷ ಜಿ.ಪರಮೇಶ್ವರ್, ಕಾರ್ಯದರ್ಶಿ ಲೋಕೇಶ್ವರ, ಅರಣ್ಯಾಧಿಕಾರಿ ಮಾರುತಿ, ವಲಯ ಅರಣ್ಯಾಧಿಕಾರಿ ಶಿವಕುಮಾರ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಹಿರಿಯ ವಕೀಲ ಕೆ.ಎಸ್.ಚಂದ್ರಶೇಖರ್ ಪರಿಸರ ಮತ್ತು ಕಾನೂನು ವಿಷಯದ ಕುರಿತಂತೆ ಹಾಗೂ ಹನುಮಂತಯ್ಯ ಪರಿಸರ ಮಾಲಿನ್ಯ  ತಡೆಗಟ್ಟುವಿಕೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.