ಉತ್ತಮ ಅಂಕ ಗಳಿಸಲು ಜ್ಞಾನದ ಜತೆಗೆ ಕೌಶಲ್ಯ ಅಗತ್ಯ
ಕ.ಪ್ರ.ವಾರ್ತೆ ತುಮಕೂರು ಜೂ.11
ಆಧುನಿಕ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಬಹಳ ಸಾಮಾನ್ಯವಾದ ಪ್ರಕ್ರಿಯೆಯಾಗಿದ್ದು ಉತ್ತಮ ಅಂಕ ಗಳಿಸಲು ಜ್ಞಾನದ ಜತೆಗೆ ಕೌಶಲ್ಯದ ಅಗತ್ಯತೆ ಇದೆ ಎಂದು ಆರ್ಯನ್ ಹೈಸ್ಕೂಲ್ ಅಸೋಸಿಯೇಷನ್ನ ಗೌರವ ಅಧ್ಯಕ್ಷ ಕೆ. ನರಸಿಂಹಮೂರ್ತಿ ಅಭಿಪ್ರಾಯಪಟ್ಟರು.
ಅವರು ನಗರದ ಆರ್ಯಭಾರತಿ ಪಾಲಿಟೆಕ್ನಿಕ್ನಲ್ಲಿ ಆಯೋಜಿಸಿದ್ದ ಹತ್ತು ದಿನಗಳ ಡಿಪ್ಲಮೋ ಸಿಇಟಿ ತರಗತಿ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಮಾಹಿತಿ ಹಾಗೂ ತರಬೇತಿ ನೀಡುವ ಉದ್ದೇಶದಿಂದ ಸಂಸ್ಥೆಯಲ್ಲಿ ಮಾಹಿತಿ ಕೇಂದ್ರವನ್ನು ಸ್ಥಾಪಿಸಿ ಕರ್ನಾಟಕದ ಎಲ್ಲಾ ಎಂಜಿನಿಯರಿಂಗ್ ಶಿಕ್ಷಣಾಕಾಂಕ್ಷಿಗಳಾದ ಡಿಪ್ಲೊಮ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಹಿತಿ ನೀಡುತ್ತಿರುವುದು ಶ್ಲಾಘನೀಯ ಎಂದರು. ಪ್ರಾಂಶುಪಾಲ ಕೆ.ಆರ್. ಅಶೋಕ್ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಮಾಹಿತಿಯ ಅಗತ್ಯತೆ ಬಗ್ಗೆ, ಮಾಹಿತಿ ಕೇಂದ್ರದ ಸೇವೆಯ ಬಗ್ಗೆ ವಿವರಣೆ ನೀಡಿದರು.
ಕರ್ನಾಟಕದ ಬಹಳಷ್ಟು ವಿದ್ಯಾರ್ಥಿಗಳು ಡಿಪ್ಲೊಮ ಸಿಇಟಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಲ್ಲದೆ ಸುಮಾರು 80 ವಿದ್ಯಾರ್ಥಿಗಳು ಸಂಸ್ಥೆಯ ಉಚಿತ ಸೇವೆಯಡಿ ಆನ್ಲೈನ್ ಅರ್ಜಿ ತುಂಬಿ ಅಪ್ಲೋಡ್ ಮಾಡಿರುತ್ತಾರೆ ಎಂದು ತಿಳಿಸಿದರು.
10 ದಿನಗಳ ತರಬೇತಿ ಕಾರ್ಯಕ್ರಮದ ವಿವರಗಳನ್ನು ಆಯೋಜಕ ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಮಲ್ಲೇಶ್ ವಿದ್ಯಾರ್ಥಿಗಳಿಗೆ ವಿವರಿಸಿದರು. ಉಪಪ್ರಾಂಶುಪಾಲ ಬಿ.ವಿ. ರಾಜೇಂದ್ರಕುಮಾರ್ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಬಹು ಆಯ್ಕೆ ಪ್ರಶ್ನೆ ಪತ್ರಿಕೆಯ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು ಮಾನಸಿಕ ಹಾಗೂ ಬೌದ್ಧಿಕ ಸಾಮರ್ಥ್ಯಗಳು ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಸಂಸ್ಥೆಯ ಹತ್ತು ದಿನಗಳ ತರಬೇತಿಯಲ್ಲಿ ಮಾನಸಿಕ ತಜ್ಞರ ಜತೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವನ್ನು ಸೇರಿಸಿದ್ದು ವಿದ್ಯಾರ್ಥಿಗಳು ಹೆಚ್ಚಿನ ಶ್ರದ್ಧೆಯಿಂದ ಅಧ್ಯಯನ ಮಾಡಬೇಕೆಂದು ಹಾರೈಸಿದರು. ತನ್ಮಯಿ ಪ್ರಸಾದ್ ಪ್ರಾರ್ಥಿಸಿ, ಬಿ.ವೈ. ಮಲ್ಲೇಶ್ ಸ್ವಾಗತಿಸಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

