ತುಮಕೂರು

ರಾಮನಗರದಲ್ಲೂ ಜಿಲ್ಲಾ ಉತ್ಸವ ನಡೆಯಲಿ: ಯೋಗ ರವೀಶ್ ಸಲಹೆ

Published On :

ರಾಮನಗರ: ಇತರೆ ಜಿಲ್ಲೆಗಳಂತೆ ರಾಮನಗರದಲ್ಲೂ ಜಿಲ್ಲಾ ಉತ್ಸವ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮುಂದಾಗಬೇಕು ಎಂದು ಭಾರತ್ ಸಾಂಸ್ಕೃತಿಕ ಕಲಾಕೇಂದ್ರದ ಕಾರ್ಯದರ್ಶಿ ಯೋಗ ರವೀಶ್ ಭಾರತ್ ಆಗ್ರಹಿಸಿದ್ದಾರೆ.  
ರಾಜ್ಯದ ನಾನಾ ಜಿಲ್ಲೆಗಳಲ್ಲಿ ಜಿಲ್ಲಾಡಳಿತ, ಚುನಾಯಿತ ಪ್ರತಿನಿಧಿಗಳ ಆಸಕ್ತಿಯಿಂದಾಗಿ ಪ್ರತಿ ವರ್ಷ ಜಿಲ್ಲಾ ಉತ್ಸವ ಆಚರಿಸಲಾಗುತ್ತಿದೆ. ಅಂತಹ ಕಾರ್ಯಕ್ರಮವನ್ನು ರಾಮನಗರದಲ್ಲೂ ಕಣ್ತುಂಬಿಕೊಳ್ಳುವ ಅವಕಾಶ ಕಲ್ಪಿಸಬೇಕು ಎಂದು ಅವರು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.   
ಜಿಲ್ಲೆಯು ಸಾಂಸ್ಕೃತಿಕವಾಗಿ ಸಮೃದ್ಧವಾಗಿದ್ದು, ಜಾನಪದ ಕಲೆಗಳ ತವರೂರಾಗಿದೆ. ವಿಶೇಷ ಹಾಗೂ ವಿಶಿಷ್ಟವಾದ ಜಾನಪದ ಕಲೆಗಳನ್ನು ಪ್ರಸ್ತುತ ಪಡಿಸುವ ಅನೇಕ ಪ್ರತಿಭಾವಂತ ಜಾನಪದ ಕಲಾವಿದರು ಈ ಜಿಲ್ಲೆಯಲ್ಲಿದ್ದಾರೆ. ಉತ್ಸವದಲ್ಲಿ ಅವರೆಲ್ಲರಿಗೂ ಅವಕಾಶ ಕಲ್ಪಿಸಬಹುದಾಗಿದೆ ಎಂದಿದ್ದಾರೆ.  
ನಶಿಸಿ ಹೋಗುತ್ತಿರುವ ಜಾನಪದ ಕಲೆಗಳನ್ನು ಉಳಿಸಿ, ಬೆಳೆಸಲು ಹಾಗೂ ಕಲಾ ರಸಿಕರಿಗೆ ಕಲೆಯನ್ನು ಉಣಬಡಿಸಲು ಇತರೆ ಜಿಲ್ಲೆಯಲ್ಲಿ ನಡೆಯುತ್ತಿರುವಂತೆ ಇಲ್ಲಿಯೂ ಕೂಡ ಜಿಲ್ಲಾ ಉತ್ಸವವನ್ನು ಆಚರಿಸಬೇಕು. ಪ್ರತಿ ವರ್ಷ ಒಂದೊಂದು ತಾಲೂಕಿನಲ್ಲಿ ಈ ಉತ್ಸವ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.   
ಗಂಗೋತ್ಸವವೂ ಇರಲಿ: ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳ ಜತೆಗೆ ತಲಕಾಡನ್ನು ಗಂಗರು ಆಳಿದ್ದಾರೆ. ಗಂಗರ ಗತ ವೈಭವವನ್ನು ನೆನೆಯಲು ಗಂಗೋತ್ಸವವನ್ನು ಆಚರಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಇಚ್ಛಾಶಕ್ತಿಯ ಕೊರತೆ: ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳನ್ನು ಪದೇ ಪದೇ ಬದಲಾಯಿಸುವ ಕಾರಣದಿಂದ ರಾಮನಗರದ ಜಿಲ್ಲೆಯಲ್ಲಿ ಅಭಿವೃದ್ಧಿ ಹಿನ್ನಡೆಯಾಗಿದೆ. ಘಟಾನುಘಟಿ ರಾಜಕಾರಣಿಗಳಿದ್ದರೂ ಇಚ್ಛಾಶಕ್ತಿಯ ಕೊರತೆಯಿಂದ ರಾಮನಗರವು ಸರ್ವತೋಮುಖ ಅಭಿವೃದ್ಧಿ ಕಂಡಿಲ್ಲ ಎಂದರವೀಶ್ ಟೀಕಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.