ತುಮಕೂರು

ಹಣ್ಣಿನ ಗಿಡ ಬೆಳೆಸಿ ಪರಿಸರ ಸಂರಕ್ಷಿಸಿ

Published On :

ಕ.ಪ್ರ.ವಾರ್ತೆ   ತುಮಕೂರು   ಜೂ. 11
ಹಣ್ಣಿನ ಗಿಡಗಳನ್ನು ಬೆಳೆಸಿ, ಪರಿಸರ ಸಂರಕ್ಷಿಸಿ ಎಂದು ತುಮಕೂರು ವಿಜ್ಞಾನ ಕೇಂದ್ರದ ಕಾರ್ಯದರ್ಶಿ ರಾಮಕೃಷ್ಣಪ್ಪ ಕರೆ ನೀಡಿದರು.
ಅವರು ಕೊರಟಗೆರೆ ತಾಲೂಕಿನ ಮಾರುತಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ನಡೆದ ರಾಷ್ಟ್ರೀಯ ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಹಿಂದೆ ಕಾರೆ, ಬೋರೆ, ಸೀಬೆ, ಪರಂಗಿ ಮುಂತಾದ ಹಣ್ಣುಗಳನ್ನು ತಿಂದು ಆರೋಗ್ಯವಾಗಿದ್ದೆವು. ಆದರೆ ಆಗ ರಾಸಾಯನಿಕಗಳನ್ನು ಬಳಸಿ ಬೆಳೆದ ಹಣ್ಣುಗಳನ್ನು ತಿಂದು ಆರೋಗ್ಯ ಹಾಳುಮಾಡಿಕೊಳ್ಳುತ್ತಿದ್ದೇವೆ ಎಂದು ವಿಷಾದಿಸಿದರು. ಹಣ್ಣಿನ ಗಿಡಗಳನ್ನು ಸ್ವತಃ ಬೆಳೆಸಿ, ಅದರ ಫಲಗಳನ್ನು ತಿಂದು ಆರೋಗ್ಯವನ್ನು ಕಾಪಾಡಿಕೊಳ್ಳುವುದಲ್ಲದೆ, ಪರಿಸರವನ್ನು ಸಂರಕ್ಷಿಸಿ ಎಂದು ಸಲಹೆ ನೀಡಿದರು. ನಾವು ಆಹಾರವನ್ನು ಪೋಲು ಮಾಡಬಾರದು. ಎಸೆದ ತುತ್ತು - ಪರಿಸರಕ್ಕೆ ಕುತ್ತು ಎಂದು ಮಾರ್ಮಿಕವಾಗಿ ನುಡಿದರು.
ಜೀವ ವೈವಿಧ್ಯ ದಾಖಲಾತಿ: ಇದೇ ಸಂದರ್ಭದಲ್ಲಿ ಶಾಲೆಯ ಮಕ್ಕಳಿಂದ ಜೀವ ವೈವಿಧ್ಯ ದಾಖಲಾತಿ ಮಾಡಿಸಿದರು. ಶಾಲಾ ಮಕ್ಕಳಲ್ಲಿ ಗಿಡ ನೆಡುವ ಪ್ರವೃತ್ತಿ ಬೆಳೆಸಲು ಅವರಿಗೆ ಮಾವು, ಹಲಸು, ಸೀತಾಫಲ, ಜಂಬು ನೇರಳೆ ಮುಂತಾದ ಹಣ್ಣಿನ ಸಸಿಗಳನ್ನು ವಿತರಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಎಂ.ಡಿ. ನರಸಿಂಹಮೂರ್ತಿ ಮಾತನಾಡಿ, ಶಾಲಾ ಆವರಣದಲ್ಲಿ ಬೆಳೆಸಿರುವ ಮರ - ಗಿಡಗಳನ್ನು ಉತ್ತಮ ರೀತಿಯಲ್ಲಿ ಸಂರಕ್ಷಿಸಬೇಕೆಂದು ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯ ಕೆ.ಸಿ. ವೀರೇಗೌಡ, ಸಹ ಶಿಕ್ಷಕರಾದ ಕೆ.ಸಿ. ಈಶ್ವರಪ್ಪ, ಡಿ.ವಿ.ವಿರೂಪಾಕ್ಷಯ್ಯ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನಾಗರತ್ನಮ್ಮ ಮುಂತಾದವರು ಪರಿಸರ ಸಂರಕ್ಷಣೆಯ ಅಗತ್ಯತೆಯ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದ ಸಂಚಾಲಕ ಕೆ. ನಾಗರಾಜರಾವ್ ರಾಷ್ಟ್ರೀಯ ಪರಿಸರ ಜಾಗೃತಿ ಆಂದೋಲನ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಂಜಿತ ಪರಿಸರ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ದೈಹಿಕ ಶಿಕ್ಷಕರಾದ ಡಿ. ಹನುಮಂತರಾಯಪ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ 78 ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 50 ವಿದ್ಯಾರ್ಥಿಗಳು ಹಾಗೂ ಎರಡೂ ಶಾಲೆಯ ಶಿಕ್ಷಕ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.