ಕೌಶಲ್ಯಭರಿತರನ್ನು ಸೃಷ್ಟಿಸಲು ಎಟಿಎಸ್ ಅತ್ಯುತ್ತಮ ಮಾರ್ಗ
ಕ.ಪ್ರ.ವಾರ್ತೆ ತುಮಕೂರು ಜೂ. 12
ಕೌಶಲ್ಯ ಭರಿತ ಕಾರ್ಮಿಕರನ್ನು ಕೈಗಾರಿಕೆಗಳಿಗೆ ಒದಗಿಸುವ ನಿಟ್ಟಿನಲ್ಲಿ ಕೈಗಾರಿಕಾ ತರಬೇತಿ ಕೇಂದ್ರಗಳು (ಐಟಿಐ) ಮತ್ತು ಕೈಗಾರಿಕೆಗಳ ನಡುವೆ ಎಟಿಎಸ್ (ಅಪರಂಟೀಸ್) ಸೇತುವೆಯಾಗಿ ಕೆಲಸ ಮಾಡಬೇಕಾಗಿದೆ ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಟ್ರಸ್ಟಿ ಹಾಗೂ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಗಂಗಾಧರ ಕೊಡ್ಲಿ ಅವರು ತಿಳಿಸಿದ್ಧಾರೆ.
ನಗರದ ಶ್ರೀದೇವಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಶ್ರೀದೇವಿ ಐಟಿಐ ಕಾಲೇಜು ಮತ್ತು ದಾಬಸ್ ಪೇಟೆಯ ಟಿ.ಡಿ.ಪವರ್ ಸಿಸ್ಟಮ್ ಆಯೋಜಿಸಿದ್ದ ಐಟಿಐ ಕೊನೆಯ ವರ್ಷದ ವಿದ್ಯಾರ್ಥಿಗಳಿಗೆ ಶಿಶುಕ್ಷು
(ಅಪರೆಂಟೀಸ್) ಸಂದರ್ಶನ ಮತ್ತು ಆಯ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಂತ್ರಜ್ಞಾನದ ಬದಲಾವಣೆ ಮತ್ತು ಕಾಲೇಜು ಬೋಧನೆ ನಡುವೆ ಅಂತರ ಹೆಚ್ಚಿದ್ದು ಇದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚಾಗಿ ನಡೆಯಬೇಕೆಂದರು.
ಶಿಕ್ಷಣ ಎಂದಿಗೂ ನಿಂತ ನೀರಾಗಬಾರದು. ಇಂದಿನ ಅವಶ್ಯಕತೆಗಳಿಗೆ, ತಂತ್ರಜ್ಞಾನದ ಬೆಳವಣಿಗೆಗೆ ಹೊಂದಿಕೊಂಡು ನಡೆಯುವಂತಹ ಶಿಕ್ಷಣದ ಅವಶ್ಯಕತೆಯಿದೆ. ಇದನ್ನೇ ಅರ್ಥ ಮಾಡಿಕೊಂಡಿರುವ ರಾಜ್ಯ ತಾಂತ್ರಿಕ ಶಿಕ್ಷಣ ಆಯೋಗ, ಅಭಿವೃದ್ಧಿ ಸಂಸ್ಥೆಗಳು ಐಟಿಐ, ಡಿಪ್ಲೊಮೊ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ನಂತರ ಕನಿಷ್ಠ ಕಾರ್ಖಾನೆಗಳ ಪರಿಸ್ಥಿತಿ, ಅಲ್ಲಿನ ಕಾರ್ಯಒತ್ತಡ ಮತ್ತಿತರರ ಪ್ರಮುಖ ಅಂಶಗಳನ್ನು ಪರಿಚಯಿಸುವನಿಟ್ಟಿನಲ್ಲಿ ಇಂತಹ ಟ್ರೈನಿಂಗ್ಗಳನ್ನು ಆಯೋಜನೆ ಮಾಡುತ್ತಿದ್ದು, ದಾಬಸ್ಪೇಟೆಯಲ್ಲಿ ಟಿ.ಡಿ.ಪವರ್ ಸಿಸ್ಟಮ್ ಸಂಸ್ಥೆ ನಮ್ಮ ಕಾಲೇಜಿನ ಸಹಯೋಗದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತೋಷದ ಸಂಗತಿ ಎಂದರು.
ಬೃಹತ್ ಉದ್ಯೋಗ ಮೇಳ: ಐಟಿಐ ವಿದ್ಯಾರ್ಥಿಗಳಿಗೆ ಎಟಿಎಸ್(ಅಪರೆಂಟಿಸ್)ತರಬೇತಿ ಏರ್ಪಡಿಸಿರುವುದರ ಹಿಂದೆ ದೂರದೃಷ್ಟಿಯಿದೆ.ಶಿಕ್ಷಣ ಸಂಸ್ಥೆ ಮತ್ತು ಕೈಗಾರಿಕೆಗಳ ನಡುವೆ ಸೇತುವೆಯಾಗಿ ಟಿ.ಡಿ. ಪವರ್ ಸಿಸ್ಟಮ್ ಸೇರಿದಂತೆ ಹಲವು ಸಂಸ್ಥೆಗಳು ಕೆಲಸ ಮಾಡುತ್ತಿದ್ದು, ಇವುಗಳ ಸಹಯೋಗದೊಂದಿಗೆ ಮುಂದಿನ ದಿನಗಳಲ್ಲಿ ಐಟಿಐ ವಿದ್ಯಾರ್ಥಿಗಳಿಗೆ ಒಂದು ಬೃಹತ್ ಉದ್ಯೋಗ ಮೇಳ ಏರ್ಪಡಿಸುವ ಉದ್ದೇಶವಿದೆ ಎಂದು ಗಂಗಾಧರ ಕೊಡ್ಲಿ ನುಡಿದರು.
ಕಾರ್ಯಕ್ರಮ ಉದ್ಘಾಟಿಸಿ ಟಿ.ಡಿ.ಪವರ್ ಸಿಸ್ಟಮ್ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಪಿ.ಜಿ. ಮಂಜುನಾಥ್ ಮಾತನಾಡಿ, ಐಟಿಐ ಪಾಸಾಗಿರುವ ಮತ್ತು ಅಂತಿಮ ವರ್ಷದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ ಎಂದರು.
ಅಧ್ಯಕ್ಷತೆಯನ್ನು ಬೆಂಗಳೂರಿನ ಪೀಣ್ಯ ಸರಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲ ರೇಣುಕಾರಾಧ್ಯ ವಹಿಸಿದ್ದರು. ಶ್ರೀದೇವಿ ಐಟಿಐ ಕಾಲೇಜಿನ ಪ್ರಾಂಶುಪಾಲ ಡಿ.ಎಸ್. ಸುರೇಶ್ ವೇದಿಕೆಯಲ್ಲಿದ್ದರು. ವಿವಿಧ ಕಂಪನಿಗಳ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಐಟಿಐ ಕಾಲೇಜುಗಳು 350 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಟಿಎಸ್ ಆಯ್ಕೆ ಸಂದರ್ಶನದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

