ಡೆಂಘೀ ನಿಯಂತ್ರಣಕ್ಕೆ ಫಾಗಿಂಗ್ ಕಾರ್ಯಾಚರಣೆ
ಕ.ಪ್ರ.ವಾರ್ತೆ ಕೊರಟಗೆರೆ ಜೂ. 12
ಪಟ್ಟಣದಲ್ಲಿ ಉಲ್ಬಣಗೊಂಡಿರುವ ಡೆಂಘೀ ಮತ್ತು ಚಿಕುನ್ ಗುನ್ಯಾ ನಿಯಂತ್ರಣಕ್ಕೆ ಪಟ್ಟಣ ಪಂಚಾಯಿತಿ ಹಲವು ವಾರ್ಡ್ಗಳಲ್ಲಿ ಸೊಳ್ಳೆ ನಿಯಂತ್ರಣ ಮಾಡಲು ಫಾಗಿಂಗ್ ಕಾರ್ಯಾಚರಣೆ ಆರಂಭಿಸಿದೆ.
ಪಟ್ಟಣದಲ್ಲಿ ಸ್ಲಂ ಪ್ರದೇಶದಲ್ಲಿ ಈಗಾಗಲೆ ಇಬ್ಬರಿಗೆ ಡೆಂಘೀ ಜ್ವರ ಕಾಣಿಸಿಕೊಂಡಿದ್ದು ಈ ಭಾಗದಲ್ಲಿ ಬಹುಪಾಲು ಚರಂಡಿಗಳಲ್ಲಿ ನೀರು ಹಾಗೂ ಕಲ್ಮಷಗಳಿಂದ ಚರಂಡಿ ನೀರು ಮುಂದೆಸಾಗಲು ಸಾಧ್ಯವಾಗದೆ ನಿಂತಿದ್ದು ಎಷ್ಟೇ ಬಾರಿ ಚರಂಡಿಯನ್ನು ಸ್ವಚ್ಛಗೊಳಿಸಿದರೂ ಕಸ ಪುನಃ ಶೇಖರಗೊಂಡ ಪರಿಣಾಮ ಸೊಳ್ಳೆಗಳ ಆವಾಸ ಸ್ಥಾನವಾಗಿದೆ. ಇದರಿಂದ ಡೆಂಘೀ ಜ್ವರ ಸೇರಿದಂತೆ ಹಲವಾರು ರೋಗಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಸೊಳ್ಳೆ ನಿಯಂತ್ರಣ ಮಾಡುವಂತೆ ಆರೋಗ್ಯ ಇಲಾಖೆಯ ಸೂಚನೆಯ ಮೇರೆಗೆ ಪಟ್ಟಣದ ಸ್ಲಂ ಸೇರಿದಂತೆ ಗುಡ್ಲೆಏರಿಯಾ, ಗೊಂದಿಹಳ್ಳಿ ರಸ್ತೆ, ಹೊಸ ಸ್ವೀಪರ್ ಕಾಲೋನಿ, ತ್ರಿಯಂಬಕೇಶ್ವರಿ ಕಾಲೋನಿ, ಸೇರಿದಂತೆ ಪಟ್ಟಣದ ಕೆಲ ವಾರ್ಡ್ಗಳಲ್ಲಿ ಆರೋಗ್ಯ ನಿರೀಕ್ಷಕ ಬಾಕಚಂದ್ರ. ಬಿ ನೇತೃತ್ವದಲ್ಲಿ ಫಾಗಿಂಗ್ ಮಾಡಲಾಗಿದೆ ಎಂದು ಪಟ್ಟಣ ಪಂಚಯಿತಿ ಮುಖ್ಯಾಧಿಕಾರಿ ಶ್ರೀನಿವಾಸ್ ತಿಳಿಸಿದರು. ಪಟ್ಟಣದ ಬಡಾವಣೆಗಳ ಬೀದಿಗಳಲ್ಲಿನ ಚರಂಡಿಗಳಿಗೆ ಬ್ಲೀಚಿಂಗ್ ಪೌಡರ್ ಸಿಂಪಡಿಸಿ ಸರಬರಾಜು ಮಾಡುತ್ತಿರುವ ನೀರನ್ನು ಶುದ್ಧೀಕರಿಸಿ ಕುಡಿಯಲು ಉಪಯೋಗಿಸುವಂತೆ ಕುಡಿಯುವ ನೀರಿನ ಟ್ಯಾಂಕರ್ಗಳನ್ನು ಸ್ವಚ್ಛಗೊಳಿಸುವ ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸುವಂತೆ ಹಾಗೂ ಡೆಂಘೀ ಜ್ವರ, ಚಿಕೂನ್ ಗುನ್ಯಾ ರೋಗಗಳ ಲಕ್ಷಣಗಳು ಹಾಗೂ ಇದರ ಬಗ್ಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆಯ ಸಲಹೆ ಮೇರೆಗೆ ಪ.ಪಂ. ಸಿಬ್ಬಂದಿಯಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರೊಂದಿಗೆ ಭಿತ್ತಿಪತ್ರ ಮತ್ತು ಕರಪತ್ರಗಳನ್ನು ಹಂಚಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

