ತುಮಕೂರು

ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ: ಡಿಸಿ

Published On :

ಕ.ಪ್ರ.ವಾರ್ತೆ, ತುಮಕೂರು, ಜೂ.13
ಚಿಕ್ಕನಾಯಕನಹಳ್ಳಿಯಲ್ಲಿ ಏರ್ಪಾಟಾಗಿರುವ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ ನಡೆದಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪೆದ್ದಪ್ಪಯ್ಯ ತಿಳಿಸಿದರು.
 ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಾಟಾಗಿದ್ದ ಸಮ್ಮೇಳನ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಸಮ್ಮೇಳನ ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳ ಸಹಕಾರ ಅತ್ಯಗತ್ಯವಾಗಿದೆ ಎಂದರು.
 ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಸೋ. ಮು. ಭಾಸ್ಕರಾಚಾರ್ ಮಾತನಾಡಿ, ಸಮ್ಮೇಳನಾಧ್ಯಕ್ಷರಾಗಿ ಪ್ರೊ. ಸಿ.ಎಚ್. ಮರಿದೇವರು ಅವರನ್ನು ಆಯ್ಕೆ ಮಾಡಿದ್ದು, ಕೃಷಿ, ತೋಟಗಾರಿಕೆ, ಜಲಾನಯನ ಪರಿಸರ ಸೇರಿದಂತೆ ಇತರೆ ಪ್ರಮುಖ ವಿಷಯಗಳ ಕುರಿತಂತೆ ವಿಚಾರಗೋಷ್ಠಿಗಳು ಜರುಗಲಿವೆ. ಸಮ್ಮೇಳನದಲ್ಲಿ ಮುಖ್ಯ ವೇದಿಕೆ, ಸಮಾನಾಂತರ ವೇದಿಕೆ ಎಂಬ ಎರಡು ವೇದಿಕೆಗಳನ್ನು ನಿರ್ಮಿಸಲಾಗುವುದು. ಮುಖ್ಯ ವೇದಿಕೆಯಲ್ಲಿ ಗಹನ ವಿಷಯಗಳನ್ನು ಚರ್ಚಿಸಲಾಗುವುದು. ಸಮಾನಂತರ ವೇದಿಕೆಯಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದರು.
ಗುಡಿ ಕೈಗಾರಿಕೆ, ಧಾನ್ಯ ಬೆಳೆಯ ಪ್ರಾತ್ಯಕ್ಷಿಕೆ ಮತ್ತು ಗ್ರಾಮೀಣ ನೆಲೆಗಟ್ಟನ್ನು ಆಧರಿಸಿ, ಈ ಬಾರಿಯ ಸಮ್ಮೇಳನ ಆಯೋಜಿಸಲಾಗಿದೆ. ಸ್ಥಳೀಯ ಜನಪದ, ಕರಕುಶಲ, ವಸ್ತು ಪ್ರದರ್ಶನ, ರಂಗೋಲಿ, ನಮ್ಮೂರ ಆಹಾರ ಉತ್ಸವ, ಡಾ. ರಾಜ್ಕುಮಾರ್ ಕುರಿತ ಛಾಯಾಚಿತ್ರ ಪ್ರದರ್ಶನ ಹಾಗೂ ಜಿಲ್ಲೆಯ ವಿಶೇಷತೆಯನ್ನು ಬಿಂಬಿಸುವ ಛಾಯಾಚಿತ್ರ ಪ್ರದರ್ಶನವನ್ನೂ ಸಹ ಸಮ್ಮೇಳನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
  ಒಂದು ಮುಖ್ಯದ್ವಾರ, 8 ಮಹಾದ್ವಾರ, 25 ಕಮಾನುಗಳನ್ನು ನಿರ್ಮಿಸಲಿದ್ದು, ಅತ್ಯಂತ ಕಡಿಮೆ ವೆಚ್ಚದಲ್ಲಿ ಸಾಹಿತ್ಯ ಸಮ್ಮೇಳನ ಆಚರಿಸಲಾಗುವುದು. ಸ್ಥಳೀಯ ಜನಪದ ಕಲಾವಿದರು, ಚಿತ್ರ ಕಲಾವಿದರು, ಶಿಲ್ಪ ಕಲಾವಿದರು ಸೇರಿದಂತೆ ಎಲ್ಲರೂ ಸಮ್ಮೇಳನ ಯಶಸ್ಸಿಗೆ ಕೈಜೋಡಿಸಿದ್ದಾರೆ ಎಂದು ತಿಳಿಸಿದರು.
  ಚಿಕ್ಕನಾಯಕನಹಳ್ಳಿ ಕಸಾಪ ಅಧ್ಯಕ್ಷ ರವಿಕುಮಾರ್, ಸಮ್ಮೇಳನ ಉಸ್ತುವಾರಿ ಅಧ್ಯಕ್ಷರೂ ಹಾಗೂ ಜಿಲ್ಲಾ ಕಸಾಪ ಕಟ್ಟಡ ಸಮಿತಿ ಅಧ್ಯಕ್ಷರೂ ಆದ ಚಿ.ನಿ. ಪುರುಷೋತ್ತಮ್, ಜಿಲ್ಲಾ ಕಸಾಪ ಕಟ್ಟಡ ಸಮಿತಿ ಸದಸ್ಯರಾದ ಪತ್ರಕರ್ತ ಹರೀಶ್ ಆಚಾರ್ಯ, ಎನ್.ಡಿ. ರಂಗರಾಜು, ರಾಕ್ಲೈನ್ ರವಿಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.