ತುಮಕೂರು

ಬಡತನ ಓಡಿಸಲು ರಾಜಕೀಯ ಇಚ್ಛಾಶಕ್ತಿ ಕೊರತೆ

Published On :

ಕನ್ನಡಪ್ರಭ ವಾರ್ತ್ಣೆ ತುಮಕೂರ್ಣು ಜೂ.16
ದೇಶದಲ್ಲಿ ಬೆಲೆ ಏರಿಕೆ, ಹಸಿವಿನ ಸಾವು, ಬೆಳೆಯುತ್ತಿರುವ ನಿರುದ್ಯೋಗ-ಅರೆ ಉದ್ಯೋಗ- ಬಡತನ, ಅಸಮಾನತೆಯನ್ನು ಮೂಲದಲ್ಲಿ ಪರಿಹಾರ ಕಾಣಲು ಆಡಳಿತದಲ್ಲಿರುವ ಪ್ರಭುಗಳು ರಾಜಕೀಯ ಇಚ್ಛಾ ಶಕ್ತಿ ಹೊಂದಿಲ್ಲ ಬದಲಿಗೆ ಶ್ರೀಮಂತರ, ಬಂಡವಾಳಿಗರ ಲಾಭ ರಕ್ಷಣೆಗೆ ನಿಂತಿವೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಕಾಂ. ಮಿನಾಕ್ಷಿ ಸುಂದರಂ ಅವರು ಅಭಿಪ್ರಾಯ ಪಟ್ಟರು.
ಅವರು ಭಾನುವಾರ ಸಿಐಟಿಯು ತುಮಕೂರು ಸಮಿತಿಯು ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಿಐಟಿಯುನ 14ನೇ ರಾಷ್ಟ್ರ ಸಮ್ಮೇಳನದ ವರದಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳೆಯರ ಮೇಲಿನ ದೌರ್ಜನ್ಯ, ಸಾಮಾಜಿಕ ಅಸಮಾನತೆ ನಡವಳಿಗಳೊಂದಿಗೆ ಬದಲಾಗುತ್ತಿರುವ ಕಾರ್ಮಿಕ ನೀತಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಸಿಐಟಿಯು ಮುಂದಿನ ದಿನಗಳಲ್ಲಿ ಪ್ರಬಲ ಹೋರಾಟ ನಡೆಸಲು ಸಿಐಟಿಯು ತೀರ್ಮಾನಿಸಿದೆ ಎಂದ ಅವರು ಕರ್ನಾಟಕದಲ್ಲಿ ಆತ್ಮಹತ್ಯೆಗಳು ಹೆಚ್ಚುತ್ತಿವೆ. ಇದು ಆರೋಗ್ಯಕರ ಸಮಾಜಕ್ಕೆ ಮಾರಕವಾದದ್ದು ದುಡಿವ ಜನರು ಬದುಕಲು ಯೋಗ್ಯ ಕೂಲಿ, ಉದ್ಯೋಗ ಭದ್ರತೆ ನೀಡಬೇಕು ಎಂದರು.
ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಪುಟ್ಟೇಗೌಡ ವಹಿಸಿದ್ದ ಕಾರ್ಯಕ್ರಮದಲ್ಲಿ  ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಜಿಲ್ಲಾ ಖಜಾಂಚಿ ಕಮಲ, ಜಿಲ್ಲಾ ಉಪಾಧ್ಯಕ್ಷ ಲೋಕೇಶ್ ದಿಶಾ, ಕುಮಾರ್, ತಾಲೂಕು ಕಾರ್ಯದರ್ಶಿ ಷಣ್ಮುಖಪ್ಪ, ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ, ಮುಂತಾದವರು ಉಪಸ್ಥಿತರಿದ್ದರು. ಮಹೇಶ್ ಸ್ವಾಗತಿಸಿ, ದಿಲೀಪ್ ವಂದಿಸಿದರು ಕಾರ್ಯಕ್ರಮದಲ್ಲಿ ಹಲವಾರು ಕಾರ್ಮಿಕ ಸಂಘಗಳ ಮುಖಂಡರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.