ತುರುವೇಕೆರೆಯಲ್ಲಿ ನ್ಯಾಫೆಡ್ ಕೇಂದ್ರ ಪ್ರಾರಂಭ; ತೆಂಗು ಬೆಳೆಗಾರರಲ್ಲಿ ಮೊಗದಲ್ಲಿ ಹರ್ಷ
ತುರುವೇಕೆರೆ: ಕೊಬ್ಬರಿ ಕೊಳ್ಳುವ ನ್ಯಾಫೆಡ್ ಶಾಖೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ರವರು ಉದ್ಘಾಟನೆ ಮಾಡುವ ಮೂಲಕ ಸೋಮವಾರ ಅಧಿಕೃತವಾಗಿ ತೆರೆಯಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಅವರು ನ್ಯಾಫೆಡ್ ಕೇಂದ್ರವನ್ನು ಉದ್ಘಾಟಿಸಿದರು. ಶಾಸಕ ಹಾಗೂ ನ್ಯಾಫೆಡ್ನ ನಿರ್ದೇಶಕ ಷಡಕ್ಷರಿ, ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ಸಂಸದ ಜಿ.ಎಸ್.ಬಸವರಾಜು, ತಾಲೂಕು ಕೃಷಿ ಮಾರುಕಟ್ಟೆ ಅಧ್ಯಕ್ಷ ಕೊಂಡಜ್ಜಿ ವಿಶ್ವನಾಥ್, ವಿಧಾನ ಪರಿಷತ್ ಸದಸ್ಯ ಡಾ. ಹುಲಿನಾಯ್ಕರ್ ಮೊದಲಾದವರು ನ್ಯಾಫೆಡ್ ಉದ್ಘಾಟನಾ ಸಮಾರಂಭದಲ್ಲಿ ಹಾಜರಿದ್ದರು.
ಜಿಗಿದ ಕೊಬರಿ ಬೆಲೆ : ಕಳೆದ ಹತ್ತು ದಿನಗಳ ಹಿಂದೆಯಷ್ಟೆ ಕ್ವಿಂಟಾಲ್ ಕೊಬ್ಬರಿಗೆ ಕೇವಲ 4200 ರಿಂದ 4300 ರು.ತನಕ ಇದ್ದ ಕೊಬ್ಬರಿ ಬೆಲೆಗೆ ಈಗ ದಿಢೀರನೆ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳವಾಗಿದೆ. ನ್ಯಾಫೆಡ್ ಕೇಂದ್ರ ತೆರೆಯಲಾಗುವುದು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡುತ್ತಿದ್ದಂತೆ ಕ್ವಿಂಟಾಲ್ ಕೊಬ್ಬರಿಗೆ ಈಗ ಸುಮಾರು 5500 ರು.ಗಳಿಂದ 5600 ರು.ಗಳ ವರೆಗೆ ಬೆಲೆ ಏರಿಕೆಯಾಗಿದೆ. ನ್ಯಾಫೆಡ್ ಕೇಂದ್ರವನ್ನು ಸ್ಥಗಿತಗೊಳಿಸಲಾಗುವುದು ಎಂಬ ಮಾಹಿತಿ ರೈತರಿಗೆ ತಲುಪಿದ್ದು ರೈತರಲ್ಲಿ ಆತಂಕ ಮನೆ ಮಾಡಿದೆ. ಯಾವ ಕಾರಣಕ್ಕೂ ನ್ಯಾಫೆಡ್ ಕೇಂದ್ರವನ್ನು ಸ್ಥಗಿತಗೊಳಿಸಬಾರದು ಎಂದು ರೈತಾಪಿಗಳು ಜಿಲ್ಲಾ ಉಸ್ತುವಾರಿ ಸಚಿವ ಜಯಚಂದ್ರರಲ್ಲಿ ವಿನಂತಿಸಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

