ತುಮಕೂರು

22ಕ್ಕೆ ಪಾವಗಡ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Published On :

ಪಾವಗಡ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತಿ ವಿ.ಆರ್. ಚೆಲುವರಾಜನ್ ಅಧ್ಯಕ್ಷತೆಯಲ್ಲಿ 6ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜೂ. 22ರಂದು ಶನಿವಾರ ಪಟ್ಟಣದ ಎಸ್.ಎಸ್.ಕೆ.ಬಯಲು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿದ್ದು ದ್ವಜಾರೋಹಣವನ್ನು ತಹಸೀಲ್ದಾರ್ ಮಹಮ್ಮದ್ ಅಲ್ತಾಪ್ ಪಾಷ ಹಾಗೂ ಪರಿಷತ್ತಿನ ಧ್ವಜವನ್ನು ತಾ.ಕಸಾಪ ಅಧ್ಯಕ್ಷ ಅಂತರಗಂಗೆ ಶಂಕರಪ್ಪ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ತಾಪಂ ಇಒ ರಂಗನಾಥ್, ಬಿಇಒ ನಾಗರಾಜಪ್ಪ, ದೈಹಿಕ ಶಿಕ್ಷಣಾಧಿಕಾರಿ ಸಣ್ಣಪ್ಪ ಮುಂತಾದವರು ಭಾಗವಹಿಸುವರು.
ಬೆಳಿಗ್ಗೆ 9 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ತಾಪಂ ಅಧ್ಯಕ್ಷೆ ರಾಧಾ ರಾಜ್ಗೋಪಾಲ್  ನೆರವೇರಿಸಲಿದ್ದಾರೆ.
ಮುಖ್ಯ ಅಥಿತಿಗಳಾಗಿ ಸಿಪಿಐ ಭಾನುಪ್ರಸಾದ್, ಪಿಎಸ್ಐ, ರಾಮಕೃಷ್ಣಪ್ಪ, ಪುರಸಭೆ ಮುಖ್ಯಾಧಿಕಾರಿ ಡಿ. ರಂಗಸ್ವಾಮಿ ಮುಂತಾದವರು ಭಾಗವಹಿಸಲಿದ್ದಾರೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಪಟ್ಟಣದ ಗುರುಭವನದಿಂದ ಪ್ರಾರಂಭಿಸಿ ದ.ರಾ. ಬೇಂದ್ರೆ ರಸ್ತೆ ಹಾಗೂ ಕುವೆಂಪು ಮತ್ತು ಇಂದಿರಾಗಾಂಧಿ ರಸ್ತೆ ಮಾರ್ಗವಾಗಿ ಎಸ್.ಎಸ್.ಕೆ ರಂಗಮಂದಿರ ಸೇರುವುದು. ಬೆಳಿಗ್ಗೆ 11 ಗಂಟೆಗೆ  ಸಾಹಿತ್ಯ ಸಮ್ಮೇಳನದ ಉದ್ಘಾಟನೆಯನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದ ಸಾನಿಧ್ಯ ಸ್ವಾಮಿ ಜಪಾನಂದಜೀ ಹಾಗೂ  ಅಧ್ಯಕ್ಷತೆಯನ್ನು ಶಾಸಕ ಕೆ.ಎಂ. ತಿಮ್ಮರಾಯಪ್ಪ ಅವರು ವಹಿಸಲಿದ್ದಾರೆ.
ಮಾಜಿ ಸಚಿವ ವೆಂಕಟಮಣಪ್ಪ, ಕಸಾಪ ರಾಜ್ಯಾಧ್ಯಕ್ಷ ಪುಂಡಲೀಕ ಹಾಲಂಬಿ, ಜಿಲ್ಲಾಧ್ಯಕ್ಷ ಸೋಮು ಭಾಸ್ಕರ್ ಕನ್ನಡ ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ರಾಮಚಂದ್ರರಾವ್ ಪ್ರಾಂಶುಪಾಲ ಡಾ.ವೈ.ಎಸ್ ಹನುಮಂತರಾಯಪ್ಪ, ವಿವೇಕಾನಂದ ಕಾಲೇಜ್ ಪ್ರಾಂಶುಪಾಲ ನಾಗೇಂದ್ರಪ್ಪ ಹಾಗೂ ಸ್ಥಳೀಯರು ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕವಿಗಳು ಹಿರಿಯ ಸಾಹಿತಿಗಳು ಮತ್ತು ಅನೇಕ ಮಂದಿ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.