ತುಮಕೂರು

ಅಂಬೇಡ್ಕರ್ ಕ್ರಾಂತಿದಳ ಪದಾಧಿಕಾರಿಗಳು

Published On :

ತುಮಕೂರು: ಅಖಿಲ ಭಾರತ ಅಂಬೇಡ್ಕರ್ ಕ್ರಾಂತಿದಳ ಹಾಗೂ ಅಂಬೇಡ್ಕರ್ ಸೈನಿಕ ನೂತನದಳದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಅಧ್ಯಕ್ಷರಾಗಿ ಜಿ.ಬಿ. ನಿಂಗರಾಜ, ಜಿಲ್ಲಾಧ್ಯಕ್ಷರಾಗಿ ಎನ್.ಆರ್. ನರಸಿಂಹಮೂರ್ತಿ, ಉಪಾಧ್ಯಕ್ಷರಾಗಿ ಎನ್. ಲಕ್ಷ್ಮೀನರಸಿಂಹಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಸ್. ಶಂಕರ್, ಕಾರ್ಯಾಧ್ಯಕ್ಷರಾಗಿ ಡಿ.ಪಿ. ತಿಪ್ಪೇಶಪ್ಪ, ಖಜಾಂಚಿಯಾಗಿ ಶೆಟ್ಟಳಯ್ಯ, ಸಂಘಟನಾ ಕಾರ್ಯದರ್ಶಿಯಾಗಿ ಎಂ. ನರಸಿಂಹಮೂರ್ತಿ. ಗ್ರಾಮಾಂತರ ಅಧ್ಯಕ್ಷರಾಗಿ ಶ್ರೀನಿವಾಸ್, ಗೌರವಾಧ್ಯಕ್ಷರಾಗಿ ಬೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಕುಣಿಗಲ್ ತಾಲೂಕು ಯುವ ಕುರುಬರ ಸಂಘ
ತುಮಕೂರು:  ಕುಣಿಗಲ್ ಯುವ ಕುರುಬರ ಸಂಘ ಅಸ್ತಿತ್ವಕ್ಕೆ ಬಂದಿದೆ. ಗೌರವಾಧ್ಯಕ್ಷರಾಗಿ ಕೆ.ಎಚ್. ಹೊನ್ನೇಗೌಡ, ಅಧ್ಯಕ್ಷರಾಗಿ ಕೆ.ಎಂ. ಸೋಮಶೇಖರ್, ಉಪಾಧ್ಯಕ್ಷರಾಗಿ ಮಂಜುನಾಥ್, ಉಪಾಧ್ಯಕ್ಷರಾಗಿ ಮದನ್ಕುಮಾರ್, ಕಾರ್ಯಾಧ್ಯಕ್ಷರಾಗಿ ಎಸ್.ಬಿ.  ಲೋಕೇಶ್, ಪ್ರಧಾನ ಕಾರ್ಯದರ್ಶಿಯಾಗಿ ಎ.ಜಿ.ಗಿರೀಶ್, ಕಾರ್ಯದರ್ಶಿಯಾಗಿ ಉಮಾಪತಿ, ಸಹ ಕಾರ್ಯದರ್ಶಿಯಾಗಿ ಎಸ್.ಸಿ. ನಾಗರಾಜು, ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಎಂ. ಬಸವರಾಜು, ಸಂಘಟನಾ ಕಾರ್ಯದರ್ಶಿಯಾಗಿ ಎಸ್ಸಿ. ಕುಮಾರ್, ಖಜಾಂಚಿಯಾಗಿ ಕೆ. ಪರಮೇಶ್ವರ ಆಯ್ಕೆಯಾಗಿದ್ದಾರೆ.
ಗುಬ್ಬಿ ಬಾಲಕಿಯರ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ
ತುಮಕೂರು: ಗುಬ್ಬಿ ಟೌನ್ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಈ ವರ್ಷದಿಂದ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಗ್ರಾಮೀಣ ಮಕ್ಕಳು ಉಚಿತವಾಗಿ ಇಂಗ್ಲಿಷ್ ಶಿಕ್ಷಣ ಪಡೆಯುವ ಅವಕಾಶವನ್ನು ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಉಪಯೋಗ ಪಡೆದುಕೊಳ್ಳುವಂತೆ ಬಿಇಓ ಕರೆ ನೀಡಿದ್ದಾರೆ.
23ಕ್ಕೆ ಸಿದ್ದ ಸಮಾಧಿ ಯೋಗ ಶಿಬಿರ
ತುಮಕೂರು: ತುಮಕೂರಿನ ಋಷಿ ಸಂಸ್ಕೃತಿ ವಿದ್ಯಾಕೇಂದ್ರದ ವತಿಯಿಂದ ಜೂ. 23 ರಿಂದ ಉಚಿತ ಸಿದ್ದ ಸಮಾಧಿ ಯೋಗ ಸಪ್ತಾಹ ಏರ್ಪಾಟಾಗಿದೆ. ಎಸ್.ಎಸ್. ಪುರಂ ಮುಖ್ಯರಸ್ತೆಯಲ್ಲಿರುವ ಆರ್.ಎಸ್. ಅಂಡ್ ಆರ್ಎಸ್ ಕಾಂಪ್ಲೆಕ್ಸ್ ನಲ್ಲಿ ಈ ಸಪ್ತಾಹ ಏರ್ಪಾಟಾಗಿದೆ. ಹೆಚ್ಚಿನ ವಿವರಗಳಿಗಾಗಿ 0816-2257333, 9480692346, 9449377774 ಸಂಪರ್ಕಿಸುವಂತೆ ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.