ತುಮಕೂರು

ಅರ್ಜಿ ಆಹ್ವಾನ

Published On :

ಪಾವಗಡ: ಜಿಲ್ಲಾ ಪಂಚಾಯಿತಿ ತುಮಕೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪಾವಗಡ ಇವರ ವತಿಯಿಂದ 2013-14ನೇ ಸಾಲಿಗೆ ಸಾಲ ಸೌಲಭ್ಯ ಹಾಗೂ ಸಹಾಯಧನ ಪಡೆಯಲು ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿರುವುದಾಗಿ ಸಿಡಿಪಿಒ ಉಷಾ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಲ ಸೌಲಭ್ಯ ಸಹಾಯಧನ ಪಡೆಯಲು ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟ ಪಂಗಡ ಸೇರಿದಂತೆ ಯೋಜನೆಯ ಅಡಿಯಲ್ಲಿ ವಿವಿಧ ಕಸುಬು ಮತ್ತು ಚಟವಟಿಕೆಗಳಿಗೆ ಇಲಾಖೆಯ ಸಹಾಯಧನದೊಂದಿಗೆ ಸಾಲ ಸೌಲಭ್ಯ ಪಡೆಯ ಬಯಸುವ ಮಹಿಳೆಯರು ಜೂನ್ 20ರಿಂದ ಅರ್ಜಿಗಳನ್ನು ಕಚೇರಿಯಿಂದ ವಿತರಿಸಲಾಗುತ್ತಿದ್ದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಇದೇ ಜೂನ್ 29ರಂದು ಸಂಜೆ 5ಗಂಟೆಗೆ ಕಚೇರಿಗೆ ಸಲ್ಲಿಸತಕ್ಕದ್ದು. ನಿಗದಿಪಡಿಸಿದ ಕೊನೆ ದಿನದ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ವಿವರಗಳಿಗೆ, ತಾ. ಸಿಡಿಪಿಒ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಹತ್ತಿರ, ಶ್ರೀನಿವಾಸ ನಗರ ಪಾವಗಡ, ಇವರನ್ನು ಸಂಪರ್ಕಿಸಲು ಮನವಿ ಮಾಡಿದ್ದಾರೆ.   

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.