'ಐ.ಡಿ.ಹಳ್ಳಿ, ಕೊಡಿಗೇನಹಳ್ಳಿ ಭಾಗಕ್ಕೆ ರಾಜ್ಯ ರಸ್ತೆ ಸಾರಿಗೆ ಬಸ್'
ಕ.ಪ್ರ. ವಾರ್ತೆ ಮಧುಗಿರಿ ಜೂ.20
ಗ್ರಾಮೀಣ ಪ್ರದೇಶದ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ತಾಲೂಕಿನ ಆಂಧ್ರದ ಗಡಿ ಭಾಗ ಐ.ಡಿ.ಹಳ್ಳಿ ಮತ್ತು ಕೊಡಿಗೇನಹಳ್ಳಿ ಭಾಗದಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಓಡಿಸಲು ಶಾಸಕ ಕೆ.ಎನ್.ರಾಜಣ್ಣ ಚಾಲನೆ ನೀಡಿದರು.
ಈ ಭಾಗ ಬಹುತೇಕ ಆಂಧ್ರದ ಗಡಿ ಭಾಗಕ್ಕೆ ಹೊಂದಿದ್ದು ದೂರದ ನಗರ, ಪಟ್ಟಣ ಪ್ರದೇಶಗಳಿಗೆ ಹೋಗಿ ಬರಲು ಸಾರ್ವಜನಿಕರು ಪರದಾಡುವುದನ್ನು ಮನಗಂಡ ಶಾಸಕ ಕೆ.ಎನ್.ರಾಜಣ್ಣ ರಾಜ್ಯ ರಸ್ತೆ ಸಾರಿಗೆ ಬಸ್ ಓಡಿಸುವಂತೆ ವ್ಯವಸ್ಥಾಪಕರ ಬಳಿ ಚರ್ಚಿಸಿದ ನಂತರ ಪ್ರಥಮವಾಗಿ ಐ.ಡಿ.ಹಳ್ಳಿ ಯಿಂದ ಬೆಂಗಳೂರಿಗೆ ಮತ್ತು ಕೊಡಿಗೇನಹಳ್ಳಿಯಿಂದ ಮಧುಗಿರಿ ಹಾಗೂ ಗೌರಿಬಿದನೂರಿಗೆ ಗ್ರಾಮೀಣ ಸಾರಿಗೆ ಬಸ್ಸುಗಳು ಸಂಚರಿಸಲಿವೆ.
ಈ ವ್ಯವಸ್ಥೆಯಿಂದ ವಿದ್ಯಾರ್ಥಿಗಳಿಗೆ, ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ಮುಂದಿನ ದಿನಗಳಲ್ಲಿ ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಡಿಪೋ ತೆರೆದು ಸಾರಿಗೆ ವ್ಯವಸ್ಥೆ ಸರಿಪಡಿಸುವುದಾಗಿ ರಾಜಣ್ಣ ಭರವಸೆ ನೀಡಿದರು.
ಶಾಸಕರ ಕಚೇರಿ ಆರಂಭ: ಇಲ್ಲಿನ ಮಿನಿ ವಿಧಾನಸೌಧದ ಒಂದು ಕೊಠಡಿಯಲ್ಲಿ ಶಾಸಕ ಕೆ.ಎನ್.ರಾಜಣ್ಣ ಶಾಸಕರ ಕೊಠಡಿ ಉದ್ಘಾಟಿಸಿದರು. ಸಾರ್ವಜನಿಕರಿಂದ ಬರುವ ಅಹವಾಲು ಸ್ವೀಕರಿಸಿ ತಕ್ಷಣ ಅಲ್ಲೇ ಪರಿಹಾರ ಒದಗಿಸಲು ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ರಾಜಣ್ಣ ತಿಳಿಸಿದರು.
ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಯೋಜನೆಗಳ ಚೆಕ್ ವಿತರಿಸಿದರು. ಜಿ.ಪಂ.
ಸದಸ್ಯರಾದ ಶಾಂತಲಾ ರಾಜಣ್ಣ, ಸುಮನ, ತಾ.ಪಂ.ಅಧ್ಯಕ್ಷೆ ಯಶೋಧ ರಾಜಣ್ಣ, ಉಪಾಧ್ಯಕ್ಷೆ ಸಿದ್ಧಗಂಗಾಂಭಿಕೆ, ಮುಖಂಡ ಪಿಸಿಕೆ ರೆಡ್ಡಿ, ರಾಮಣ್ಣ, ಚಂದ್ರಶೇಖರ್, ಗಂಗಣ್ಣ, ಎಂ.ಜಿ.ಶ್ರೀನಿವಾಸಮೂರ್ತಿ, ರಾಜ್ಗೋಪಾಲ್, ಎಂ.ಆರ್.ಜಗನ್ನಾಥ್, ಎಂ.ಎಸ್. ಶಂಕರನಾರಾಯಣ, ದ್ವಾರಕನಾಥ್ ಇನ್ನು ಅನೇಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

